IPL 2023 Final, ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್: ಹೆಡ್ ಟು ಹೆಡ್ ಮಾಹಿತಿ
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಭಾನುವಾರ ಮುಕ್ತಾಯವಾಗಲಿದೆ. ಕೇವಲ ಫೈನಲ್ ಪಂದ್ಯ ಮಾತ್ರ ಬಾಕಿಯಿದ್ದು ಎರಡು ತಂಡಗಳು ಟೂರ್ನಿಯಲ್ಲಿ ಉಳಿದುಕೊಂಡಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದ್ದು ಯಾವ ತಂಡ ಟ್ರೋಫಿ ಎತ್ತಿ ಹೊಡಿಯಲಿದೆ ಎಂಬುದು ಮಾತ್ರ ಈಗಿನ ಕುತೂಹಲವಾಗಿದೆ.
ಎಂಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದ್ದು ಲೀಗ್ ಹಂತದಲ್ಲಿ ಎರಡನೇ ಸ್ಥಾನವನ್ನು ಪಡೆದು ಪ್ಲೇಆಫ್‌ಗೆ ಪ್ರವೇಶಿಸಿತ್ತು. ಪ್ಲೇಆಫ್‌ನ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಅಮೋಘ ಗೆಲುವು ಸಾಧಿಸಿ ಫೈನಲ್‌ಗೆ ಹಂತಕ್ಕೇರಿದೆ. ತಂಡದ ಬಹುತೇಕ ಆಟಗಾರರು ಉತ್ತಮ ಲಯದಲ್ಲಿದ್ದು ಫೈನಲ್‌ನಲ್ಲಿ ಮತ್ತೊಂದು ಬೃಹತ್ ಪ್ರದರ್ಶನದ ವಿಶ್ವಾಸದಲ್ಲಿದೆ ಸಿಎಸ್‌ಕೆ ತಂಡ.

ಇನ್ನು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಐಪಿಎಲ್‌ನಲ್ಲಿ ತನ್ನ ಮೇಲಿದ್ದ ನಿರೀಕ್ಷೆಗೆ ತಕ್ಕ ಆಟವಾಡಿದೆ. ಲೀಗ್ ಹಂತದಲ್ಲಿ ಅಗ್ರಸ್ಥಾನಿಯಾಗಿ ಪ್ಲೇಆಫ್ ಪ್ರವೇಶಿಸಿದ್ದ ಜಿಟಿ ಮೊದಲ ಕ್ವಾಲಿಫಯರ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲು ಕಂಡಿತ್ತು. ಆದರೆ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದ ಕಾರಣ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಇದೀಗ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಈ ಪಂದ್ಯ ಅಹ್ಮದಾಬಾದ್‌ನಲ್ಲಿ ಆಯೋಜನೆಯಾಗಲಿದೆ.
ಹೆಡ್ ಟು ಹೆಡ್ ಮಾಹಿತಿ
ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಐಪಿಎಲ್‌ನಲ್ಲಿ ಈವರೆಗೆ 4 ಬಾಕಿ ಮುಖಾಮುಖಿಯಾಗಿದೆ. ಈ ನಾಲ್ಕು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಒಂದು ಬಾರಿ ಮಾತ್ರವೇ ಗೆಲುವು ಸಾಧಿಸಿದ್ದು ಉಳಿದ ಮೂರು ಪಂದ್ಯಗಳಲ್ಲಿ ಗುಜರಾತ್ ಟೈಟನ್ಸ್ ಗೆದ್ದು ಬೀಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಎರಡು ತಣಡಗಳು ಒಂದು ಬಾರಿ ಮಾತ್ರವೇ ಮುಖಾಮುಖಿಯಾಗಿದ್ದು ಇದರಲ್ಲಿ ಹಾರ್ದಿಕ್ ಪಡೆ ಗೆದ್ದು ಬೀಗಿದೆ.
CSK ತೊರೆಯಲಿದ್ದಾರಾ ರವೀಂದ್ರ ಜಡೇಜಾ? ಈ 3 ತಂಡಗಳು ಇಟ್ಟಿವೆ ಜಡ್ಡು ಮೇಲೆ ಕಣ್ಣು; ಮನಸ್ಸು ಮಾಡಲಿದೆಯಾ RCB?
ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಕ್ವಾಲಿಫಯರ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಗುಜರಾತ್ ಟೈಟನ್ಸ್ vs ಮುಂಬೈ ಇಂಡಿಯನ್ಸ್ ಪಿಚ್ ರಿಪೋರ್ಟ್
ಅಹ್ಮದಾಬಾದ್‌ನ ನರೇಂದ್ರಮೋದಿ ಕ್ರೀಡಾಂಗಣ ಈ ಬಾರಿಯ ಐಪಿಎಲ್ ಟೂರ್ನಿಗೆ ಆತಿಥ್ಯವನ್ನು ವಹಿಸಲಿದೆ. ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಟ ನಡೆಸಲಿದೆ. ಅಹ್ಮದಾಬಾದ್‌ನ ಈ ಕ್ರೀಡಾಂಗಣ ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿದ್ದು ಹೈಸ್ಕೋರಿಂಗ್ ಫೈನಲ್ ಪಂದ್ಯವನ್ನು ನಿರೀಕ್ಷಿಸಬಹುದು. ಇಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ಅನುಕೂಲ ನೀಡಲಿದ್ದು ಬೌಲರ್‌ಗಳು ದಂಡನೆಗೆ ಒಳಗಾಗುವುದು ಖಚಿತ. ಆರಂಭದಲ್ಲಿ ವೇಗಿಗಳಿಗೆ ಸ್ವಿಂಗ್ ಮೂಲಕ ನೆರವು ನೀಡುವ ಸಾಧ್ಯತೆಯಿದ್ದು ನಂತರ ಅಂತಿಮ ಹಂತದಲ್ಲಿ ಸ್ಪಿನ್ನರ್‌ಗಳು ಇಲ್ಲಿ ಮಿಂಚುವ ಅವಕಾಶವಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ(ನಾಯಕ), ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮೊಯಿನ್ ಅಲಿ, ಸುಭ್ರಾಂಶು ಸೇನಾಪತಿ, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ಮಹೇಶ್ ತೀಕ್ಷಣ, ಪ್ರಶಾಂತ್ ಸೋಲಂಕಿ, ದೀಪಕ್ ಚಾಹರ್, ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ತುಷಾರ್ ದೇಶಪಾಂಡೆ, ಮಥೀಶ ಪತಿರಾನ, ಬೆನ್ ಸ್ಟೋಕ್ಸ್, ಸಿಸಂದಾ ಮಗಲಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ನಿಶಾಂತ್ ಸಿಂಧು, ಅಜಯ್ ಮಂಡಲ್, ಭಗತ್ ವರ್ಮಾ, ಆಕಾಶ್ ಸಿಂಗ್
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.












Click it and Unblock the Notifications