DC vs CSK: ಡೆಲ್ಲಿ ಕ್ಯಾಪಿಟಲ್ಸ್ ಕಾಡುತ್ತಿರುವ ಹೊಸ ಸಮಸ್ಯೆಗೆ ಹರ್ಭಜನ್ ಕಳವಳ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿದೆ. ಎಂಎಸ್ ಧೋನಿ ನೇತೃತ್ವದ ಸಿಎಸ್‌ಕೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ ತಂಡ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದರೂ ಬಳಿಕ ಅದ್ಭುತವಾಗಿ ತಿರುಗಿಬಿದ್ದಿದ್ದು ಅಮೋಘ ಪ್ರದರ್ಶನ ನೀಡುತ್ತಿದೆ. ಬಲಾಢ್ಯ ತಂಡಗಳಿಗೆ ಆಘಾತ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೆನ್ನೈ ವಿರುದ್ಧವೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ ತಂಡದ ಪ್ರಮುಖ ದಾಂಡಿಗರು ಈ ನಿರ್ಣಾಯಕ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಆದರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ ತಂಡಕ್ಕೆ ಎದುರಾಳಿರುವ ಹೊಸ ಆತಂಕವನ್ನು ಉಲ್ಲೇಖಿಸಿದ್ದಾರೆ. ಅದೇನೆಂದರೆ ತಂಡದ ನಾಯಕ ಡೇವಿಡ್ ವಾರ್ನರ್ ಕಳೆದ ಕೆಲ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದು ಅದು ತಂಡಕ್ಕೆ ಹಿನ್ನಡೆಯಾಗಬಹುದು ಎಂದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಪರವಾಗಿ ಆರಂಭದಲ್ಲಿ ನಾಯಕ ಡೇವಿಡ್ ವಾರ್ನರ್ ಏಕಾಂಗಿ ಹೋರಾಟ ನಡೆಸುತ್ತಿದ್ದರು. ಆದರೆ ಕಳೆದ ನಾಲ್ಕೈದು ಪಂದ್ಯಗಳಿಂದ ವಾರ್ನರ್ ಪ್ರದರ್ಶನ ಕಳಪೆಯಾಗಿದೆ. ವಾರ್ನರ್ ಕಳೆದ ನಾಲ್ಕು ಪಂದ್ಯಗಳಲ್ಲಿ 21, 0, 2 ಹಾಗೂ 22 ರನ್‌ಗಳನ್ನು ಗಳಿಸಿದ್ದಾರೆ. ಹೀಗಾಗಿ ವಾರ್ನರ್ ಮತ್ತೆ ಲಯಕ್ಕೆ ಮರಳುವುದು ತಂಡಕ್ಕೆ ಅನಿವಾರ್ಯವಾಗಿದೆ.
"ಸತತ ಎರಡು ಪಂದ್ಯಗಳಲ್ಲಿ ಗೆದ್ದಿರುವ ಕಾರಣ ಡೆಲ್ಲಿ ಕ್ಯಾಪಿಟಲ ತಂಡದ ಆತ್ಮವಿಶ್ವಾಸ ಹೆಚ್ಚಾಗಿದೆ. ಆದರೆ ನಾಯಕ ಡೇಚಿಡ್ ವಾರ್ನರ್ ಕಳೆದ ಕೆಲ ಪಂದ್ಯಗಳಲಿ ರನ್‌ಗಳಿಸಲು ಪರದಾಡುತ್ತಿದ್ದಾರೆ. ಕೆಲ ಯುವ ಆಟಗಾರರು ಮುಂದೆ ಬಂದು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ನಿಜ. ಆದರೆ ಡಿಸಿ ಇನ್ನು ಕೂಡ ಎಲ್ಲಿಂದ ಆರಂಭಿಸಿದೆಯೋ ಅಲ್ಲೇ ಇದೆ" ಎಂದಿದ್ದಾರೆ ಹರ್ಭಜನ್ ಸಿಂಗ್.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ 11 ಪಂದ್ಯಗಳನ್ನು ಆಡಿದ್ದು ಅದರಲ್ಲಿ 6 ಗೆಲುವು ಹಾಗೂ ನಾಲ್ಕು ಸೋಲು ಕಂಡಿದೆ. ಒಂದು ಪಂದ್ಯ ಮಳೆಗೆ ಆಹುತಿಯಾಗಿರುವ ಕಾರಣ ಸಿಎಸ್‌ಕೆ ಖಾತೆಯಲ್ಲಿ 13 ಅಂಕಗಳಿದ್ದು ಅಂಕಪಟ್ಟಿಯಲ್ಲಿ ಸದ್ಯ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದು ಎರಡನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸುವ ಲೆಕ್ಕಾಚಾರದಲ್ಲಿದೆ ಸಿಎಸ್‌ಕೆ ತಂಡ.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಐದು ಪಂದ್ಯಗಳಲ್ಲಿ ಸತತ ಐದು ಸೋಲು ಅನುಭವಿಸಿದ ಬಳಿಕ ಅದ್ಭುತವಾಗಿ ತಿರುಗಿಬಿದ್ದಿದೆ. ಮೊದಲ ಐದು ಪಂದ್ಯಗಳಲ್ಲಿ ಸೋಲು ಕಂಡಿದ್ದರೆ ನಂತರದ ಐದು ಪಂದ್ಯಗಳಲ್ಲಿ ಡಿಸಿ ತಂಡ ನಾಲ್ಕು ಗೆಲುವು ಸಾಧಿಸಿದೆ. ಸದ್ಯ 8 ಅಂಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿಯೇ ಮುಂದುವರಿಸಿದ್ದರೂ ಪ್ಲೇಆಫ್‌ಗೇರುವ ತನ್ನ ಹೋರಾಟವನ್ನು ಡಿಸಿ ತಂಡ ಕೈಬಿಟ್ಟಿಲ್ಲ.












Click it and Unblock the Notifications