IPL 2023: ಅಭಿಮಾನಿಗಳಿಗೆ ಕೈ ಮುಗಿದು ನಮಿಸಿದ ಎಂಎಸ್ ಧೋನಿ: ವಿಡಿಯೋ ವೈರಲ್
ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್‌ನ ಮೊದಲ ಪಂದ್ಯಕ್ಕಾಗಿ ಅಂತಿಮ ಸಿದ್ಧತೆ ಮಾಡಿಕೊಂಡಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ಮಾಡಿದ ಬಳಿಕ, ಮೊದಲನೇ ಪಂದ್ಯಕ್ಕಾಗಿ ಅಹಮದಾಬಾದ್‌ಗೆ ತೆರಳಿದೆ. ನರೇಂದ್ರಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಆಡಲಿದೆ.
ಅಹಮದಾಬಾದ್‌ಗೆ ತೆರಳುವ ಮುನ್ನ ಸಿಎಸ್‌ಕೆ ತಂಡ ಚೆನ್ನೈನಲ್ಲಿ ಕಠಿಣ ಅಭ್ಯಾಸ ನಡೆಸಿದೆ. ಮೂರು ವರ್ಷಗಳ ನಂತರ ಎಂಎಸ್ ಧೋನಿ ತವರಿನ ಅಂಗಳದಲ್ಲಿ ಪಂದ್ಯವನ್ನು ಆಡುತ್ತಿರುವುದು ಅಭಿಮಾನಿಗಳ ಸಂತಸವನ್ನು ಹೆಚ್ಚಿಸಿದೆ. ಚಿದಂಬರಂ ಕ್ರೀಡಾಂಗಣದಲ್ಲಿ ಧೋನಿ ಅಭ್ಯಾಸ ಮಾಡುವುದನ್ನು ನೋಡಲು ಅಭಿಮಾನಿಗಳು ಅವಕಾಶ ನೀಡಲಾಗಿತ್ತು. ಈ ವೇಳೆ ಸಾವಿರಾರು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಧೋನಿಗೆ ಬೆಂಬಲ ನೀಡಿದರು.

ಸಾವಿರಾರು ಪ್ರೇಕ್ಷಕರು ಧೋನಿ ಮೈದಾನಕ್ಕೆ ಬರುತ್ತಿದ್ದಂತೆ ಹರ್ಷೋದ್ಘಾರ ವ್ಯಕ್ತಪಡಿಸಿದರು. ಜನರ ಅಭೂತಪೂರ್ವ ಬೆಂಬಲ ಕಂಡು ಧೋನಿ ಕೂಡ ಸಂತಸಗೊಂಡರು. ಅಭಿಮಾನಿಗಳಿಗೆ ಸ್ಟಾಂಡ್‌ನಿಂದ ಕೈ ಮುಗಿಯುವ ಮೂಲಕ ಧನ್ಯವಾದ ತಿಳಿಸಿದರು. ನಂತರ ಅಭ್ಯಾಸ ಪಂದ್ಯದಲ್ಲಿ ಬೌಂಡರಿ ಮತ್ತು ಸಿಕ್ಸರ್ ಸಿಡಿಸುವ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು. ರವೀಂದ್ರ ಜಡೇಜಾ, ಬೆನ್ ಸ್ಟೋಕ್ಸ್ ಸೇರಿದಂತೆ ಪ್ರಮುಖ ಆಟಗಾರರು ಕೂಡ ಅಭ್ಯಾಸದಲ್ಲಿ ಪಾಲ್ಗೊಂಡರು.
MS Dhoni to fans : 🙏😍 !! @MSDhoni #IPL2023 #WhistlePodu pic.twitter.com/GoziuvOiEo
— DHONI Era™ 🤩 (@TheDhoniEra) March 28, 2023
ಧೋನಿಗೆ ಇದು ಕೊನೆಯ ಐಪಿಎಲ್?
41 ವರ್ಷ ವಯಸ್ಸಿನವರಾದ ಧೋನಿಗೆ ಇದು ಕೊನೆಯ ಐಪಿಎಲ್ ಎಂದು ಹೇಳಲಾಗಿದೆ. ತವರಿನಲ್ಲಿ ಪ್ರೇಕ್ಷಕರ ಮುಂದೆ ಧೋನಿ ವಿದಾಯ ಹೇಳಲು ಸಿದ್ಧವಾಗಿದ್ದಾರೆ ಎನ್ನಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯಾಗಲಿ, ಧೋನಿಯಾಗಲಿ ಈ ಬಗ್ಗೆ ಎಲ್ಲಿಯೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಪಂದ್ಯಾವಳಿಯ ಕೊನೆಯಲ್ಲಿ ಧೋನಿ ತಮ್ಮ ನಿರ್ಧಾರವನ್ನು ತಿಳಿಸಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

ಕಳೆದ ಆವೃತ್ತಿಯಲ್ಲಿ ನಾಯಕತ್ವವನ್ನು ತ್ಯಜಿಸಿದ್ದ ಧೋನಿ ರವೀಂದ್ರ ಜಡೇಜಾಗೆ ನಾಯಕತ್ವ ನೀಡಲಾಗಿತ್ತು. ಆದರೆ, ರವೀಂದ್ರ ಜಡೇಜಾ ಕೇವಲ 8 ಪಂದ್ಯಗಳಲ್ಲಿ ನಾಯಕರಾಗಿದ್ದರು, ಸಿಎಸ್‌ಕೆ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾದ ಬಳಿಕ ಅವರು ನಾಯಕತ್ವದಿಂದ ಕೆಳಗಿಳಿದಿದ್ದರು. ಧೋನಿ ಮತ್ತೆ ನಾಯಕತ್ವ ವಹಿಸಿಕೊಂಡರೂ, ತಂಡದ ಪ್ರದರ್ಶನ ಸುಧಾರಿಸಲಿಲ್ಲ, 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದು 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಉತ್ತಮ ಪ್ರದರ್ಶನ ನೀಡುವ ವಿಶ್ವಾಸ
ಐಪಿಎಲ್ 2023ರ ಮಿನಿ ಹರಾಜಿನಲ್ಲಿ ಸಿಎಸ್‌ಕೆ ತಂಡ ಹಲವು ಆಟಗಾರರನ್ನು ಖರೀದಿಸುವ ಮೂಲಕ ಕೆಲವು ಬದಲಾವಣೆ ಮಾಡಿದೆ. ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್‌ರನ್ನು 16.50 ಕೋಟಿ ರುಪಾಯಿ ನೀಡಿ ಖರೀದಿ ಮಾಡಿತ್ತು. ಇದರೆ ಜೊತೆಗೆ ಹಲವು ಯುವ ಆಟಗಾರರನ್ನು ಖರೀದಿ ಮಾಡಿದೆ. ಧೋನಿ ಬಳಿಕ ಬೆನ್ ಸ್ಟೋಕ್ಸ್ ತಂಡವನ್ನು ಮುನ್ನಡೆಸಬಹುದು ಎಂದು ಹೇಳಲಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮತೀಶ ಚೌಧರಿ, ಮತೀಶ ಚೌಧರಿ ಸಿಂಗ್ , ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಕೈಲ್ ಜೇಮಿಸನ್, ಅಜಯ್ ಮಂಡಲ್, ಭಗತ್ ವರ್ಮಾ.












Click it and Unblock the Notifications