CSK vs DC: ಡೆಲ್ಲಿ ಕ್ಯಾಪಿಟಲ್ಸ್‌ಗೆ 168 ರನ್‌ಗಳ ಗುರಿ ನೀಡಿದ ಚೆನ್ನೈ ಸೂಪರ್ ಕಿಂಗ್ಸ್

IPL 2023: Chennai Super Kings sets the target of 168 runs to Delhi Capitals

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 55ನೇ ಪಂದ್ಯ ಇಂದು ( ಮೇ 10 ) ನಡೆಯುತ್ತಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯ ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿದ್ದು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 168 ರನ್‌ಗಳ ಗುರಿಯನ್ನು ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ರುತುರಾಜ್ ಗಾಯಕ್ವಾಡ್ ಹಾಗೂ ಡಿವಾನ್ ಕಾನ್ವೆ ಆರಂಭಿಕರಾಗಿ ಕಣಕ್ಕಿಳಿದರು. ರುತುರಾಜ್ ಗಾಯಕ್ವಾಡ್ 18 ಎಸೆತಗಳಲ್ಲಿ 24 ರನ್ ಗಳಿಸಿದರೆ, ಡಿವಾನ್ ಕಾನ್ವೆ 13 ಎಸೆತಗಳಲ್ಲಿ 10 ರನ್ ಗಳಿಸಿದರು. ಇನ್ನುಳಿದಂತೆ ಅಜಿಂಕ್ಯಾ ರಹಾನೆ 20 ಎಸೆತಗಳಲ್ಲಿ 21 ರನ್, ಮೊಯಿನ್ ಅಲಿ 12 ಎಸೆತಗಳಲ್ಲಿ 7 ರನ್, ಶಿವಮ್ ದುಬೆ 12 ಎಸೆತಗಳಲ್ಲಿ 25 ರನ್, ಅಂಬಾಟಿ ರಾಯುಡು 17 ಎಸೆತಗಳಲ್ಲಿ 23 ರನ್, ರವೀಂದ್ರ ಜಡೇಜಾ 16 ಎಸೆತಗಳಲ್ಲಿ 21 ರನ್, ಎಂ ಎಸ್ ಧೋನಿ 9 ಎಸೆತಗಳಲ್ಲಿ 20 ರನ್, ದೀಪಕ್ ಚಹರ್ 2 ಎಸೆತಗಳಲ್ಲಿ ಅಜೇಯ 1 ರನ್ ಹಾಗೂ ತುಷಾರ್ ದೇಶಪಾಂಡೆ ಒಂದು ಎಸೆತವನ್ನು ಎದುರಿಸಿ ಯಾವುದೆ ರನ್ ಗಳಿಸದೇ ಅಜೇಯರಾಗಿ ಉಳಿದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಮಿಚೆಲ್ ಮಾರ್ಷ್ 3 ವಿಕೆಟ್, ಅಕ್ಷರ್ ಪಟೇಲ್ 2 ವಿಕೆಟ್, ಕುಲ್‌ದೀಪ್ ಯಾದವ್, ಲಲಿತ್ ಯಾದವ್ ಹಾಗೂ ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್ ಹಾಗೂ ನಾಯಕ ), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್(ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೋಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+