IPL 2023: ಐಪಿಎಲ್‌ನಲ್ಲಿ 100ನೇ ವಿಕೆಟ್ ಪಡೆದ ಮೊಹಮ್ಮದ್ ಶಮಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಗೆ ಅದ್ದೂರಿ ಚಾಲನೆ ದೊರೆತಿದ್ದು ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಪ್ರಪ್ರಥಮ ವಿಕೆಟ್ ಪಡೆದ ಮೊಹಮ್ಮದ್ ಶಮಿ ಐಪಿಎಲ್‌ನಲ್ಲಿ ಮಹತ್ವದ ಮೈಲಿಗಲ್ಲು ನೆಟ್ಟಿದ್ದಾರೆ. ಗುಜರಾತ್ ಜೈಂಟ್ಸ್ ತಂಡದ ಅನುಭವಿ ಆಟಗಾರ ಮೊಹಮ್ಮದ್ ಶಮಿ ಐಪಿಎಲ್‌ನಲ್ಲಿ 100 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಗೆ ಸೇರಿಕೊಂಡಿದ್ದಾರೆ.

ಮೊಹಮ್ಮದ್ ಶಮಿ ಈ ಬಾರಿ ಟೂರ್ನಿಯಲ್ಲಿ ಗುಜರಾತ್ ತಂಡಕ್ಕೆ ಅದ್ಭುತ ಆರಂಭವನ್ನು ನೀಡಿದರು. ಮೊದಲ ಓವರ್ ಎಸೆದ ಶಮಿ ಆ ಓವರ್‌ನಲ್ಲಿ ಕೇವಲ 2 ರನ್ ನೀಡಿದ್ದರು. ಬಳಿಕ ತಮ್ಮ ಎರಡನೇ ಓವರ್‌ನಲ್ಲಿಯೂ ಭರ್ಜರಿ ದಾಳಿ ನಡೆಸಿದ ಶಮಿ ಎರಡನೇ ಎಸೆತದಲ್ಲಿಯೇ ಆರಂಭಿಕ ಆಟಗಾರ ಡೆವೋನ್ ಕಾನ್ವೆ ಅವರನ್ನು ಬೌಲ್ಡ್ ಮಾಡುವ ಮೂಲಕ ಔಟ್ ಮಾಡಿದರು. ಈ ಮೂಲಕ ಶಮಿ ಐಪಿಎಲ್‌ನಲ್ಲಿ 100ನೇ ವಿಕೆಟ್ ಪೂರ್ಣಗೊಳಿಸಿದರು.

IPL 2023: GT vs CSK, Pacer Mohammed Shami completed 100 wickets in IPL

ಇನ್ನು ಮೊಹಮ್ಮದ್ ಶಮಿ ಈ ವಿಶೇಷ ಮೈಲಿಗಲ್ಲಿನೊಂದಿಗೆ ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 10ನೇ ವೇಗಿ ಎನಿಸಿಕೊಂಡಿದ್ದಾರೆ. ಇನ್ನು 2019ರ ಐಪಿಎಲ್ ಟೂರ್ನಿಯಿಂದ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಅನುಭವಿ ವೇಗಿ ಕಳೆದ ನಾಲ್ಕು ಐಪಿಎಲ್ ಆವೃತ್ತಿಗಳಲ್ಲಿಯೂ 15ಕ್ಕಿಂತ ಅಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಬಾರಿಯೂ ಅಂಥಾದ್ದೇ ಪ್ರದರ್ಶನ ನೀಡುವ ಭರವಸೆ ಮೂಡಿಸಿದ್ದಾರೆ.

IPL 2023: ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ಸ್ಕ್ವಾಡ್ ಹಾಗೂ ನಾಯಕರ ಸಂಪೂರ್ಣ ವಿವರ

ಅದ್ದೂರಿ ಆರಂಭ ಪಡೆದ ಐಪಿಎಲ್: ಇನ್ನು ಈ ಬಾರಿಯ ಐಪಿಎಲ್ ಟೂರ್ನಿಗೆ ಅದ್ದೂರಿ ಆರಂಭ ದೊರೆತಿದೆ. ಗಾಯಕ ಅರಿಜಿತ್ ಸಿಂಗ್ ಸಂಗೀತದ ಮೂಲಕ ಅಭಿಮಾನಿಗಳಿಗೆ ಮುದ ನೀಡಿದರೆ ನಟಿಯರಾದ ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ತಮ್ಮ ನೃತ್ಯದ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ಮನರಂಜಿಸಿದರು. ಮಂದಿರಾ ಬೇಡಿ ಐಪಿಎಲ್ 2023 ರ ಉದ್ಘಾಟನಾ ಸಮಾರಂಭದ ನಿರೂಪಕರಾಗಿ ನಿರ್ವಹಿಸಿದರು.

ಇನ್ನು ಬಳಿಕ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೊದಲ ಪಂದ್ಯವನ್ನಾಡಲು ಕಣಕ್ಕಿಳಿದಿದ್ದು ಟೂರ್ನಿಯ ಪ್ರಧಮ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ನಿರ್ಧಾರ ತೆಗೆದುಕೊಂಡರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸಿದೆ.

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಲ್, ಅಲ್ಜಾರಿ ಜೋಸೆಫ್

ಸಬ್ಸ್ಟಿಟ್ಯೂಟ್ಸ್: ಬಿ ಸಾಯಿ ಸುದರ್ಶನ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆಎಸ್ ಭರತ್

ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ(ವಿಕೆಟ್ ಕೀಪರ್/ನಾಯಕ), ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ರಾಜವರ್ಧನ್ ಹಂಗರ್ಗೇಕರ್

ಸಬ್ಸ್ಟಿಟ್ಯೂಟ್ಸ್: ತುಷಾರ್ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+