CSK vs DC: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2023: Delhi Capitals vs Chennai Super Kings head to head record details

ನಾಳೆ ( ಮೇ 20 ) ಎರಡು ಪಂದ್ಯಗಳು ಜರುಗಲಿದ್ದು, ಈ ಪೈಕಿ ಮಧ್ಯಾಹ್ನ ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯ ಕುತೂಹಲ ಕೆರಳಿಸಿದೆ.

ಹೌದು, ಈ ಪಂದ್ಯದಲ್ಲಿ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಪ್ರವೇಶ ಖಚಿತವಾಗಲಿದ್ದು, ಈ ಕಾರಣಕ್ಕಾಗಿ ಈ ಪಂದ್ಯ ಹೆಚ್ಚಿನ ಕುತೂಹಲವನ್ನು ಮೂಡಿಸಿದೆ. ಇನ್ನು ಈ ಪಂದ್ಯ ಟೂರ್ನಿಯ 67ನೇ ಪಂದ್ಯವಾಗಿದ್ದು, ಮಧ್ಯಾಹ್ನ 3.30ಕ್ಕೆ ಆರಂಭಗೊಳ್ಳಲಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಹೀಗೆ 15 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಗೆದ್ದು 17 ಅಂಕಗಳನ್ನು ಹೊಂದಿದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಒಂದುವೇಳೆ ಈ ಪಂದ್ಯದಲ್ಲೇನಾದರೂ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಪ್ರವೇಶ ಉಳಿದ ಪಂದ್ಯಗಳ ಫಲಿತಾಂಶದ ಮೇಲೆ ಅವಲಂಬಿತವಾಗಲಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಪಂದ್ಯವನ್ನು ಗೆದ್ದರೆ ತನ್ನ ಜತೆಗೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನೂ ಸಹ ಟೂರ್ನಿಯಿಂದ ಹೊರಗೆ ಕರೆದುಕೊಂಡು ಹೋಗಲಿದೆ.

ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 213 ರನ್ ಬಾರಿಸಿ 15 ರನ್‌ಗಳ ಗೆಲುವು ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ಆಸೆಯನ್ನು ಹೊತ್ತಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ನಿರಾಸೆಯುಂಟುಮಾಡಿತ್ತು. ಇನ್ನು ತನ್ನ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿರುವ ಕಾರಣ ಸದ್ಯ ಇತ್ತಂಡಗಳ ನಡುವಿನ ಈ ಮುಖಾಮುಖಿಯ ಕುರಿತು ನಿರೀಕ್ಷೆ ಹೆಚ್ಚಿಸಿದೆ.

ಹೀಗೆ ಕುತೂಹಲ ಹುಟ್ಟುಹಾಕಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಬಾರಿಯ ಮುಖಾಮುಖಿಯ ಪಂದ್ಯವೂ ಸೇರಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 28 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 18 ಪಂದ್ಯಗಳಲ್ಲಿ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆದ್ದಿದೆ.

ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 55ನೇ ಲೀಗ್ ಪಂದ್ಯದಲ್ಲಿ ಮೊದಲ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 168 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿತ್ತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 27 ರನ್‌ಗಳ ಜಯ ಕಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+