GT vs SRH: ಕೊನೆಯ ಬಾರಿ ಮುಖಾಮುಖಿಯಾಗಿದ್ದಾಗ ಏನಾಗಿತ್ತು?

IPL 2023: Gujarat Titans vs Sunrisers Hyderabad head to head record details

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 62ನೇ ಪಂದ್ಯ ಇಂದು ( ಮೇ 15 ) ನಡೆಯಲಿದೆ. ಈ ಪಂದ್ಯದಲ್ಲಿ ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಹೀಗೆ ಗುಜರಾತ್ ಟೈಟನ್ಸ್ ಒಳ್ಳೆಯ ಪ್ರದರ್ಶನವನ್ನು ನೀಡುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಕಳಪೆ ಪ್ರದರ್ಶನದ ಕಾರಣದಿಂದಾಗಿ ಹೀನಾಯ ಸ್ಥಾನದಲ್ಲಿದೆ. ಈ ಕಾರಣದಿಂದಾಗಿ ಈ ಪಂದ್ಯ ಬಲಿಷ್ಠರು ಹಾಗೂ ಕನಿಷ್ಠರ ನಡುವಿನ ಸೆಣಸಾಟ ಎಂದೇ ಹೇಳಬಹುದಾಗಿದ್ದು, ಈ ಪಂದ್ಯದಲ್ಲಿ ಗೆದ್ದರೆ ಗುಜರಾತ್ ಟೈಟನ್ಸ್ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಲಿರುವ ಪ್ರಥಮ ತಂಡ ಎನಿಸಿಕೊಳ್ಳಲಿದೆ.

ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯವೂ ಸೇರಿದಂತೆ ಒಟ್ಟು 3 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು ಈ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೂ ಸಹ ಒಟ್ಟು 14 ಅಂಕಗಳನ್ನು ಗಳಿಸಲಿದ್ದು ಪ್ಲೇಆಫ್ ಪ್ರವೇಶಿಸುವುದು ಅನುಮಾನವೆಂದೇ ಹೇಳಬಹುದು.

ಈ ಮೂಲಕ ಈ ಪಂದ್ಯ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕಿಂತ ಗುಜರಾತ್ ಟೈಟನ್ಸ್ ತಂಡಕ್ಕೆ ಅತಿಮುಖ್ಯದ್ದಾಗಿದ್ದು ಹಾಲಿ ಚಾಂಪಿಯನ್ಸ್ ಈ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ತಲುಪಲಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ.

ಇನ್ನು ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆಯಲಿರುವ ಪ್ರಥಮ ಪಂದ್ಯ ಇದಾಗಿದ್ದು, ಕಳೆದ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳು ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು.

ಹೌದು, ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 21ನೇ ಪಂದ್ಯದಲ್ಲಿ ಮೊದಲ ಬಾರಿಗೆ ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 163 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ 19.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ 8 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡಿತ್ತು. ಹೀಗೆ ಮೊದಲ ಪಂದ್ಯದಲ್ಲಿ ಗೆದ್ದಿದ್ದ ಸನ್ ರೈಸರ್ಸ್ ಹೈದರಾಬಾದ್ ಎರಡನೇ ಪಂದ್ಯದಲ್ಲಿ ಸೋಲನ್ನು ಕಂಡಿತ್ತು.

ಟೂರ್ನಿಯ 40ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 196 ರನ್‌ಗಳ ಗುರಿಯನ್ನು ನೀಡಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತುವಲ್ಲಿ ಯಶಸ್ವಿಯಾದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಈ ಮೂಲಕ ಗುಜರಾತ್ ಟೈಟನ್ಸ್ 5 ವಿಕೆಟ್‌ಗಳ ಗೆಲುವನ್ನು ಕಂಡಿತು.

ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇತ್ತಂಡಗಳು ಒಟ್ಟು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎರಡೂ ಪಂದ್ಯಗಳೂ ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದು ಸಮಬಲ ಸಾಧಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+