GT vs DC: ತಂಡಗಳು ಕಳೆದ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

IPL 2023: Gujarat Titans vs Delhi Capitals head to head details in kannada

ನಿನ್ನೆಯಷ್ಟೇ ( ಮೇ 1 ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದ ವಿವಾದಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಈ ವಿವಾದದ ಕಾವಿನ ನಡುವೆಯೇ ಟೂರ್ನಿಯ ಮುಂದಿನ ಪಂದ್ಯ ನಡೆಯುವ ಸಮಯ ಬಂದಿದೆ.

ಇಂದು ( ಮೇ 2 ) ಟೂರ್ನಿಯ 44ನೇ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಬಲಿಷ್ಠರ ಹಾಗೂ ಕಳಪೆ ತಂಡಗಳ ನಡುವೆ ನಡೆಯಲಿರುವ ಹಣಾಹಣಿ ಎಂದೇ ಹೇಳಬಹುದಾಗಿದೆ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 8 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂತಿಮ ಸ್ಥಾನದಲ್ಲಿದೆ.

ಎರಡೂ ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯವಾಗಿದ್ದು ಮೊದಲ ಬಾರಿ ಇತ್ತಂಡಗಳು ಏಪ್ರಿಲ್ 4ರಂದು ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯ ಏಳನೇ ಪಂದ್ಯದಲ್ಲಿ ಸೆಣಸಾಡಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 163 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾಗಿದ್ದ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್‌ಗಳನ್ನು ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಹೀಗೆ ತವರಿನಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ಸೋತು ಮುಖಭಂಗಕ್ಕೊಳಗಾಗಿತ್ತು. ಇನ್ನು ಇದು ಈ ಬಾರಿಯ ಐಪಿಎಲ್ ಹಣಾಹಣಿಯ ಫಲಿತಾಂಶವಾದರೆ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸಹ ಡೆಲ್ಲಿ ಕ್ಯಾಪಿಟಲ್ಸ್ ಗುಜರಾತ್ ಟೈಟನ್ಸ್ ವಿರುದ್ಧ ಸೋತು ಮುಖಭಂಗವನ್ನು ಅನುಭವಿಸಿತ್ತು.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 172 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ 14 ರನ್‌ಗಳ ಸೋಲನ್ನು ಅನುಭವಿಸಿತು.

ಹೀಗೆ ಇಲ್ಲಿಯವರೆಗೂ ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಒಟ್ಟು ಎರಡು ಮುಖಾಮುಖಿ ಪಂದ್ಯಗಳು ಜರುಗಿದ್ದು, ಈ ಎರಡೂ ಪಂದ್ಯಗಳಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮಣ್ಣು ಮುಕ್ಕಿಸಿರುವ ಗುಜರಾತ್ ಟೈಟನ್ಸ್ ಸಂಪೂರ್ಣ ಮೇಲುಗೈ ಸಾಧಿಸಿದೆ.

ಇನ್ನು ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಗೆದ್ದರೆ ತನ್ನ ಪ್ಲೇಆಫ್ ಹಾದಿಗೆ ತೀರ ಸಮೀಪಕ್ಕೆ ತಲುಪಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಂತೆಯೇ ಲೆಕ್ಕ ಎನ್ನಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+