IPL 2023: RCB ಸೋಲಿಗೆ ಈ ಎರಡು ತಂಡಗಳು ಪ್ರಾರ್ಥಿಸುತ್ತಿವೆ: ಆಕಾಶ್ ಚೋಪ್ರ ಹೇಳಿಕೆ
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ಪ್ಲೇ ಆಫ್ ಹಂತದ ಮುಕ್ತಾಯಕ್ಕೆ ಇನ್ನು ಕೇವಲ 6 ಪಂದ್ಯಗಳು ಮಾತ್ರವೇ ಬಾಕಿಯಿದೆ. ಆದರೆ ಈವರೆಗೆ ಕೇವಲ ಒಂದು ತಂಡ ಮಾತ್ರವೇ ಪ್ಲೇಆಫ್‌ಗೆ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಹೀಗಾಗಿ ಪ್ರತಿಯೊಂದು ಪಂದ್ಯ ಕೂಡ ಬಹಳ ನಿರ್ಣಾಯಕವಾಗಿದ್ದು ಆಯಾ ಪಂದ್ಯಗಳ ಫಲಿತಾಂಶ ಉಳಿದ ತಂಡಗಳ ಮೇಲೂ ನೇರವಾಗಿ ಪರಿಣಾಮ ಬೀರುವಂತಾ ಸ್ಥಿತಿಯಿದೆ.
ಈ ಸಂದರ್ಭದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದು ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ಸೋಲಲಿ ಎಂದು ಎರಡು ತಂಡಗಳು ಪ್ರಾರ್ಥನೆ ಸಲ್ಲಿಸುತ್ತಿವೆ ಎಂದಿದ್ದಾರೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ತಂಡ ಸೋಲು ಅನುಭವಿಸಿದರೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್‌ಗೆ ಪ್ರವೇಶ ಪಡೆಯುವುದು ಖಚಿತವಾಗಲಿದೆ. ಈ ಹಿನ್ನೆಲೆಯಲ್ಲಿ ಆಕಾಶ್ ಚೋಪ್ರ ಈ ಹೇಳಿಕೆ ನೀಡಿದ್ದಾರೆ.

ಆಕಾಶ್ ಚೋಪ್ರ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ್ದು ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಎರಡು ತಂಡಗಳು ಕೂಡ ಈ ಪಂದ್ಯದಲಲ್ಇ ಆರ್‌ಸಿಬಿ ಸೋಲಿಗಾಗಿ ಪ್ರಾರ್ಥಿಸುತ್ತಿವೆ ಎಂದಿದ್ದಾರೆ. ಯಾಕೆಂದರೆ ಸನ್‌ರೈಸರ್ಸ್ ವಿರುದ್ಧ ಆರ್‌ಸಿಬಿ ಸೋಲು ಅನುಭವಿಸಿದರೆ ಈ ಎರಡು ತಂಡಗಳು ನೇರವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆಯಲಿದೆ ಎಂದಿದ್ದಾರೆ ಆಕಾಶ್ ಚೋಪ್ರ.
ಆರ್‌ಸಿಬಿ ತಮಡ ಈವರೆಗೆ 12 ಪಂದ್ಯಗಳನ್ನು ಆಡಿದ್ದು 12 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಪ್ಲೇಆಫ್‌ಗೆ ಪ್ರವೇಶ ಪಡೆಯಬೇಕಿದ್ದರೆ ಮುಂದಿನ ಎರಡು ಪಂದ್ಯಗಳನ್ನು ಕೂಡ ಗೆಲ್ಲುವುದು ಅನಿವಾರ್ಯ. ಈ ಹಿನ್ಮೆಲೆಯಲ್ಲಿ ಈ ಪಂದ್ಯ ಆರ್‌ಸಿಬಿ ತಂಡಕ್ಕೆ ಅತ್ಯಂತ ನಿರ್ಣಾಯಕವಾಗಿದೆ. ಈ ಮೂಲಕ ಅಗ್ರ ನಾಲ್ಕರಲ್ಲಿ ತನ್ನ ಸ್ಥಾನ ಖಚಿತಪಡಿಸುವ ಪ್ರಯತ್ನ ನಡೆಸಲಿದೆ.
ಇನ್ನು ಈ ಪಂದ್ಯದಲ್ಲಿ ಆರ್‌ಸಿಬಿ ಯಾವ ರೀತಿಯ ರಣತಂತ್ರದೊಂದಿಗೆ ಕಣಕ್ಕಿಳಿಯಬೇಕು ಎಂಬುದರ ವಿಚಾರವಾಗಿ ಆಕಾಶ್ ಚೋಪ್ರ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳು ಲೆಗ್‌ಸ್ಪಿನ್ನರ್‌ಗಳ ವಿರುದ್ಧ ಹೆಚ್ಚಿನ ಮೇಲುಗೈ ಸಾಧಿಸಲು ಸಾಧ್ಯವಾಗದಿರುವ ಕಾರಣ ಬಲಿಷ್ಠ ಸ್ಪಿನ್ ವಿಭಾಗದೊಂದಿಗೆ ಕಣಕ್ಕಿಳಿಯಬೇಕು ಎಂದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್
ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್












Click it and Unblock the Notifications