IPL 2023: ಗುಜರಾತ್ & ಮುಂಬೈ ಕಳೆದ ಸೀಸನ್‌ನಲ್ಲಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಇಂದು ( ಏಪ್ರಿಲ್ 25 ) ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 35ನೇ ಪಂದ್ಯವಾಗಿದೆ. ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳೂ ಸಹ ತಲಾ 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಗುಜರಾಟ್ ಟೈಟನ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.
ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ಆಡಿರುವ 6 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇನ್ನು ಗುಜರಾತ್ ಟೈಟನ್ಸ್ ತಂಡ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಮಾತ್ರ ಆಡುತ್ತಿರುವ ತಂಡವಾಗಿದ್ದು, ಹೆಚ್ಚೇನೂ ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. ಅದರಲ್ಲಿಯೂ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕೆ ಇಳಿದಿದೆ.
ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಸೆಣಸಾಡಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತ್ತು. ಪರಿಣಾಮ ಮುಂಬೈ ಇಂಡಿಯನ್ಸ್ 5 ರನ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು.
ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ 29 ಎಸೆತಗಳಲ್ಲಿ 48 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ 28 ಎಸೆತಗಳಲ್ಲಿ 43 ರನ್ ಗಳಿಸಿದ್ದರು ಹಾಗೂ ಟಿಮ್ ಡೇವಿಡ್ 21 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿ ಮಿಂಚಿದ್ದರು. ಅತ್ತ ಗುಜರಾತ್ ಟೈಟನ್ಸ್ ಪರ ವೃದ್ಧಿಮಾನ್ ಸಹ, ಶುಭ್‌ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಹೊರತುಪಡಿಸಿ ಉಳಿದ ಯಾವ ಆಟಗಾರನೂ ಸಹ ಇಪ್ಪತ್ತು ರನ್‌ಗಳ ಗಡಿಯನ್ನು ದಾಟಿರಲಿಲ್ಲ.
ವೃದ್ಧಿಮಾನ್ ಸಹಾ 40 ಎಸೆತಗಳಲ್ಲಿ 55 ರನ್ ಗಳಿಸಿದರೆ, ಶುಭ್‌ಮನ್ ಗಿಲ್ 36 ಎಸೆತಗಳಲ್ಲಿ 56 ರನ್ ಚಚ್ಚಿದ್ದರು ಹಾಗೂ ನಾಯಕ ಹಾರ್ದಿಕ್ ಪಾಂಡ್ಯ 14 ಎಸೆತಗಳಲ್ಲಿ 24 ರನ್ ಗಳಿಸಿದ್ದರು. ಮುಂಬೈ ಇಂಡಿಯನ್ಸ್ ಪರ ಕೊನೆಯ ಹಂತದಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.












Click it and Unblock the Notifications