CSK vs PBKS: ಕಾನ್ವೆ ಶತಕ ಮಿಸ್; ಪಂಜಾಬ್ ಕಿಂಗ್ಸ್‌ಗೆ ಬೃಹತ್ ಗುರಿ ನೀಡಿದ ಚೆನ್ನೈ

IPL 2023: Devon Conways 92 helps Chennai Super Kings to mount 200 against Punjab Kings

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 30 ) ಎರಡು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಟೂರ್ನಿಯ 41ನೇ ಪಂದ್ಯವಾಗಿದ್ದು, ಚೆನ್ನೈನ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿದ್ದು, ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ 201 ರನ್‌ಗಳ ಗುರಿಯನ್ನು ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕರಾಗಿ ಡಿವಾನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದರು. ರುತುರಾಜ್ ಗಾಯಕ್ವಾಡ್ 31 ಎಸೆತಗಳಲ್ಲಿ 39 ರನ್ ಗಳಿಸಿದರೆ, ಡಿವಾನ್ ಕಾನ್ವೆ 52 ಎಸೆತಗಳಲ್ಲಿ ಅಜೇಯ 92 ರನ್ ಗಳಿಸಿದರು. ಕೊನೆಯ ಓವರ್‌ವರೆಗೂ ಕಣದಲ್ಲಿದ್ದ ಡಿವಾನ್ ಕಾನ್ವೆ ಶತಕ ವಂಚಿತರಾದರು.

ಇನ್ನುಳಿದಂತೆ ಶಿವಮ್ ದುಬೆ 17 ಎಸೆತಗಳಲ್ಲಿ 28 ರನ್, ಮೊಯಿನ್ ಅಲಿ 6 ಎಸೆತಗಳಲ್ಲಿ 10 ರನ್, ರವೀಂದ್ರ ಜಡೇಜಾ 10 ಎಸೆತಗಳಲ್ಲಿ 12 ರನ್ ಕಲೆಹಾಕಿದರು. ಅಂತಿಮ ಹಂತದಲ್ಲಿ ಕಣಕ್ಕಿಳಿದ ಎಂಎಸ್ ಧೋನಿ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ ಅಜೇಯ 13 ರನ್ ಗಳಿಸಿದರು.

ಪಂಜಾಬ್ ಕಿಂಗ್ಸ್ ಪರ ಅರ್ಷ್‌ದೀಪ್ ಸಿಂಗ್, ಸ್ಯಾಮ್ ಕರ್ರನ್, ರಾಹುಲ್ ಚಹರ್ ಹಾಗೂ ಸಿಖಂದರ್ ರಾಜಾ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ ಹಾಗೂ ವಿಕೆಟ್ ಕೀಪರ್), ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಪಂಜಾಬ್ ಕಿಂಗ್ಸ್ ಆಡುವ ಬಳಗ: ಅಥರ್ವ ಥೈದೆ, ಶಿಖರ್ ಧವನ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸಿಕಂದರ್ ರಜಾ, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+