GT vs RR: ತಂಡಗಳು ಕೊನಯ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

IPL 2023: Gujarat Titans vs Rajasthan Royals head to head record details in kannada

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ಲೀಗ್ ಹಂತದ 48ನೇ ಪಂದ್ಯ ಇಂದು ( ಮೇ 5 ) ಜೈಪುರದ ಸಾವೈ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ.

ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಟೂರ್ನಿಯಲ್ಲಿ ಎರಡೂ ತಂಡಗಳು ಹೆಚ್ಚು ಗೆಲುವುಗಳನ್ನು ಕಂಡಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿಯೇ ಮುಂದುವರಿಯಲಿದ್ದು, ರಾಜಸ್ಥಾನ್ ರಾಯಲ್ಸ್ ಗೆದ್ದರೆ ಅಗ್ರಸ್ಥಾನಕ್ಕೆ ಏರಿಕೆ ಕಾಣಲಿದೆ.

ಹೌದು, ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು, ಉಳಿದ 3 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇನ್ನು ಇತ್ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾಗ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವನ್ನು ಕಂಡಿತ್ತು. ಹೀಗೆ ಮೊದಲ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿರುವ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಈ ಪಂದ್ಯದಲ್ಲಿ ಗೆದ್ದು ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

ಹೀಗೆ ಇಂದಿನ ಪಂದ್ಯ ರೋಚಕತೆಯನ್ನು ಹುಟ್ಟುಹಾಕಿದ್ದು, ಇತ್ತಂಡಗಳು ಇಲ್ಲಿಯವರೆಗೆ ಒಟ್ಟು ಎಷ್ಟು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಬಲಿಷ್ಠ ತಂಡ ಎನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇಲ್ಲಿಯವರೆಗೂ ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಗುಜರಾತ್ ಟೈಟನ್ಸ್ 3 ಪಂದ್ಯಗಳಲ್ಲಿ ಗೆದ್ದಿದ್ದು, ರಾಜಸ್ಥಾನ್ ರಾಯಲ್ಸ್ ಉಳಿದ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಅದೂ ಸಹ ಈ ಆವೃತ್ತಿಯ ಪಂದ್ಯದಲ್ಲಿ ಮಾತ್ರ. ಅಂದರೆ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳಲ್ಲಿ ಮುಖಾಮುಖಿಯಾಗಿ ಮೂರು ಪಂದ್ಯಗಳಲ್ಲಿಯೂ ರಾಜಸ್ಥಾನ್ ರಾಯಲ್ಸ್ ತಂಡ ಸೋತಿದೆ.

ಮೊದಲಿಗೆ ನಡೆದ ಲೀಗ್ ಹಂತದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 37 ರನ್‌ಗಳ ಭರ್ಜರಿ ಗೆಲುವನ್ನು ಕಂಡಿತ್ತು. ಬಳಿಕ ನಡೆದ ಲೀಗ್ ಹಂತದ ಎರಡನೇ ಮುಖಾಮುಖಿಯಲ್ಲಿ ಸಹ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಗೆಲುವನ್ನು ಸಾಧಿಸಿ ಲೀಗ್ ಹಂತದ ಎರಡೂ ಪಂದ್ಯಗಳಲ್ಲಿಯೂ ಸಹ ರಾಜಸ್ಥಾನ್ ರಾಯಲ್ಸ್‌ಗೆ ಮಣ್ಣು ಮುಕ್ಕಿಸಿತ್ತು.

ಬಳಿಕ ಈ ಎರಡೂ ತಂಡಗಳು ಕಳೆದ ಬಾರಿಯ ಐಪಿಎಲ್ ಟೂರ್ನಿಯ ಮಹತ್ವದ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 130 ರನ್ ಕಲೆಹಾಕಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 131 ರನ್‌ಗಳ ಗುರಿಯನ್ನು ನೀಡಿತ್ತು.

ಈ ಅಲ್ಪಮೊತ್ತದ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟನ್ಸ್ 18.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿ 7 ವಿಕೆಟ್‌ಗಳ ಗೆಲುವನ್ನು ಕಂಡಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಎರಡನೇ ಐಪಿಎಲ್ ಟ್ರೋಫಿ ಆಸೆಗೆ ತಣ್ಣೀರು ಹಾಕಿದ ಗುಜರಾತ್ ಟೈಟನ್ಸ್ ತನ್ನ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿಯೇ ಚಾಂಪಿಯನ್ ಆಗಿತ್ತು.

ಇನ್ನು ಈ ಬಾರಿಯ ಟೂರ್ನಿಯ ಲೀಗ್ ಹಂತದ 23ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 19.2 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿ 3 ವಿಕೆಟ್‌ಗಳ ಗೆಲುವನ್ನು ಕಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+