IPL 2023: ಐಪಿಎಲ್ 2023ರ ಆವೃತ್ತಿಗಾಗಿ ಹೊಸ ಜೆರ್ಸಿ ಅನಾವರಣಗೊಳಿಸಿದ ಡೆಲ್ಲಿ ಕ್ಯಾಪಿಟಲ್ಸ್

ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಆವೃತ್ತಿಗೆ ಕೆಲವೇ ದಿನಗಳು ಇರುವ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ಹೊಸ ಜೆರ್ಸಿಯನ್ನು ಅನಾವರಣ ಮಾಡಿದೆ.

ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಿತು. ಹೊಸ ಜೆರ್ಸಿಯನ್ನು ತೊಟ್ಟಿರುವ ತಂಡದ ನಾಯಕ ಡೇವಿಡ್ ವಾರ್ನರ್, ಉಪನಾಯಕ ಅಕ್ಷರ್ ಪಟೇಲ್‌, ಆರಂಭಿಕ ಆಟಗಾರ ಪೃಥ್ವಿ ಶಾ ಅವರ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.

IPL 2023: Delhi Capitals Have Unveiled Their New Jersey For The IPL 2023

ಮಾರ್ಚ್ 31 ರಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನ 2023 ಆವೃತ್ತಿಗೆ ಅದ್ಧೂರಿಯಾಗಿ ಚಾಲನೆ ಸಿಗಲಿದೆ. ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ.

ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲನೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 1 ರಂದು ಆಡಲಿದೆ. ಮೊದಲ ತವರಿನ ಪಂದ್ಯವನ್ನು ಏಪ್ರಿಲ್ 4 ರಂದು ಆಡಲಿದ್ದು, ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೆಣೆಸಲಿದೆ.

IPL 2023: Delhi Capitals Have Unveiled Their New Jersey For The IPL 2023

ಪ್ಲೇ ಆಫ್ ತಲುಪುವಲ್ಲಿ ವಿಫಲವಾಗಿದ್ದ ಡೆಲ್ಲಿ

ಕಳೆದ ಆವೃತ್ತಿಯಲ್ಲಿ ರಿಷಭ್ ಪಂತ್ ನೇತೃತ್ವದಲ್ಲಿ ಆಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಾಧಾರಣ ಪ್ರದರ್ಶನ ನೀಡಿತ್ತು. 14 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ 7 ಪಂದ್ಯಗಳಲ್ಲಿ ಸೋಲು ಕಂಡಿತ್ತು. 14 ಅಂಕಗಳೊಂದಿಗೆ 5ನೇ ಸ್ಥಾನ ಪಡೆಯುವ ಮೂಲಕ ಪ್ಲೇಆಫ್ ಸ್ಥಾನವನ್ನು ತಪ್ಪಿಸಿಕೊಂಡಿತ್ತು.

ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಪ್ ಗೆಲ್ಲುವ ಉತ್ಸಾಹದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್ ತಂಡ. 2023 ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಡೇವಿಡ್ ವಾರ್ನರ್ ಮುನ್ನಡೆಸಲಿದ್ದಾರೆ. ಅಕ್ಷರ್ ಪಟೇಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

IPL 2023: Delhi Capitals Have Unveiled Their New Jersey For The IPL 2023

2022ರ ಡಿಸೆಂಬರ್ 30ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ರಿಷಬ್ ಪಂತ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನಿಂದ ಅವರು ಹೊರಗುಳಿಯುವುದು ಖಚಿತವಾದ ಬಳಿಕ ವಾರ್ನರ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ರಿಷಬ್ ಪಂತ್ ಮುಂದಿನ ಐಪಿಎಲ್‌ ವೇಳೆಗೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ.

ಸೌರವ್ ಗಂಗೂಲಿಗೆ ಹೊಸ ಜವಾಬ್ದಾರಿ

ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಸೌರವ್ ಗಂಗೂಲಿ ಅವರನ್ನು ಕ್ರಿಕೆಟ್ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದೆ. 2019ರಲ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದರು.

ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. 2009 ರಿಂದ 2013ರವೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಿದ್ದರು, ಆ ಸಂದರ್ಭದಲ್ಲಿ ಒಂದೆರಡು ಪಂದ್ಯಗಳಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದರು. 2014ರಲ್ಲಿ ಡೇವಿಡ್ ವಾರ್ನರ್ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರ್ಪಡೆಯಾದರು.

2016ರಲ್ಲಿ ವಾರ್ನರ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ಕಪ್ ಗೆದ್ದು ಸಂಭ್ರಮಿಸುತ್ತು. ವಾರ್ನರ್ ಐದನೇ ಜಂಟಿ-ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಅವರ ನಾಯಕತ್ವದ್ಲಿ ಆಡಿದ 69 ಪಂದ್ಯಗಳಲ್ಲಿ 35ರಲ್ಲಿ ಗೆಲುವು ಸಾಧಿಸಿದ್ದು, 32ರಲ್ಲಿ ಸೋಲನುಭವಿಸಿದ್ದಾರೆ, ಎರಡು ಪಂದ್ಯಗಳು ಟೈನಲ್ಲಿ ಕೊನೆಯಾಗಿದ್ದವು.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಸರ್ ಪಟೇಲ್ (ಉಪನಾಯಕ), ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್ , ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಒಸ್ತ್ವಾಲ್, ಇಶಾಂತ್ ಶರ್ಮಾ, ಫಿಲ್ ಸಾಲ್ಟ್, ಮುಖೇಶ್ ಕುಮಾರ್, ಮನೀಷ್ ಪಾಂಡೆ, ರಿಲೀ ರೊಸೌವ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+