IPL 2023: ಈ ಆವೃತ್ತಿಯಲ್ಲಿ ಕೊಹ್ಲಿ ಚಿತ್ತ ಈ ವಿಶೇಷ ಸಾಧನೆಯ ಮೇಲೆ ಎಂದ ಆಕಾಶ್ ಚೋಪ್ರ
ಐಪಿಎಲ್ 2023ನೇ ಆವೃತ್ತಿಯಲ್ಲಿ ಆರ್‌ಸಿಬಿ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿ ಅಬ್ಬರಿಸಿದ್ದು ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿದ್ದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಅಜೇಯ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 82 ರನ್ ಸಿಡಿಸಿದ್ದರು. ಈ ಭರ್ಜರಿ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್‌ಗಳನ್ನು ಒಳಗೊಂಡಿತ್ತು ಎಂಬುವು ವಿಶೇಷ. ಕೊಹ್ಲಿಗೆ ಅದ್ಭುತವಾಗಿ ಸಾಥ್ ನೀಡಿದ್ದ ನಾಯಕ ಫಾಫ್ ಡು ಪ್ಲೆಸಿಸ್ ಕೂಡ 73 ರನ್ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿಯ ಈ ಅದ್ಭುತ ಪ್ರದರ್ಶನದ ಬಗ್ಗೆ ಮಾತನಾಡಿದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆರೆಂಜ್ ಕ್ಯಾಪ್ ಮೇಲೆ ಚಿತ್ತ ನೆಡುವುದು ಖಚಿತ ಎಂದಿದ್ದಾರೆ.

ಐಪಿಎಲ್‌ನಲ್ಲಿ ಅತ್ಯಂತ ಹೆಚ್ಚು ರನ್ ಬಾರಿಸಿರುವ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಕೇವಲ ಒಂದು ಆವೃತ್ತಿಯಲ್ಲಿ ಮಾತ್ರವೇ ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದರು. 2016ರಲ್ಲಿ ಅಮೋಘ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ 4 ಶತಕಗಳ ಸಹಿತ ದಾಖಲೆಯ 973 ರನ್‌ಗಳಿಸಿ ಆರೆಂಜ್ ಕ್ಯಾಪ್ ಧರಿಸಿದ್ದರು. ವಿರಾಟ್ ಕೊಹ್ಲಿ ಆ ಆವೃತ್ತಿಯಲ್ಲಿ ಗಳಿಸಿದ ರನ್ ಟೂರ್ನಿಯ ಇತಿಹಾಸದಲ್ಲಿ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಆಕಾಶ್ ಚೋಪ್ರ, 2016ರ ಆವೃತ್ತಿಗೂ ಈ ಬಾರಿಯ ಐಪಿಎಲ್ ಆವೃತ್ತಿಗೂ ಹೋಲಿಕೆಯಿದೆ ಎಂದಿದ್ದು ಈ ಬಾರಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ಗಾಗಿ ನಡೆಯುವ ಸ್ಪರ್ಧೆಯಲ್ಲಿ ಮುಂದುವರಿಯಲಿದ್ದಾರೆ ಎಂದಿದ್ದಾರೆ. "ವಿರಾಟ್ ಕೊಹ್ಲಿಯ ಪ್ರದರ್ಶನ ನೋಡಿದ ನಂತರ ಅವರು ಈ ಆವೃತ್ತಿಯಲ್ಲಿ ಆರೆಂಜ್ ಕ್ಯಾಪ್‌ಗಾಗಿ ನಡೆಯುವ ಸ್ಪರ್ಧೆಯಲ್ಲಿ ಮುಂದುವರಿಯಲಿದ್ದಾರೆ. ಇದು 2016 ಹಾಗೂ ಈ ಬಾರಿಯ ಆವೃತ್ತಿಯಲ್ಲಿ ಕೆಲ ಹೋಲಿಕೆಗಳನ್ನು ಹೊಂದಿದೆ. 2016ರ ಆವೃತ್ತಿಗೂ ಮುನ್ನ ವಿರಾಟ್ ಕೊಹ್ಲಿ ಅಂತಾಋಆಷ್ಟ್ರೀಯ ಕ್ರಿಕೆಟ್‌ನಲ್ಲಿ ಅದ್ಭುತವಾದ ಫಾರ್ಮ್‌ನಲ್ಲಿದ್ದರು. ಈ ಬಾರಿಯೂ ಟೂರ್ನಿಗೂ ಮುನ್ನವೂ ಕೊಹ್ಲಿ ಫಾರ್ಮ್ ಅತ್ಯುನ್ನತ ಮಟ್ಟದಲ್ಲಿದೆ" ಎಂದಿದ್ದಾರೆ ಆಕಾಶ್ ಚೋಪ್ರ.
IPL 2023: ಅಪಘಾತದ ನಂತರ ಮೊದಲ ಬಾರಿಗೆ ಮೈದಾನಕ್ಕೆ ಬರುತ್ತಿದ್ದಾರೆ ರಿಷಬ್ ಪಂತ್
ಈ ಬಾರಿಯ ಐಪಿಎಲ್ ಟೂರ್ನಿಗೂ ಮುನ್ನ ಕೊಹ್ಲಿಯ ಫಾರ್ಮ್ ಅದ್ಭುತವಾಗಿತ್ತು. ವಿರಾಟ್ ಕೊಹ್ಲಿ ಕಳೆದ ಮೂರು ವರ್ಷಗಳಲ್ಲಿ ಅನುಭವಿಸಿದ ಕಳಪೆ ಫಾರ್ಮ್‌ನಿಂದ ವಾಪಾಸ್ ಬಂದಿದ್ದು ಕಳೆದ ಹತ್ತು ತಿಂಗಳಲ್ಲಿ ಸ್ಥಿರ ಪ್ರದರ್ಶನ ನೀಡಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆಗಸ್ಟ್ ತಿಂಗಳಿನಿಂದ ವಿರಾಟ್ ಕೊಹ್ಲಿ ಫಾರ್ಮ್ ಅದ್ಭುತವಾಗಿದ್ದು ಎಲ್ಲಾ ಮಾದರಿಯಲ್ಲಿಯೂ ಶತಕವನ್ನು ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರ್‌ಸಿಬಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಆರಂಭವನ್ನು ಪಡೆದ ಬಳಿಕ ಇದೀಗ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಆಡಿದ್ದು ಕೆಕೆಆರ್ ವಿರುದ್ಧ ಕೊಲ್ಕತ್ತಾದಲ್ಲಿ ಮುಂದಿನ ಪಂದ್ಯವನ್ನು ಆಡಲಿದೆ. ಕೆಕೆಆರ್ ತಂಡ ಮೊದಲ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿದ್ದು ಗೆಲುವಿಗಾಗಿ ಹವಣಿಸುತ್ತಿದೆ.












Click it and Unblock the Notifications