DC vs RCB: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು: ಪಿಚ್ ರಿಪೋರ್ಟ್, ಆಡುವ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಬಳಿಕ ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮೇಲುಗೈ ಸಾಧಿಸಲು ಚಿತ್ತ ನೆಟ್ಟಿದೆ. ಶನಿವಾರ ಸಂಜೆ ಆರ್‌ಸಿಇ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದ್ದು ಈ ಸೆಣೆಸಾಟದಲ್ಲಿ ಯಾರಿಗೆ ಮೇಲುಗೈ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ

ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದೆ. ಮೊದಲ ಬಾರಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿತ್ತು. ಸದ್ಯ ಆರ್‌ಸಿಬಿ ತಂಡದ ಚಿತ್ತ ಅಗ್ರ ನಾಲ್ಕರಲ್ಲಿ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಮೇಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಿಂದ ಹೊರಬರಲು ಸರ್ವ ಪ್ರಯತ್ನ ನಡೆಸಲಿದೆ.

IPL 2023, DC vs RCB: Royal Challengers Bangalore eye on top 4 spot, Match preview

ಆರ್‌ಸಿಬಿ ತಂಡ ಈವರೆಗೆ 9 ಪಂದ್ಯಗಳನ್ನು ಆಡಿದ್ದು ಅದರಲ್ಲಿ 5 ಗೆಲುವು ಹಾಗೂ ನಾಲ್ಕು ಸೋಲು ಕಂಡಿದೆ. ಹೀಗಾಗಿ 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಈವರೆಗೆ ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಮಾತ್ರವೇ ಸಾಧಿಸಿದ್ದು ಕೊನೆಯ ಸ್ಥಾನದಲ್ಲಿದೆ. ಆರ್‌ಸಿಬಿ ತಂಡ ಈ ಪಂದ್ಯದಲ್ಲಿ ಗೆಲುವಿನ ಜೊತೆಗೆ ನೆಟ್‌ ರನ್‌ರೇಟ್ ಸುಧಾರಿಸುವತ್ತಲೂ ಹೆಚ್ಚಿನ ಗಮನಹರಿಸಬೇಕಿದೆ.

ಪಂದ್ಯದ ಸಮಯ ಹಾಗೂ ಇತರ ಮಾಹಿತಿ

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 6 ಶನಿವಾರ ಸಂಜೆ ಮುಖಾಮುಖಿಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸುವ ಅವಕಾಶವಿದ್ದು ಜಿಯೋ ಸಿನಿಮಾದಲ್ಲಿಯೂ ಲೈವ್‌ಸ್ಟ್ರೀಮಿಂಗ್ ಮೂಲಕ ಪಂದ್ಯವನ್ನು ಆನಂದಿಸಬಹುದು.

IPL 2023: ಕಾಮೆಂಟರಿ ಮಾಡ್ತಿದ್ದಾಗ ಆರ್‌ಸಿಬಿಯ ಈತ ಕರೆ ಮಾಡಿ ತಂಡಕ್ಕೆ ಕರೆದ್ರು: ಕೇದಾರ್ ಜಾಧವ್!

ಪಿಚ್ ರಿಪೋರ್ಟ್ ಹೀಗಿದೆ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯದಲ್ಲಿ ಸ್ಪಿನ್ನರ್‌ಗಳು ಮಿಂಚುವ ಅವಕಾಶವಿದೆ. ಪಂದ್ಯದುದ್ದಕ್ಕೂ ಪಿಚ್ ಸ್ಪಿನ್ನರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಹೊಸ ಚೆಂಡು ಬ್ಯಾಟ್‌ಗೆ ಸರಾಗವಾಗಿ ಬರಲಿದ್ದು ಪವರ್‌ಪ್ಲೇ ಅವಧಿಯಲ್ಲಿ ಬ್ಯಾಟರ್‌ಗಳಿಗೆ ರನ್‌ಗಳಿಸುವ ಅವಕಾಶ ದೊರೆಯಬಹುದು. ಆದರೆ ಪಂದ್ಯ ಮುಂದುವರಿದಂತೆ ಪಿಚ್ ನಿಧಾನವಾಗಲಿದ್ದು ಬ್ಯಾಟಿಂಗ್ ಸವಾಲೆನಿಸಲಿದೆ. ಈ ಮೈದಾನದ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 160-175 ಆಗಿದೆ.

ಹವಾಮಾನ ವರದಿ: ಶನಿವಾರ ದೆಹಲಿಯ ವಾತಾವರಣ ಪಂದ್ಯ ನಡೆಯಲು ಪೂರಕ ವಾತಾವರಣವನ್ನು ಹೊಂದಿರಲಿದೆ. ಮಳೆಯ ಆತಂಕವಿಲ್ಲ. ಉಷ್ಣಾಂಶ 24-36 ಡಿಗ್ರಿ ಮಧ್ಯೆ ಇರುವ ಸಾಧ್ಯತೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ:

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೊಸೊವ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಜೋಶ್ ಹ್ಯಾಜಲ್‌ವುಡ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+