IPL 2023: ಅದ್ದೂರಿ ಸಮಾರೋಪ ಸಮಾರಂಭಕ್ಕೆ ಕ್ಷಣಗಣನೆ: ಮನರಂಜಿಸಲಿದ್ದಾರೆ ಖ್ಯಾತ ತಾರೆಯರು
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಫೈನಲ್ ಪಂದ್ಯ ಇಂದು(ಭಾನುವಾರ) ನಡೆಯಲಿದ್ದು ಕೆಲವೇ ಕ್ಷಣಗಳು ಬಾಕಿಯಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಈ ಫೈನಲ್ ಪಂದ್ಯಕ್ಕೂ ಮುನ್ನ ಬಿಸಿಸಿಐ ಐಪಿಎಲ್ 16ನೇ ಆವೃತ್ತಿಯನ್ನು ಅದ್ಧೂರಿ ಸಮಾರೋಪ ಸಮಾರಂಭವನ್ನು ಆಯೋಜಿಸಿದ್ದು ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ದೊರೆಯಲಿದೆ.
ಕುತೂಹಲಕಾರಿ ಸಂಗತಿಯೆಂದರೆ ಈ ಬಾರಿಯ ಉದ್ಘಾಟನಾ ಪಂದ್ಯದಲ್ಲಿ ಕೂಡ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಉದ್ಘಾಟನಾ ಸಮಾರಂಭಕ್ಕೂ ಮುನ್ನ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಖ್ಯಾತ ಹಿನ್ನೆಲೆ ಗಾಯಕ ಅರಿಜಿತ್ ಸಿಂಗ್, ನಟಿಯರಾದ ತಮನ್ನಾ ಭಾಟಿಯಾ ಹಾಗೂ ರಶ್ಮಿಕಾ ಮಂದಣ್ಣ ಮನರಂಜನಾ ಕಾರ್ಯಕ್ರಮ ನೀಡಿದ್ದರು. ಇದೀಗ ಸಮಾರೋಪ ಸಮಾರಂಭದಲ್ಲಿ ಯಾವೆಲ್ಲಾ ತಾರೆಯರು ಕಾರ್ಯಕ್ರಮ ನೀಡಲಿದ್ದಾರೆ ಎಂಬುದು ಬಹಿರಂಗವಾಗಿದೆ.

ಯಾವೆಲ್ಲಾ ಸೆಲೆಬ್ರಿಟಿಗಳು ಮನರಂಜಿಸಲಿದ್ದಾರೆ?
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಸಿನಿಮಾ ಹಾಗೂ ಸಂಗೀತ ಕ್ಷೇತ್ರದ ಕೆಲ ಖ್ಯಾತನಾಮರು ಕ್ರಿಕೆಟ್ ಪ್ರೇಮಿಗಳನ್ನು ಮನರಂಜಿಸಲಿದ್ದಾರೆ. ರ‍್ಯಾಪರ್ ಡಿವೈನ್, ಸಂಗೀತ ನಿರ್ದೇಶಕ ನ್ಯೂಕ್ಲೆಯ, ಕೆನಡಾ ಮೂಲದ ಹಾಡುಗಾರ್ತಿ ಜೋನಿಟಾ ಗಾಂಧಿ ಮತ್ತು ಬ್ರಿಟನ್ ಹಾಡುಗಾರ ಆಶ್ ಕಿಂಗ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ನಟ ರಣ್ವೀರ್ ಸಿಂಗ್ ಹಾಗೂ ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹ್ಮಾನ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗುಯಾಗಲಿದ್ದಾರೆ.
ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಈ ಸಮಾರೋಪ ಸಮಾರಂಭವನ್ನು ಪಂದ್ಯದ ಟಾಸ್ ಅವಧಿಗಿಂತ ಒಂದು ಗಂಟೆ ಮುನ್ನ ಆಯೋಜಿಸಲಾಗಿದ್ದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭದ ಕಾರ್ಯಕ್ರಮಗಳು ಆರಂಭವಾಗಲಿದೆ. ಪಂದ್ಯ ನಡೆಯುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿಯೇ ಈ ಕಾರ್ಯಕ್ರಮ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಜಿಯೋ ಟಿವಿಯಲ್ಲಿ ಈ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಬಹುದು.
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.












Click it and Unblock the Notifications