IPL 2023: ಐದನೇ ಟ್ರೋಫಿಯತ್ತ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಧೂರಿ ಸಮಾರಂಭದ ಮೂಲಕ ಚಾಲನೆ ಸಿಗಲಿದೆ.

ಭಾರತೀಯ ಹಾಗೂ ವಿಶ್ವ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ 2023ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

cskdp

2022ರ ಐಪಿಎಲ್ ಋತುವು ನಾಲ್ಕು ಬಾರಿಯ ಚಾಂಪಿಯನ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಿರಾಶಾದಾಯಕವಾಗಿತ್ತು. ಏಕೆಂದರೆ ಹತ್ತು ತಂಡಗಳ ಅಂಕಪಟ್ಟಿಯಲ್ಲಿ ಎಂಟು ಅಂಕ ಗಳಿಸಿ ಒಂಬತ್ತನೇ ಸ್ಥಾನ ಪಡೆದು ಮುಗಿಸಿದರು.

ಆಲ್‌ರೌಂಡರ್ ರವೀಂದ್ರ ಜಡೇಜಾ ಸಿಎಸ್‌ಕೆ ನಾಯಕನಾಗಿ ಋತುವನ್ನು ಪ್ರಾರಂಭಿಸಿದರು. ಆದರೆ ಸತತ ಸೋಲು ಮತ್ತು ಕಳಪೆ ಪ್ರದರ್ಶನದಿಂದಾಗಿ ಟೂರ್ನಿ ಮಧ್ಯದಲ್ಲೇ ತಮ್ಮ ನಾಯಕನ ಸ್ಥಾನವನ್ನು ತೊರೆದರು. ನಂತರ ಎಂಎಸ್ ಧೋನಿ ಸಿಎಸ್‌ಕೆ ತಂಡದ ನಾಯಕನಾಗಿ ಪುನರಾಯ್ಕೆಯಾದರು. ಆದರೂ, ಪ್ಲೇಆಫ್ ತಲುಪಲು ಸಾಧ್ಯವಾಗಲಿಲ್ಲ.

csk1

ಇದೀಗ 2023ರ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದ, ಆರಂಭಿಕ ಜೋಡಿಯಾದ ಡೆವೊನ್ ಕಾನ್ವೇ ಮತ್ತು ರುತುರಾಜ್ ಗಾಯಕ್ವಾಡ್ ಪ್ರದರ್ಶನವನ್ನು ನೆಚ್ಚಿಕೊಂಡಿದೆ.

ಅನಂತರ ಹರಾಜಿನಲ್ಲಿ ಹೆಚ್ಚಿನ ಹೆಚ್ಚಿನ ಮೊತ್ತಕ್ಕೆ ಖರೀದಿಯಾಗಿರುವ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಆಲ್‌ರೌಂಡ್ ಪ್ರದರ್ಶನ ಸಿಎಸ್‌ಕೆ ತಂಡಕ್ಕೆ ಪ್ರಮುಖವಾಗಲಿದೆ. ಬೆನ್ ಸ್ಟೋಕ್ಸ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ತಂಡವನ್ನು ಮೇಲೆತ್ತುವ ಪ್ರಯತ್ನ ಮಾಡಲಿದ್ದಾರೆ. ಬಳಿಕ ನಂಬಿಕಸ್ಥ ಬ್ಯಾಟರ್ ಅಂಬಾಟಿ ರಾಯುಡು ಅವರಿಂದ ಉತ್ತಮ ರನ್ ಬರುವ ನಿರೀಕ್ಷೆ ಹೊಂದಬಹುದು.

csk

ಸಿಎಸ್‌ಕೆ ತಂಡದ ಮಧ್ಯಮ ಕ್ರಮಾಂಕವು ಶಿವಂ ದುಬೆ, ಮೊಯಿನ್ ಅಲಿ ಮತ್ತು ರವೀಂದ್ರ ಜಡೇಜಾ ಅವರಂತಹ ಮೂವರು ಅದ್ಭುತ ಆಲ್‌ರೌಂಡರ್‌ಗಳ ಆಯ್ಕೆಯನ್ನು ಹೊಂದಿದ್ದು, ಎಂಎಸ್ ಧೋನಿ ತಮ್ಮ ನಾಯಕತ್ವದಲ್ಲಿ ಐದನೇ ಬಾರಿಗೆ ಪ್ರಶಸ್ತಿ ಗೆಲ್ಲಲು ಎದುರು ನೋಡುತ್ತಿದ್ದಾರೆ.

ಕಳೆದ ಬಾರಿ ಸಿಎಸ್‌ಕೆ ತಂಡದ ಬೌಲಿಂಗ್ ವಿಭಾಗವು ಪ್ರಭಾವಶಾಲಿಯಾಗಿರಲಿಲ್ಲ. ಈ ಬಾರಿ ದೀಪಕ್ ಚಹಾರ್ ಮರಳುತ್ತಿರುವುದು ತಂಡಕ್ಕೆ ದೊಡ್ಡ ಸಿಕ್ಕಂತಾಗುತ್ತದೆ. 2022ರ ಋತುವಿನಿನಲ್ಲಿ ಮುಖೇಶ್ ಚೌಧರಿ ಅದ್ಭುತ ಪ್ರದರ್ಶನ ನೀಡಿದ್ದರು. ಇನ್ನು ಈ ಬಾರಿ ಶ್ರೀಲಂಕಾದ ಮಹೀಶ್ ತೀಕ್ಷಣ ಮತ್ತೊಮ್ಮೆ ಸಿಎಸ್‌ಕೆ ತಂಡದ ಪ್ರಮುಖ ಸ್ಪಿನ್ನರ್ ಆಗುವ ನಿರೀಕ್ಷೆಯಿದೆ.

ಐಪಿಎಲ್ 2023: ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ

ಡೆವೋನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ದೀಪಕ್ ಚಹಾರ್, ಮಹೀಶ್ ತೀಕ್ಷಣ, ಮುಕೇಶ್ ಚೌಧರಿ.

ಐಪಿಎಲ್ 2023: ಚೆನ್ನೈ ಸೂಪರ್ ಕಿಂಗ್ಸ್ ಪೂರ್ಣ ತಂಡ

ಎಂಎಸ್ ಧೋನಿ (ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮಥೀಶ ಪತಿರಾನ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಸಿಸಾಂಡ ಮಗಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+