GT vs LSG: ನೀರಸ ಬ್ಯಾಟಿಂಗ್ ಮಾಡಿದ ಗುಜರಾತ್; ಲಕ್ನೋಗೆ ಸುಲಭ ರನ್‌ಗಳ ಗುರಿ

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 30ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 22 ) ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಲಕ್ನೋನ ಅಟಲ್ ಬಿಹಾರಿ ವಾಜಪೇಯಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಗುಜರಾಟ್ ಟೈಟನ್ಸ್ ದೊಡ್ಡ ಇನ್ನಿಂಗ್ಸ್ ಕಟ್ಟಲಾಗದೇ ರನ್ ಕಲೆಹಾಕಲು ಪರದಾಡಿದೆ. 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಕೇವಲ 135 ರನ್‌ಗಳನ್ನು ಗುಜರಾತ್ ಟೈಟನ್ಸ್ ಕಲೆಹಾಕಿದ್ದು ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 136 ರನ್‌ಗಳ ಸುಲಭ ಗುರಿಯನ್ನು ನೀಡಿದೆ.
ಗುಜರಾತ್ ಟೈಟನ್ಸ್ ಪರ ವೃದ್ಧಿಮಾನ್ ಸಹಾ ಹಾಗೂ ಶುಭ್‌ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದರು. ಈ ಪೈಕಿ ಶುಭ್‌ಮನ್ ಗಿಲ್ ಯಾವುದೇ ರನ್ ಗಳಿಸದೇ ಡಕ್ ಔಟ್ ಆದರೆ, ಸಹಾ 37 ಎಸೆತಗಳಲ್ಲಿ 47 ರನ್ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹಾರ್ದಿಕ್ ಪಾಂಡ್ಯ 50 ಎಸೆತಗಳಲ್ಲಿ 66 ರನ್ ಬಾರಿಸಿದರು. ಇನ್ನುಳಿದಂತೆ ಅಭಿನವ್ ಮನೋಹರ್ 3, ವಿಜಯ್ ಶಂಕರ್ 10, ಡೇವಿಡ್ ಮಿಲ್ಲರ್ 6 ಹಾಗೂ ರಾಹುಲ್ ತೆವಾಟಿಯಾ ಅಜೇಯ 2 ರನ್ ಗಳಿಕಸಿದರು.
ಹೀಗೆ ಗುಜರಾತ್ ಟೈಟನ್ಸ್ ಪರ ವೃದ್ಧಿಮಾನ್ ಸಹಾ ಹಾಗೂ ಹಾರ್ದಿಕ್ ಪಾಂಡ್ಯ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್‌ಮನ್ ಸಹ ಉತ್ತಮ ಆಟವನ್ನಾಡಲಿಲ್ಲ. ಪರಿಣಾಮ ಕಳಪೆ ಮೊತ್ತವನ್ನು ತಂಡ ಕಲೆಹಾಕಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದೆ. ಕೃನಾಲ್ ಪಾಂಡ್ಯ ಹಾಗೂ ಮಾರ್ಕಸ್ ಸ್ಟಾಯಿನಿಸ್ ತಲಾ ಎರಡು ವಿಕೆಟ್ ಪಡೆದರೆ, ನವೀನ್ ಉಲ್ ಹಕ್ ಹಾಗೂ ಅಮಿತ್ ಮಿಶ್ರಾ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು
ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ( ನಾಯಕ ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್ ಹಾಗೂ ಮೋಹಿತ್ ಶರ್ಮಾ
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕಾಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲ್ಸ್ ಪೂರನ್ ( ವಿಕೆಟ್ ಕೀಪರ್ ), ಆಯುಶ್ ಬಡೋನಿ, ನವೀನ್-ಉಲ್-ಹಕ್, ಅಮಿತ್ ಮಿಶ್ರಾ, ಆವೇಶ್ ಖಾನ್, ರವಿ ಬಿಷ್ಣೋಯ್












Click it and Unblock the Notifications