IPL 2023: ಯುವ ಆಟಗಾರನನ್ನು ತಂಡಕ್ಕೆ ಸೇರ್ಪಡೆಗೊಳಿಸಿದ ಕೊಲ್ಕತ್ತಾ ನೈಟ್ ರೈಡರ್ಸ್

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ತನ್ನ ತಂಡಕ್ಕೆ ಗುಜರಾತ್ ಮೂಲದ ಆಟಗಾರ ಆರ್ಯ ದೇಸಾಯಿ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರ್ಪಡೆಗೊಳಿಸಿದೆ. 20 ಲಕ್ಷ ರೂಪಾಯಿಗೆ ಆರ್ಯ ದೇಸಾಯಿ ಕೆಕೆಆರ್ ಫ್ರಾಂಚೈಸಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಲ್ಲಿ ಕೆಕೆಆರ್ ತಮಡದ ಭಾಗವಾಗಲಿದ್ದಾರೆ.

ಈ ಬಾರಿಯ ಐಪಿಎಲ್‌ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಆರಂಭಿಕ ಪಂದ್ಯದಲ್ಲಿ ಸೋಲು ಕಂಡಿದ್ದರೂ ಅದರ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಕೆಕೆಆರ್ ಅಮೋಘ ಗೆಲುವು ಸಾಧಿಸಿ ಬೀಗಿದೆ. ಆದರೆ ಶಕ್ರವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಎಡವಿದೆ.

IPL 2023: Gujarat batter Aarya Desai join Kolkata Knightriders as replacement

IPL 2023: ನಮ್ಮ ಬ್ಯಾಟರ್‌ಗಳನ್ನು ಪ್ರಶಂಸಿಸುವುದಿಲ್ಲ; ಪಂಜಾಬ್ ವಿರುದ್ಧ ಗೆದ್ದ ನಂತರ ಹಾರ್ದಿಕ್ ಪಾಂಡ್ಯ ಹೇಳಿದ್ದೇಕೆ?

ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ತಂಡದ ಖಾಯಂ ನಾಯಕ ಶ್ರೇಯಸ್ ಐಯ್ಯರ್ ಅಲಭ್ಯವಾಗಿದ್ದಾರೆ. ಗಾಯದ ಕಾರಣದಿಂದಾಗಿ ಶ್ರೇಯಸ್ ಐಯ್ಯರ್ ಹೊರಗುಳಿಯುವಂತಾಗಿದ್ದು ಅವರ ಬದಲಿಗೆ ನಿತೀಶ್ ರಾಣಾ ತಂಡದ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.

ಇನ್ನು ಆರ್ ದೇಸಾಯಿ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಸೇರಿಕೊಳ್ಳುತ್ತಿರುವ ಬಗ್ಗೆ ಐಪಿಎಲ್ ಅಧಿಕೃತವಾಗಿ ಘೋಷಿಸಿದೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಟೂರ್ನಿಯ ಮುಂದಿನ ಭಾಗದಲ್ಲಿ ಕೆಕೆಆರ್ ಪರವಾಗಿ ಆಡಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ ಐಪಿಎಲ್. ದೇಸಾಯಿ ಮೂರು ಪ್ರಥಮದರ್ಜೆ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದು 151 ರನ್‌ಗಳನ್ನು ಗಳಿಸಿದ್ದಾರೆ.

ಆರ್‌ಸಿಬಿಗೆ ಸೋಲುಣಿಸಿದ ಕೆಕೆಆರ್

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಶರಣಾಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಬೆಂಗಳೂರಿನಲ್ಲಿ ಅಮೋಘ ಪ್ರದರ್ಶನ ನಿಡಿ ಗೆದ್ದು ಬೀಗಿದ್ದು. ಈ ಮೂಲಕ ಆರ್‌ಸಿಬಿ ತಂಡದ ಆತ್ಮವಿಶ್ವಾಸಕ್ಕೆ ದೊಡ್ಡ ಆಘಾತ ನಿಡುವಲ್ಲಿ ಯಶಸ್ವಿಯಾಗಿತ್ತು. ಅದಾದ ಬಳಿಕ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧವೂ ಅಮೋಘ ಪ್ರದರ್ಶನ ನೀಡಿ ಗೆದ್ದು ಬೀಗುವಲ್ಲಿ ಯಶಸ್ವಿಯಾಗಿತ್ತು.

ಕೊಲ್ಕತ್ತಾ ನೈಟ್ ರೈಡರ್ಸ್

ನಿತೀಶ್ ರಾಣಾ (ನಾಯಕ), ವರುಣ್ ಚಕ್ರವರ್ತಿ, ಲಾಕಿ ಫರ್ಗುಸನ್, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಹರ್ಷಿತ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಟಿಮ್ ಸೌಥಿ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೈಭವ್ ಅರೋರಾ, ಎನ್ ಜಗದೀಸನ್, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟನ್ ದಾಸ್, ಮನ್‌ದೀಪ್ ಸಿಂಗ್, ಜೇಸನ್ ರಾಯ್, ಆರ್ಯ ದೇಸಾಯಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+