IPL 2023: ಎಂಎಸ್ ಧೋನಿಯ ಗೆಲುವಿನ ಮಂತ್ರವನ್ನು ಬಹಿರಂಗಪಡಿಸಿದ ಹರ್ಭಜನ್ ಸಿಂಗ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ ತಂಡ ಅದ್ಭುತ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ ತಂಡದ ನಾಯಕ ಎಂಎಎಸ್ ಧೋನಿ ಬಗ್ಗೆ ಹರ್ಭಜನ್ ಸಿಂಗ್ ವಿಶೇಷ ಮಾತುಗಳನ್ನಾಡಿದ್ದಾರೆ. ನಾಯಕನಾಗಿ ಅದ್ಭುತ ಯಶಸ್ಸು ಸಾಧಿಸಿರುವ ಎಂಎಸ್ ಧೋನಿ ಅವರ ಯಶಸ್ಸಿನ ಗುಟ್ಟು ಏನು ಎಂಬುದನ್ನು ಹರ್ಭಜನ್ ಸಿಂಗ್ ಬಹಿರಂಗಪಡಿಸಿದ್ದಾರೆ.
ಯಾವುದೇ ಆಟಗಾರನಿಗೂ ಕೂಡ ಸಂಪೂರ್ಣ ಬೆಂಬಲ ನೀಡಿ ತಂಡದ ಅಸ್ತ್ರವನ್ನಾಗಿರುವ ಸಾಮರ್ಥ್ಯವೇ ಧೋನಿ ಅವರ ಯಶಸ್ಸಿನ ಗುಟ್ಟು ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್. ಪ್ರಸ್ತುತ ಕಾಮೆಂಟೇಟರ್ ಆಗಿರುವ ಹರ್ಭಜನ್ ಸಿಂಗ್ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಧೋನಿ ನಾಯಕತ್ವದಲ್ಲಿ ಆಡಿದ್ದಾರೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಪರವಾಗಿ ಧೋನಿ ಹಾಗೂ ಹರ್ಭಜನ್ ಸುದೀರ್ಘ ಕಾಲ ಜೊತೆಯಾಗಿ ಆಡಿದ ಅನುಭವ ಹೊಂದಿದ್ದಾರೆ.

ಸಿಎಸ್‌ಕೆ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಮಾತನಾಡಿರುವ ಹರ್ಭಜನ್ ಸಿಂಗ್ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಹರ್ಭಜನ್ ಸಿಂಗ್ ಪಂದ್ಯದ ಸಂದರ್ಭದಲ್ಲಿ ಅಥವಾ ಪಂದ್ಯದ ಬಳಿಕವೂ ಧೋನಿ ತಮ್ಮ ರಣತಂತ್ರವನ್ನು ಬದಲಿಸದಿರುವುದು ಯಶಸ್ಸಿಗೆ ಮತ್ತೊಂದು ಕಾರಣ ಎಂದಿದ್ದಾರೆ.
ಸಿಎಸ್‌ಕೆ ನಾಯಕ ಎಂಎಸ್ ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮ್ಯಾನೇಜ್‌ಮೆಂಟ್ ಆಟಗಾರರು ತಮ್ಮ ಮೇಲೆ ನಂಬಿಕೆ ಹಾಗೂ ವಿಶ್ವಾಸವನ್ನು ಹೊಂದಿರುವುದು ಅಗತ್ಯ ಎಂಬುದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಭಜ್ಜಿ ಹೇಳಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸುದೀರ್ಘ ಕಾಲದಿಂದ ಹೇಗೆ ಯಶಸ್ಸು ಸಾಧಿಸಿಕೊಂಡು ಬಂದಿದೆ ಎಂಬುದನ್ನು ಹಂಚಿಕೊಂಡಿದ್ದಾರೆ.
RCB vs KKR: ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ವಿಶೇಷ ವ್ಯಕ್ತಿಗೆ ಅರ್ಪಿಸಿದ ವರುಣ್ ಚಕ್ರವರ್ತಿ!
"ಎಂಎಸ್ ಧೋಣಿ ಅವರ ಗೆಲುವಿನ ಅಸ್ತ್ರವೆಂದರೆ ಅವರು ಸಾಧ್ಯವಾದಷ್ಟು ಆಟಗಾರರನ್ನು ಬೆಂಬಲಿಸುತ್ತಾರೆ. ಅಲ್ಲದೆ ಅವರಿಗೆ ಸೂಕ್ರವಾದ ಬ್ಯಾಟಿಂಗ್ ಕ್ರಮಾಂಕವನ್ನು ನೀಡುತ್ತಾರೆ. ಆಟಗಾರನನ್ನು ಅಸ್ತ್ರವನ್ನಾಗಿಸುವವರೆಗೂ ಅವರು ಬೆಂಬಲ ನೀಡುತ್ತಾರೆ ಹಾಗಾಗಿಯೇ ಸಿಎಸ್‌ಕೆ ಚಾಂಪಿಯನ್ ತಂಡ ಎನಿಸಿಕೊಂಡಿದೆ. ಆತ ಪಂದ್ಯದ ರಣತಂತ್ರವನ್ನು ಪಂದ್ಯದ ಸಮಯದಲ್ಲಾಗಲೀ ಅಥವಾ ಪ್ರತಿ ಪಂದ್ಯಕ್ಕೂ ಬದಲಾಯಿಸುವುದಿಲ್ಲ. ಆಟಗಾರರು ನಾಯಕನಿಂದ ಹಾಗೂ ಮ್ಯಾನೇಜ್‌ಮೆಂಟ್‌ನಿಂದ ಬಯಸುವುದು ಇಂಥಾ ಬೆಂಬಲವನ್ನೇ" ಎಂದಿದ್ದಾರೆ ಹರ್ಭಜನ್ ಸಿಂಗ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೋಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಕೆಸಿ ಕಾರಿಯಪ್ಪ, ಜೇಸನ್ ಹೋಲ್ಡರ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಕುನಾಲ್ ರಾಥೋಡ್, ಆಡಮ್ ಝಂಪಾ, ಕೆಎಂ ಆಸಿಫ್, ಮುರುಗನ್ ಅಶ್ವಿನ್, ಆಕಾಶ್ ವಶಿಷ್ಟ್, ಅಬ್ದುಲ್ ಪಿ ಎ, ಜೋ ರೂಟ್












Click it and Unblock the Notifications