LSG vs MI: ಲಕ್ನೋ ವಿರುದ್ಧ ಆಡಿರುವ ಎಲ್ಲಾ ಪಂದ್ಯ ಸೋತಿದೆ ಮುಂಬೈ!

IPL 2023, Eliminator: Mumbai Indians vs Lucknow Super Giants head to head details

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಶುರುವಾಗಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ನಿನ್ನೆ (ಮೇ 21 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತ ಮುಕ್ತಾಯವಾಗಿದೆ.
ಈ ಮೂಲಕ ಪ್ಲೇಆಫ್ ಕೊನೆಯ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಮುಂಬೈ ಇಂಡಿಯನ್ಸ್ ಅವಕಾಶವನ್ನು ಗಿಟ್ಟಿಸಿಕೊಂಡಿದೆ. ಹೀಗೆ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಮುಂಬೈ ಇಂಡಿಯನ್ಸ್ ಪ್ಲೇಆಫ್ ಸೀಟ್ ಹಿಡಿದಿದೆ.

ಈ ಪೈಕಿ ಇಂದು ( ಮೇ 23 ) ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಪಂದ್ಯವನ್ನು ಆಡುತ್ತಿದ್ದು, ನಾಳೆ ( ಮೇ 24 ) ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿವೆ.

ಇನ್ನು ಈ ಪಂದ್ಯದಲ್ಲಿ ಸೋಲಲಿರುವ ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆಲ್ಲಲಿರುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು ಕ್ವಾಲಿಫಯರ್ 1 ಸೋಲಲಿರುವ ತಂಡದ ಜತೆ ಫೈನಲ್ ಪಂದ್ಯದ ಪ್ರವೇಶ ಗಿಟ್ಟಿಸಿಕೊಳ್ಳುವ ಸಲುವಾಗಿ ಸೆಣಸಾಡಲಿದೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಪಡೆಯದೇ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 14 ಲೀಗ್ ಹಂತದ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ 8 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು.

ಹೀಗೆ ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಲಕ್ನೋ ಸೂಪರ್ ಜೈಂಟ್ಸ್ ತಂಡವೇ ಹೆಚ್ಚು ಪಂದ್ಯಗಳನ್ನು ಬಲಿಷ್ಠವಾಗಿದ್ದು, ಇತ್ತಂಡಗಳ ಮುಖಾಮುಖಿ ಪಂದ್ಯಗಳಲ್ಲೂ ಸಹ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಹೌದು, ಇತ್ತಂಡಗಳ ನಡುವೆ ಇಲ್ಲಿಯವರೆಗೂ 3 ಮುಖಾಮುಖಿ ಪಂದ್ಯಗಳು ಜರುಗಿದ್ದು, ಈ ಎಲ್ಲಾ ಪಂದ್ಯಗಳಲ್ಲಿಯೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆದ್ದಿದೆ.

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 26ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 200 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿತ್ತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 18 ರನ್‌ಗಳ ಗೆಲುವನ್ನು ಕಂಡಿತ್ತು.

ಇನ್ನು ಅದೇ ಆವೃತ್ತಿಯ ಲೀಗ್ ಹಂತದ 37ನೇ ಪಂದ್ಯದಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿಯೂ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 169 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ಎಡವಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 132 ರನ್ ಗಳಿಸಿತ್ತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 36 ರನ್‌ಗಳ ಗೆಲುವನ್ನು ಕಂಡಿತ್ತು.

ಈ ಬಾರಿಯ ಟೂರ್ನಿಯ 63ನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾಗ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿ 5 ರನ್‌ಗಳ ಅಂತರದಿಂದ ಸೋಲನ್ನು ಕಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+