DC vs PBKS: ಮುಖಾಮುಖಿ‌ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದ ಬಲಿಷ್ಠ ತಂಡ ಯಾವುದು?

IPL 2023: Delhi Capitals vs Punjab Kings head to head record details

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 13 ) ಶನಿವಾರ ಎರಡು ಪಂದ್ಯಗಳು ಆಯೋಜನೆಗೊಂಡಿವೆ.

ಮಧ್ಯಾಹ್ನ ಆರಂಭಗೊಂಡಿರುವ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಸಂಜೆ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ‌.

ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 59ನೇ ಲೀಗ್ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೈಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದೆ. ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಇನ್ನು ಈ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿಂತ ಪಂಜಾಬ್ ಕಿಂಗ್ಸ್ ತಂಡಕ್ಕೆ ಅತಿ ಮುಖ್ಯದ್ದಾಗಿದೆ ಎನ್ನಬಹುದು. ಹೌದು, ಡೆಲ್ಲಿ ಕ್ಯಾಪಿಟಲ್ಸ್ ಈಗಾಗಲೇ ಟೂರ್ನಿಯಲ್ಲಿ ಏಳು ಪಂದ್ಯಗಳನ್ನು ಸೋತು ಪ್ಲೇಆಫ್ ಪ್ರವೇಶವನ್ನು ಬಹುತೇಕ ಕಳೆದುಕೊಂಡಿದ್ದು, ಇನ್ನೂ ಪ್ಲೇಆಫ್ ರೇಸಿನಲ್ಲಿರುವ ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಗೆಲ್ಲಲೇಬೇಕಿದೆ‌.

ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಪಂಜಾಬ್‌ ಕಿಂಗ್ಸ್ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದು ಕೇವಲ‌ 4 ಪಂದ್ಯಗಳಲ್ಲಿ ಗೆದ್ದು ಉಳಿದ 7 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವ ಪ್ರಥಮ ಪಂದ್ಯ ಇದಾಗಿದ್ದು, ಐಪಿಎಲ್ ಇತಿಹಾಸದಲ್ಲಿ ಒಟ್ಟು 30 ಪಂದ್ಯಗಳಲ್ಲಿ ಇತ್ತಂಡಗಳು ಪರಸ್ಪರ ಮುಖಾಮುಖಿಯಾಗಿವೆ‌.

ಈ ಮುಖಾಮುಖಿ ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ 15 ಪಂದ್ಯಗಳಲ್ಲಿ ಗೆದ್ದಿದ್ದು, ಪಂಜಾಬ್ ಕಿಂಗ್ಸ್ ತಂಡ ಸಹ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಹ ಸಮಬಲ ಸಾಧಿಸಿವೆ.

ಇನ್ನು ಇದು ಒಟ್ಟಾರೆ ಇಂಡಿಯನ್ ಪ್ರೀಮಿಯರ್ ಲೀಗ್ ಲೆಕ್ಕಾಚಾರವಾದರೆ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಹೌದು, 2022ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ 9 ವಿಕೆಟ್ ಗಳ ಜಯ ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಪಂದ್ಯದಲ್ಲಿ 17 ರನ್ನುಗಳ ಗೆಲುವು ಕಂಡಿತ್ತು.

ಅಲ್ಲದೇ 2021ರಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ 6 ವಿಕೆಟ್ ಅಂತರದಿಂದ ಜಯ ಸಾಧಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಪಂದ್ಯದಲ್ಲಿ 7 ವಿಕೆಟ್ ಅಂತರದಿಂದ ಗೆಲುವನ್ನು ಕಂಡಿತ್ತು. ಇನ್ನು 2020ರಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆದ್ದಿತ್ತು. ಈ ಪಂದ್ಯವೇ ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದ ಕೊನೆಯ ಪಂದ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+