GT vs DC: 23 ರನ್‌ಗೆ 5 ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿಗೆ ಅಮನ್ ಖಾನ್ ಆಸರೆ; ಗುಜರಾತ್‌ಗೆ ಸುಲಭ ಗುರಿ

IPL 2023: Aman Khans half century saved Delhi Capitals and helped to give 131 runs target to Gujarat titans

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 44ನೇ ಪಂದ್ಯ ಇಂದು ( ಮೇ 2 ) ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಹೀನಾಯ ಆರಂಭವನ್ನು ಪಡೆದುಕೊಂಡಿತು. 5 ಓವರ್‌ಗಳಲ್ಲಿಯೇ ಕೇವಲ 23 ರನ್‌ಗಳಿಗೆ ತನ್ನ 5 ವಿಕೆಟ್‌ಗಳನ್ನು ಕಳೆದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಅಮನ್ ಖಾನ್ ಹಾಗೂ ಅಕ್ಷರ್ ಪಟೇಲ್ ನೆಲಕಚ್ಚಿ ನಿಂತು ಆಡಿದ ಕಾರಣ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿ ತನ್ನ ಎದುರಾಳಿ ತಂಡ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 131 ರನ್‌ಗಳ ಗುರಿಯನ್ನು ನೀಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ಆಟಗಾರರಾಗಿ ಫಿಲಿಪ್ ಸಾಲ್ಟ್ ಹಾಗೂ ನಾಯಕ ಡೇವಿಡ್ ವಾರ್ನರ್ ಕಣಕ್ಕಿಳಿದರು. ಈ ಪೈಕಿ ಫಿಲಿಪ್ ಸಾಲ್ಟ್ ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಔಟ್ ಆದರು. ಇದರ ಬೆನ್ನಲ್ಲೇ ಡೇವಿಡ್ ವಾರ್ನರ್ 2 ರನ್ ಬಾರಿಸಿ ರನ್ ಔಟ್ ಆದರು. ಇನ್ನುಳಿದಂತೆ ಪ್ರಿಯಾಮ್ ಗಾರ್ಗ್ 10, ರಿಲೇ ರೊಸ್ಸೋ 8 ಹಾಗೂ ಮನೀಶ್ ಪಾಂಡೆ ಕೇವಲ 1 ರನ್ ಗಳಿಸಿದರು.

ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 5 ಓವರ್‌ಗಳಲ್ಲಿ ಕೇವಲ 23 ರನ್‌ಗಳಿಗೆ ತನ್ನ 5 ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿತು. ಈ ಸಂದರ್ಭದಲ್ಲಿ ಆರನೇ ವಿಕೆಟ್‌ಗೆ ಒಂದಾದ ಅಕ್ಷರ್ ಪಟೇಲ್ ಹಾಗೂ ಅಮನ್ ಖಾನ್ ಆಸರೆಯಾದರು. ಅಕ್ಷರ್ ಪಟೇಲ್ 30 ಎಸೆತಗಳಲ್ಲಿ 27 ರನ್ ಗಳಿಸಿದರೆ, ಅಮನ್ ಖಾನ್ 44 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 51 ರನ್ ಬಾರಿಸಿದರು.

ರಿಪಲ್ ಪಟೇಲ್ ಸಹ 13 ಎಸೆತಗಳಲ್ಲಿ 21 ರನ್ ಗಳಿಸಿ ಅಗತ್ಯವಿದ್ದ ಕೊಡುಗೆಯನ್ನು ನೀಡಿದರು. ಇನ್ನುಳಿದಂತೆ ಅನ್ರಿಚ್ ನಾರ್ಕಿಯಾ ಅಜೇಯ 3 ಹಾಗೂ ಕುಲ್‌ದೀಪ್ ಯಾದವ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದುಕೊಂಡರು. ಮೊದಲ 5 ಓವರ್‌ಗಳಲ್ಲಿ ಕೇವಲ 23 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಅಮನ್ ಖಾನ್, ಅಕ್ಷರ್ ಪಟೇಲ್ ಹಾಗೂ ರಿಪಲ್ ಪಟೇಲ್ ಕೈಹಿಡಿದ ಕಾರಣದಿಂದ ಕೊನೆಯ 15 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿತು.

ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಶಮಿ 4 ವಿಕೆಟ್, ಮೋಹಿತ್ ಶರ್ಮಾ 2 ವಿಕೆಟ್ ಹಾಗೂ ರಶೀದ್ ಖಾನ್ ಒಂದು ವಿಕೆಟ್ ಪಡೆದರು.

ಪಂದ್ಯದ ಆಡುವ ಬಳಗಗಳು:

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ರಿಲೀ ರೊಸೊವ್, ಪ್ರಿಯಮ್ ಗಾರ್ಗ್, ಅಕ್ಸರ್ ಪಟೇಲ್, ರಿಪಾಲ್ ಪಟೇಲ್, ಅಮನ್ ಹಕೀಮ್ ಖಾನ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+