IPL 2023: ಈ 4 ತಂಡಗಳು ಪ್ಲೇಆಫ್ ಪ್ರವೇಶಿಸುವುದು ಪಕ್ಕಾ ಎಂದ ಹರ್ಭಜನ್ ಸಿಂಗ್

IPL 2023: Harbhajan Singh named 4 teams which can qualify into playoffs

ಸದ್ಯ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ನಡೆಯುತ್ತಿದ್ದು, ನಿನ್ನೆ ( ಮೇ 4 ) ನಡೆದ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಲೀಗ್ ಹಂತದ 46 ಪಂದ್ಯಗಳು ಮುಕ್ತಾಯಗೊಂಡಿವೆ.

ಹೀಗೆ ಇಷ್ಟು ಪಂದ್ಯಗಳ ಮುಕ್ತಾಯವಾದ ನಂತರ ಗುಜರಾತ್ ಟೈಟನ್ಸ್ ಹೆಚ್ಚು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಪ್ಲೇಆಫ್ ಸನಿಹದಲ್ಲಿದ್ದರೆ, ಇನ್ನುಳಿದ ಎಲ್ಲಾ ತಂಡಗಳಲ್ಲಿಯೂ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಬಾರಿ ಪೈಪೋಟಿ ಎಷ್ಟರ ಮಟ್ಟಿಗೆ ಇದೆ ಎಂದರೆ ಯಾವ ತಂಡಗಳು ಪ್ಲೇಆಫ್‌ಗೆ ಪ್ರವೇಶಿಸಲಿವೆ ಎಂದು ಊಹಿಸುವುದೂ ಸಹ ಕಷ್ಟವಾಗುತ್ತಿದೆ.

ಇಂತಹ ಪರಿಸ್ಥಿತಿಯಲ್ಲಿ ಹರ್ಭಜನ್ ಸಿಂಗ್ ಯಾವ ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಡಲಿವೆ ಎಂಬುದನ್ನು ಕ್ರಮವಾಗಿ ಊಹಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಎದುರಾದ ಈ ಪ್ರಶ್ನೆಗೆ ಉತ್ತರಿಸಿದ ಹರ್ಭಜನ್ ಸಿಂಗ್ "ಈ ಪ್ರಶ್ನೆಗೆ ಉತ್ತರಿಸುವುದು ತುಂಬಾ ಕಷ್ಟ. ಆದರೂ ನೀವು ಕೇಳಿದ್ದಕ್ಕೆ ಉತ್ತರಿಸುತ್ತಿದ್ದೇನೆ. ಗುಜರಾತ್ ಟೈಟನ್ಸ್ ಪ್ಲೇಆಫ್‌ಗೆ ಲಗ್ಗೆ ಇಡಲಿದೆ ಎಂಬ ನಂಬಿಕೆ ಇದೆ. ಚೆನ್ನೈ ಸೂಪರ್ ಕಿಂಗ್ಸ್ ಸಹ ಅರ್ಹತೆ ಪಡೆದುಕೊಳ್ಳಲಿದೆ. ಮುಂಬೈ ಇಂಡಿಯನ್ಸ್ ರೇಸ್‌ನಲ್ಲಿ ಸದ್ಯಕ್ಕೆ ಹಿಂದೆ ಇರಬಹುದು. ಆದರೆ ಅವರೂ ಸಹ ಪ್ಲೇಆಫ್ ಪ್ರವೇಶ ಮಾಡಲಿದ್ದಾರೆ. ಕೊನೆಯದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಲಗ್ಗೆ ಇಡಲಿದೆ" ಎಂದು ಹೇಳಿಕೆ ನೀಡಿದರು.

ಈ ಮೂಲಕ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಬರಲಿದೆ ಎಂದು ಹರ್ಭಜನ್ ಸಿಂಗ್ ಊಹಿಸಿದ್ದಾರೆ. ಟೂರ್ನಿಯ 46 ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಯಾವ ಸ್ಥಾನದಲ್ಲಿವೆ ಹಾಗೂ ಹರ್ಭಜನ್ ಸಿಂಗ್ ಹೆಸರಿಸಿರುವ ತಂಡಗಳು ಎಷ್ಟನೇ ಸ್ಥಾನದಲ್ಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 9 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಡ್ರಾ ಮಾಡಿಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಡ್ರಾ ಮಾಡಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

4. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+