CSK vs GT: ಪಿಚ್ ವರದಿ, ಸಂಭಾವ್ಯ ಪ್ಲೇಯಿಂಗ್ 11, ಹವಾಮಾನ ವರದಿ & ಲೈವ್ ಸ್ಕೋರ್

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ನಿನ್ನೆ (ಮೇ 21 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತ ಮುಕ್ತಾಯವಾಗಿದೆ.
ಈ ಮೂಲಕ ಪ್ಲೇಆಫ್ ಕೊನೆಯ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಮುಂಬೈ ಇಂಡಿಯನ್ಸ್ ಅವಕಾಶವನ್ನು ಗಿಟ್ಟಿಸಿಕೊಂಡಿದೆ. ಹೀಗೆ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಮುಂಬೈ ಇಂಡಿಯನ್ಸ್ ಪ್ಲೇಆಫ್ ಸೀಟ್ ಹಿಡಿದಿದೆ.
ಈ ಪೈಕಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಪಂದ್ಯವನ್ನು ಆಡಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿವೆ.
ಹೌದು, 20 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದು, 17 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಸ್ಥಾನದಲ್ಲಿದೆ. ಹೀಗೆ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಆಡಲಿವೆ. ಈ ಪಂದ್ಯ ನಾಳೆ ( ಮೇ 23 ) ಚೆನ್ನೈನ ಎಂ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಪಿಚ್ ವರದಿ: ಚೆನ್ನೈನ ಎಂ ಎ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬೌಲರ್ ಹಾಗೂ ಬ್ಯಾಟ್ಸ್‌ಮನ್‌ಗಳಿಬ್ಬರಿಗೂ ಹೊಂದಿಕೊಳ್ಳುವಂತಹ ಪಿಚ್ ಆಗಿದೆ. ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಹೊಡೆತಗಳನ್ನು ಬಾರಿಸಲು ಈ ಪಿಚ್ ನೆರವಾಗಲಿದ್ದು, ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಇನ್ನು ಟಾಸ್ ಗೆಲ್ಲಲಿರುವ ತಂಡ ಚೇಸಿಂಗ್ ಆಯ್ದುಕೊಳ್ಳಲಿದೆ.
ಸಂಭಾವ್ಯ ಆಡುವ ಬಳಗ:
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ದಸುನ್ ಶನಕ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಯಶ್ ದಯಾಳ್, ವಿಜಯ್ ಶಂಕರ್
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಣ
ಹವಾಮಾನ ವರದಿ: ಚೆನ್ನೈ ನಗರದಲ್ಲಿ 31ರಿಂದ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, ಮಳೆಯಾಗುವುದಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ.
ನೇರಪ್ರಸಾರ: ಈ ಪಂದ್ಯವನ್ನು ಜಿಯೋ ಸಿನಿಮಾ ವೆಬ್‌ಸೈಟ್ ಹಾಗೂ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿಯೂ ಈ ಪಂದ್ಯದ ಪಂದ್ಯದ ನೇರಪ್ರಸಾರ ಲಭ್ಯವಿದೆ.












Click it and Unblock the Notifications