IPL 2023: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿ ನೀಡಿದ ರೋಹಿತ್ ಪಡೆ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಎಲಿಮಿನೇಟರ್ ಪಂದ್ಯ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲುಗೆ ಬ್ಯಾಟಿಂಗ್ ನಡೆಸಿರುವ ಮುಂಬೈ ಇಂಡಿಯನ್ಸ್ ತಂಡ ಕೃನಾಲ್ ಪಾಂಡ್ಯ ಬಳಗಕ್ಕೆ ಸವಾಲಿನ ಮೊತ್ತವನ್ನು ನಿಗದಿಪಡಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಮೊದಲ ಆರಂಬಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ವಿಕೆಟನ್ನು ಅಲ್ಪಮೊತ್ತಕ್ಕೆ ಕಳೆದುಕೊಂಡಿತಾದರೂ ಕ್ಯಾಮರೂನ್ ಗ್ರೀನ್ ಹಾಗೂ ಸೂರ್ಯಕುಮಾರ್ ಯಾದವ್ ತಂಡಕ್ಕೆ ಅದ್ಭುತ ಜೊತೆಯಾಟ ನೀಡಿದರು. ಹೀಗಾಗಿ ಮೊದಲ ಹತ್ತು ಓವರ್‌ಗಳ ಅಂತ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಕೋರ್ ಅದ್ಭುತವಾಗಿತ್ತು. ಆದರೆ 10.4 ಓವರ್ ಆಗುವಷ್ಟರಲ್ಲಿ ಸೂರ್ಯಕುಮಾರ್ ಯಾದವ್ 20 ಎಸೆತಗಳಲ್ಲಿ 33 ರನ್‌ಗಳಿಸಿದ್ದಾಗ ವಿಕೆಟ್ ಕಳೆದುಕೊಂಡರು. ಈ ಹಂತದಲ್ಲಿ ಮುಂಬೈ ಇಂಡಿಯನ್ಸ್ ತಂಡ 104 ರನ್‌ಗೆ 3 ವಿಕೆಟ್ ಕಳೆದುಕೊಂಡಿತು.

ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡ ಅದೇ ಓವರ್‌ನಲ್ಲಿ ಕ್ಯಾಮರೂನ್ ಗ್ರೀನ್ ಕೂಡ 23 ಎಸೆತಗಳಲ್ಲಿ 41 ರನ್‌ಗಳಿಸಿದ ಬಳಿಕ ವಿಕೆಟ್ ಕಳೆದುಕೊಂಡರು. ಬಳಿಕ ನೇಹಲ್ ವಧೇರಾ 12 ಎಸೆತಗಳಲ್ಲಿ 23 ರನ್‌ಗಳಿಸಿ ರನ್ ವೇಗವನ್ನು ಹೆಚ್ಚಿಸಿದರು. ಈ ಮೂಲಕ ನಿಗದಿತ 20 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಕಳೆದುಕೊಂಡು 182 ರನ್‌ಗಳನ್ನು ಗಳಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಬಳಿಕ ಮಧ್ಯದಲ್ಲಿ ಗೆಲುವಿನ ಲಯ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ಸರಿಯಾದ ಸಮಯದಲ್ಲಿ ಲಯ ಕಂಡುಕೊಂಡ ಕಾರಣ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡರುವ ಕೃನಾಲ್ ಪಾಂಡ್ಯ ನೇತೃತ್ವದ ತಂಡ ಮೊದಲ ಬಾರಿಗೆ ಫೈನಲ್ ಪ್ರವೇಶದ ಕನಸು ಕಾಣುತ್ತಿದೆ. ಆದರೆ ಅದು ಸಾಧ್ಯವಾಗಬೇಕಾದರೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಎಲ್‌ಎಸ್‌ಜಿ ತಂಡ ಗೆಲುವು ಸಾಧಿಸಬೇಕಿದೆ.
ಇನ್ನು ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯ ಆರಂಭದಲ್ಲಿ ಸಾಕಷ್ಟು ಹಿನ್ನಡೆ ಕಂಡಿದ್ದರೂ ಕೊನೆಯ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣದಿಂದಾಗಿ ಪ್ಲೇಆಫ್‌ನಲ್ಲಿ ಅವಕಾಶ ಗಿಟ್ಟಿಸಿಕೊಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿ 16 ಅಂಕಗಳನ್ನು ಪಡೆದ ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್‌ಗೆ ಪ್ರವೇಶಿಸಿತು.
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಆಯುಷ್ ಬಡೋನಿ, ದೀಪಕ್ ಹೂಡಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ (ನಾಯಕ), ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಯಶ್ ಠಾಕೂರ್, ಮೊಹ್ಸಿನ್ ಖಾನ್
ಬೆಂಚ್: ಕೈಲ್ ಮೇಯರ್ಸ್, ಡೇನಿಯಲ್ ಸಾಮ್ಸ್, ಯುದ್ವೀರ್ ಸಿಂಗ್ ಚರಕ್, ಸ್ವಪ್ನಿಲ್ ಸಿಂಗ್, ಅಮಿತ್ ಮಿಶ್ರಾ, ಕ್ವಿಂಟನ್ ಡಿ ಕಾಕ್, ಕರಣ್ ಶರ್ಮಾ, ಕರುಣ್ ನಾಯರ್, ಮನನ್ ವೋಹ್ರಾ, ಮಾರ್ಕ್ ವುಡ್, ಅವೇಶ್ ಖಾನ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಸೂರ್ಯಾಂಶ್ ಶೆಡ್ಜ್
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಕ್ರಿಸ್ ಜೋರ್ಡಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್
ಬೆಂಚ್: ರಮಣದೀಪ್ ಸಿಂಗ್, ವಿಷ್ಣು ವಿನೋದ್, ನೆಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ಸಂದೀಪ್ ವಾರಿಯರ್, ಟ್ರಿಸ್ಟಾನ್ ಸ್ಟಬ್ಸ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ದುವಾನ್ ಜಾನ್ಸೆನ್, ಅರ್ಷದ್ ಖಾನ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್












Click it and Unblock the Notifications