DC vs KKR: ಸತತ ಸೋಲಿನ ಸರಪಳಿ ಕಳಚಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ಮಿಚೆಲ್ ಮಾರ್ಶ್
ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಸೋಲಿನ ಕಹಿ ಅನುಭವಿಸಿದೆ. ಈವರೆಗೆ ಆಡಿದ ಐದು ಪಂದ್ಯಗಳಲ್ಲಿ ಒಂದೂ ಗೆಲುವು ಸಾಧಿಸಲು ವಿಫಲವಾಗಿರುವ ಡಿಸಿ ತಂಡ ಟೂರ್ನಿಯ ಮೊದಲ ಗೆಲುವಿಗಾಗಿ ಹಪಹಪಿಸುತ್ತಿದೆ. ಇದೀಗ 6ನೇ ಪಂದ್ಯವನ್ನಾಡಲು ಡೆಲ್ಲಿ ಕ್ಯಾಪಿಟಲ್ಸ್ ಸಜ್ಜಾಗಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗುವ ವಿಶ್ವಾಸದಲ್ಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಶ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಸೋಲಿನ ಸರಪಳಿಯನ್ನು ಕಳಚಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 20 ಗುರುವಾರದಂದು ಡಿಸಿ ಕೆಕೆಆರ್ ವಿರುದ್ಧ ಈ ಆವೃತ್ತಿಯ 6ನೇ ಪಂದ್ಯವನ್ನಾಡಲಿದೆ.

ಈ ಋತುವಿನಲ್ಲಿ ಎಲ್ಲಾ ಐದು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಕಾರಣ ಡಿಸಿ ಫಿರೋಜ್‌ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೆಲ ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಡೇವಿಡ್ ವಾರ್ನರ್ ನೇತೃತ್ವದ ತಂಡಕ್ಕೆ ಇದು ಗೆಲ್ಲಲೇಬೇಕಾದ ಪಂದ್ಯವಾಗಿದ್ದು ಪ್ಲೇಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಗೆಲುವು ಅನಿವಾರ್ಯವಾಗಿದೆ.
ಬೆಟ್ಟಿಂಗ್‌ನಲ್ಲಿ ಗೆಲ್ಲಬೇಕೆಂದು ಸಿರಾಜ್ ಬಳಿ ತಂಡದೊಳಗಿನ ಮಾಹಿತಿ ಕೇಳಿದ ಭೂಪ; ಸಿರಾಜ್ ಮಾಡಿದ್ದೇನು?
"ನಾವು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂಬುದರಲ್ಲಿ ಅನುಮಾನವೇ ಇಲ್ಲ. ಕಳೆದ ಎಲ್ಲಾ ಐದು ಪಂದ್ಯಗಳಲ್ಲಿಯೂ ನಾವು ಉತ್ತಮವಾದ ಆರಂಭವನ್ನು ಪಡೆಯಲು ವಿಫಲವಾದೆವು ಅಥವಾ ಕೆಲ ಸಂದರ್ಭಗಳಲ್ಲಿ ಸತತವಾಗಿ ವಿಕೆಟ್‌ಗಳನ್ನು ಕಳೆದುಕೊಂಡೆವು" ಎಂದು ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಿಚೆಲ್ ಮಾರ್ಶ್ ಪ್ರತಿಕ್ರಿಯೆ ನೀಡಿದ್ದಾರೆ.
"ನಾವು ಜೊತೆಯಾಟಗಳನ್ನು ಬೆಳೆಸಬೇಕಿದೆ. ಓರ್ವ ಆಟಗಾರನಾದರೂ ದೊಡ್ಡ ಮೊತ್ತವನ್ನು ಗಳಿಸುವ ಅಗತ್ಯವಿದೆ. ಅದನ್ನು ನಾವು ಈವರೆಗೆ ಸಾಧಿಸಲು ಸಾಧ್ಯವಾಗಿಲ್ಲ. ನಾವು ಅದನ್ನು ಮಾಡಲು ಸಾಧ್ಯವಾದರೆ ಫಲಿತಾಂಶ ನಮ್ಮ ಪರವಾಗಿ ಆಗಲಿದೆ" ಎಂದಿದ್ದಾರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಳ್‌ರೌಂಡರ್ ಮಿಚೆಲ್ ಮಾರ್ಶ್.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಯಶ್ ಧುಲ್, ಫಿಲ್ ಸಾಲ್ಟ್, ಸರ್ಫರಾಜ್ ಖಾನ್, ಮನೀಶ್ ಪಾಂಡೆ, ರಿಲೀ ರೋಸೌವ್, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಮನ್ ಖಾನ್, ವಿಕ್ಕಿ ಒಸ್ತ್ವಾಲ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಅಭಿಷೇಕ್ ಪೊರೆಲ್
ಕೊಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ












Click it and Unblock the Notifications