IPL 2023: RCB ಅಬ್ಬರ ಮುಂದುವರಿಯಬೇಕಾದರೆ ಬೇಕು ಕೊಹ್ಲಿ ಮ್ಯಾಜಿಕ್: ಹರ್ಭಜನ್ ಸಿಂಗ್
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸಬೇಕಾದರೆ ವಿರಾಟ್ ಕೊಹ್ಲಿ ತಮ್ಮ ಜವಾಬ್ಧಾರಿಯನ್ನು ಮುಂದುವರಿಸಬೇಕು ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್. ಅಲ್ಲದೆ ಫಾಫ್ ಡು ಪ್ಲೆಸಿಸ್ ಅವರೊಂದಿಗಿನ ಜೊತೆಯಾಟ ಆರ್‌ಸಿಬಿ ತಂಡಕ್ಕೆ ಬಹಳ ನಿರ್ಣಾಯಕ ಎಂದಿದ್ದಾರೆ ಹರ್ಭಜನ್ ಸಿಂಗ್.
ಈವರೆಗಿನ ಪಂದ್ಯಗಳ ಪೈಕಿ ಅಗ್ರ ಕ್ರಮಾಂಖದ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲಸಿಸ್ ಆರ್‌ಸಿಬಿ ತಂಡದ ಅಗ್ರ ಫಾರ್ಮ್‌ನಲ್ಲಿದ್ದಾರೆ. ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕೂಡ ಫಾಫ್ ಅವರಿಗಿಂತ ಹೆಚ್ಚೇನೂ ಅಂತರದಲ್ಲಿಲ್ಲ. ಕೊಹ್ಲಿ ಈ ಟೂರ್ನಿಯಲ್ಲಿ ಈಗಾಗಲೇ ನಾಲ್ಕು ಅರ್ಧ ಶತಕ ದಾಖಲಿಸಿದ್ದಾರೆ.

ಬೆಂಗಳುರು ಮೂಲಕ ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ ಕೆಕೆಆರ್ ವಿರುದ್ಧ ಬುಧವಾರ ಗೆದ್ದು ಹ್ಯಾಟ್ರಿಕ್ ಜಯ ಸಾಧಿಸುವ ಉತ್ಸಾಹದಲ್ಲಿದೆ. ಅಲ್ಲದೆ ಕೆಕೆಆರ್ ವಿರುದ್ಧ ಕೊಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಆಘಾತಕಾರಿ ಸೋಲಿಗೆ ಪ್ರತಿಕಾರ ತೀರಿಕೊಳ್ಳುವ ಅವಕಾಶ ಕೂಡ ಆರ್‌ಸಿಬಿ ತಂಡಕ್ಕಿದೆ.
ಈ ಪಂದ್ಯದ ಹಿನ್ನೆಲೆಯಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಆರ್‌ಸಿಬಿ ತಂಡದಲ್ಲಿ ಕೊಹ್ಲಿ ಮೇಲಿರುವ ಜವಾಬ್ಧಾರಿಯನ್ನು ಬೊಟ್ಟುಮಾಡಿದ್ದಾರೆ. "ಆರ್‌ಸಿಬಿ ಉತ್ತಮ ಸ್ಥಾನದಲ್ಲಿ ಮುಂದುವರಿಯಬೇಕಾದರೆ ವಿರಾಟ್ ಕೊಹ್ಲಿ ತಮ್ಮ ಜವಾಬ್ಧಾರಿಯನ್ನು ಮುಂದುವರಿಸಬೇಕಿದೆ. ಫಾಫ್ ಡು ಪ್ಲೆಸಿಸ್ ಅವರೊಂದಿಗೆ ವಿರಾಟ್ ಕೊಹ್ಲಿ ಅವರ ಜೊತೆಯಾಟ ನಿರ್ಣಾಯಕವಾಗಿದೆ. ವಿರಾಟ್ ಹಾಗೂ ಫಾಫ್ ಉತ್ತಮ ಫಾರ್ಮ್‌ನಲ್ಲಿದ್ದು ಇದು ಆರ್‌ಸಿಬಿ ತಂಡಕ್ಕೆ ನಿರಾಳತೆಯನ್ನುಂಟು ಮಾಡಿದೆ" ಎಂದಿದ್ದಾರೆ ಹರ್ಭಜನ್ ಸಿಂಗ್.
IPL 2023: ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ RCB; ಮತ್ತೆ ಗೆಲುವಿನ ಓಟಕ್ಕೆ ಅಡ್ಡಿಯಾಗುತ್ತಾ KKR
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು ಏಪ್ರಿಲ್ 26 ಬುಧವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ಇರಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ವಿಕೆಟ್ ಕೀಪರ್), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.
IPL 2023: ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳಿಂದ ಹೊರಗುಳಿಯಲಿ ಎಂದಿದ್ಯಾಕೆ ಗವಾಸ್ಕರ್!
ಕೊಲ್ಕತ್ತಾ ನೈಟ್ ರೈಡರ್ಸ್: ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ಎನ್ ಜಗದೀಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಕುಲ್ವಂತ್ ಖೆಜ್ರೋಲಿಯಾ, ರಿಂಕು ಸಿಂಗ್, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ, ಉಮೇಶ್ ಯಾದವ್, ಡೇವಿಡ್ ವೈಸ್












Click it and Unblock the Notifications