IPL 2023: ಚೆನೈ vs ಕೊಲ್ಕತ್ತಾ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ತಂಡ ಯಾವುದು?
ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಏಪ್ರಿಲ್ 23) ಎರಡು ಪಂದ್ಯಗಳು ಜರುಗುತ್ತಿದ್ದು, ಸದ್ಯ ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೂರ್ನಿಯ 33ನೇ ಪಂದ್ಯವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿದ್ದು, 4 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಅತ್ತ 6 ಪಂದ್ಯಗಳನ್ನಾಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ 2 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಸ್ಥಾನದಲ್ಲಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ಹಿನ್ನಡೆ ಅನುಭವಿಸಿದೆ.
ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಪ್ರಶ್ನೆ ಹಾಗೂ ಕುತೂಹಲ ಹುಟ್ಟಿಕೊಂಡಿದ್ದು, ಎರಡೂ ತಂಡಗಳ ಹಳೆಯ ಮುಖಾಮುಖಿ ಪಂದ್ಯಗಳ ಬಗ್ಗೆ ಚರ್ಚೆಗಳು ಶುರುವಾಗಿವೆ. ಹಾಗಿದ್ದರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಎರಡೂ ತಂಡಗಳ ನಡುವೆ ಒಟ್ಟು ಎಷ್ಟು ಪಂದ್ಯಗಳು ಜರುಗಿವೆ, ಈ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬ ಮಾಹಿತಿ ಕೆಳಕಂಡಂತಿದೆ..

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 27 ಪಂದ್ಯಗಳು ನಡೆದಿವೆ. ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 17 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೊಲ್ಕತ್ತಾ ನೈಟರ್ ರೈಡರ್ಸ್ 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಎರಡು ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.
ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡೂ ತಂಡಗಳು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 6 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಈ ಎಲ್ಲಾ ಪಂದ್ಯಗಳಲ್ಲಿಯೂ ಸಹ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಕಂಡಿತ್ತು.
ಇತ್ತಂಡಗಳು ಪರಸ್ಪರ ಮುಖಾಮುಖಿಯಾದಾಗ ಚೆನ್ನೈ ಸೂಪರ್ ಕಿಂಗ್ಸ್ ದಾಖಲಿಸಿರುವ ಗರಿಷ್ಠ ರನ್ ಎಂದರೆ 220 ಆಗಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ 202 ಗರಿಷ್ಠ ರನ್ ದಾಖಲಿಸಿದೆ. ಇನ್ನು ಕಡಿಮೆ ರನ್ ಮೊತ್ತದ ವಿಷಯಕ್ಕೆ ಬಂದರೆ ಚೆನ್ನೈ ಸೂಪರ್ ಕಿಂಗ್ಸ್ ದಾಖಲಿಸಿರುವ ಕನಿಷ್ಠ ರನ್ ಎಂದರೆ 114 ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಕಲೆ ಹಾಕಿರುವ ಕನಿಷ್ಠ ರನ್ 104.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications