MI vs GT: ಕೊನೆಯ ಬಾರಿಗೆ ಮುಂಬೈ - ಗುಜರಾತ್ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ನಾಳೆ ( ಮೇ 12 ) ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯವಾಗಿದೆ. ಈ ಪಂದ್ಯ ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳೂ ಸಹ ತಲಾ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಗುಜರಾಟ್ ಟೈಟನ್ಸ್ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ.
ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋತು 16 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ಆಡಿರುವ 11 ಪಂದ್ಯಗಳಲ್ಲಿ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
ಇನ್ನು ಗುಜರಾತ್ ಟೈಟನ್ಸ್ ತಂಡ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಮಾತ್ರ ಆಡುತ್ತಿರುವ ತಂಡವಾಗಿದ್ದು, ಹೆಚ್ಚೇನೂ ಪಂದ್ಯಗಳಲ್ಲಿ ಕಣಕ್ಕಿಳಿದಿಲ್ಲ. ಅದರಲ್ಲಿಯೂ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಈ ಆವೃತ್ತಿಯ ಪಂದ್ಯವೂ ಸೇರಿದಂತೆ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಕಣಕ್ಕೆ ಇಳಿದಿದೆ.
ಏಪ್ರಿಲ್ 25ರಂದು ನಡೆದಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ 35ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 208 ರನ್ನುಗಳ ಕಠಿಣ ಗುರಿ ನೀಡಿತ್ತು.
ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್ ಕಲೆಹಾಕಿ 55 ರನ್ ಅಂತರದ ಕೆಟ್ಟ ಸೋಲನ್ನು ಕಂಡಿತು.
ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಸೆಣಸಾಡಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತ್ತು. ಪರಿಣಾಮ ಮುಂಬೈ ಇಂಡಿಯನ್ಸ್ 5 ರನ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು.
ಹೀಗೆ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ.












Click it and Unblock the Notifications