IPL 2023: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಡೇವಿಡ್ ವಾರ್ನರ್‌ಗೂ ಬಿತ್ತು ದಂಡದ ಬರೆ!

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಲ್ಲಿ ಎರಡನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಗೆಲುವಿನ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್‌ಗೆ ದಂಡದ ಬರೆಬಿದ್ದಿದೆ. ನಿಧಾನಗತಿಯ ಬೌಲಿಂಗ್‌ನ ಕಾರಣಕ್ಕಾಗಿ ಡೇವಿಡ್ ವಾರ್ನರ್ 12 ಲಕ್ಷ ರೂಪಾಯಿಗಳ ದಂಡಕ್ಕೆ ಗುರಿಯಾಗಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಸತತ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ವಿಭಾಗದಿಂದ ನಿರೀಕ್ಷಿತ ಪ್ರದರ್ಶನ ಬಾರದಿದ್ದರೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿತು. ಇದರ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 7 ರನ್‌ಗಳ ಅಂತರದ ಗೆಲುವು ಸಾಧಿಸಿದೆ.

IPL 2023: DC captain David Warner fined Rs. 12 Lakh after 2nd win against SRH

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಆರಂಭದಲ್ಲಿ ಬ್ಯಾಟಿಂಗ್ ಆರಿಸಿದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ವಿಭಾಗ ನೀಡಿದ ನೀರಸ ಪ್ರದರ್ಶನದಿಂದಾಗಿ ಡಿಸಿ ನಾಯಕನ ನಿರ್ಧಾರ ತಪ್ಪಾಗಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಹೈದರಾಬಾದ್‌ನ ಪಿಚ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ದಾಂಡಿಗರು ಕೂಡ ರನ್‌ಗಳಿಸಲು ವಿಫಲವಾದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಹತ್ವದ ಗೆಲುವು ಸಾಧಿಸಿದೆ.

SRH vs DC: ಕೊನೆಯ ಓವರ್‌ನಲ್ಲಿ ಪಂದ್ಯ ಗೆಲ್ಲಿಸಿದ ಭಾರತೀಯ: ವೇಗಿಯ ಪ್ರದರ್ಶನಕ್ಕೆ ವಾರ್ನರ್ ಶ್ಲಾಘನೆ

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಒಂದು ಪ್ರಮುಖ ಬದಲಾವಣೆ ಮಾಡಿಕೊಂಡಿತು. ಪೃಥ್ವಿ ಶಾ ಅವರನ್ನು ಹೊರಗಿಟ್ಟು ಅವರ ಬದಲಿಗೆ ಫಿಲಿಪ್ ಸಾಲ್ಟ್ ಆರಂಭಿಕನಾಗಿ ಡೇವಿಡ್ ವಾರ್ನರ್ ಜೊತೆಗೆ ಕಣಕ್ಕಿಳಿದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಜೋಡಿ ಈ ಪಂದ್ಯದಲ್ಲಿಯೂ ವೈಫಲ್ಯ ಅನುಭವಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಮನೀಶ್ ಪಾಂಡೆ ಹಾಗೂ ಅಕ್ಷರ್ ಪಟೇಲ್ ತಲಾ 34 ರನ್‌ಗಳಿಸಿದ್ದು ಅತಿ ಹೆಚ್ಚಿನ ಸ್ಕೋರ್ ಎನಿಸಿತು.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ಪರವಾಗಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಹಾಗೂ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ಭ ಅದ್ಭುತವಾಗಿ ಬೌಲಿಂಗ್ ದಾಳಿ ಸಂಘಟಿಸಿದರು. ಭುವಿ ನಾಲ್ಕು ಓವರ್‌ಗಳಲ್ಲಿ ಕೇವಲ 11 ರನ್‌ 2 ವಿಕೆಟ್ ಪಡೆದರೆ ಸುಂದರ್ ನಾಲ್ಕು ಓವರ್‌ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು.

ವೇಗವಾಗಿ 150 ಐಪಿಎಲ್ ಸಿಕ್ಸರ್ ಬಾರಿಸಿದವರು; ಕೊಹ್ಲಿ, ರೋಹಿತ್ ಅಲ್ಲ ಆತನೊಬ್ಬನೇ ಭಾರತೀಯ!

ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಬೇಗನೆ ವಿಉಕೆಟ್ ಕಳೆದುಕೊಳ್ಳುವ ಮೂಲಕ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಹ್ಯಾರಿ ಬ್ರೂಕ್ 7 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಆದರೆ ಮಯಾಂಕ್ ಅಗರ್ವಾಲ್ ಎಸ್‌ಆರ್‌ಹೆಚ್ ಪರವಾಗಿ ಅದ್ಭುತ ಇನ್ನಿಂಗ್ಸ್ ಕಟ್ಟಿದರು. ಆದರೆ ಮತ್ತೊಂದು ತುದಿಯಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿದ ಕಾರಣ ಎಸ್‌ಆರ್‌ಹೆಚ್ ಸಂಕಷ್ಟವನ್ನು ಅನುಭವಿಸಿತು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ, ಅಭಿಶೇಕ್ ಶರ್ಮಾ, ಐಡೆನ್ ಮಾರ್ಕ್ರಮ್ ವೈಫಲ್ಯ ಅನುಭವಿಸಿದರು.

ಆದರೆ ಹೆನ್ರಿಕ್ ಕ್ಲಾಸೆನ್ ಹಾಗೂ ವಾಶಿಂಗ್ಟನ್ ಸುಂದರ್ ಕೊನೆಯ ಹಂತದಲ್ಲಿ ತಂಡದ ಗೆಲುವಿಗಾಗಿ ಹೋರಾಟ ನಡೆಸಿದರಾದರೂ ಅದು ಸಾಕಾಗಲಿಲ್ಲ. ಕ್ಲಾಸೆನ್ 19 ಎಸೆತಗಳಲ್ಲಿ 31 ರನ್ ಬಾರಿಸಿದರೆ ಔಟಾದರೆ ಸುಂದರ್ 24 ರನ್‌ಗಳಿಸಿ ಅಜೇಯವಾಗುಳಿದರು. ಎಸ್‌ಆರ್‌ಹೆಚ್ ನಿಗದಿತ 20 ಓವರ್‌ಗಳಲ್ಲಿ 137 ರನ್‌ಗಳನ್ನು ಮಾತ್ರವೇ ಗಳಿಸಲು ಸಾಧ್ಯವಾಯಿತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಗೆಲುವು ಸಾಧಿಸಿದರೆ ಎಸ್‌ಆರ್‌ಹೆಚ್ ಸತತ ಮೂರನೇ ಸೋಲು ಅನುಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+