IPL 2023: ಆರ್‌ಸಿಬಿ ತಂಡದ ಅತ್ಯುತ್ತಮ ಆಡುವ 11ರ ಬಳಗ ಹೇಗಿರಲಿದೆ?; ವಿರಾಟ್ ಕೊಹ್ಲಿ ಕ್ರಮಾಂಕವೇನು?
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತು ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಗಳ ನಡುವಿನ ಮುಖಾಮುಖಿಯೊಂದಿಗೆ ಚಾಲನೆ ಸಿಗಲಿದೆ.
ಈ ಬಾರಿಯ ಪಂದ್ಯಾವಳಿಯಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿದ್ದು, ಫೈನಲ್ ಪಂದ್ಯ ಮೇ 28ರಂದು ಅಹಮದಾಬಾದ್‌ನಲ್ಲಿ ನಡೆಯುವ ಸಾಧ್ಯತೆ ಇದೆ.

ಇನ್ನು ಐಪಿಎಲ್‌ನ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಕಳೆದ ಬಾರಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಚೊಚ್ಚಲ ತಂಡ ಗುಜರಾತ್ ಟೈಟನ್ಸ್ ಫೈನಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಇದೇ ವೇಳೆ ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ಎಲ್ಲಾ 10 ತಂಡಗಳ ಆಡುವ ಸಂಯೋಜನೆಯನ್ನು ನೋಡಿದರೆ, ಎಲ್ಲಾ ತಂಡಗಳು ಬಲಿಷ್ಠ ಆಡುವ 11ರ ಬಳಗವನ್ನು ರೂಪಿಸುವ ಸಾಮರ್ಥ್ಯ ಹೊಂದಿವೆ.

ಐಪಿಎಲ್‌ನ ಪ್ರತಿ ತಂಡವು ತನ್ನದೇ ಆದ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಹೊಂದಿರುತ್ತವೆ. ಅದೇ ರೀತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರರ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಆಧಾರದ ಮೇಲೆ 2023ರ ಐಪಿಎಲ್‌ನಲ್ಲಿ ಸಂಭಾವ್ಯ ಅತ್ಯುತ್ತಮ ಆಡುವ 11ರ ಬಳಗವನ್ನು ಆಯ್ಕೆ ಮಾಡಲಾಗಿದೆ.
ಆರ್‌ಸಿಬಿ ತಂಡವು 2023ರ ಐಪಿಎಲ್ ಪಂದ್ಯಾವಳಿಗಾಗಿ ಬಲಿಷ್ಠ ಸಂಯೋಜನೆಯನ್ನು ರೂಪಿಸಲು ಲೆಕ್ಕಾಚಾರ ಹಾಕುತ್ತಿದೆ. ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಅವರಂತಹ ಬಿಗ್ ಹಿಟ್ಟರ್‌ಗಳಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಈ ಬಾರಿಯೂ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಬೌಲಿಂಗ್‌ನಲ್ಲಿ ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್‌ವುಡ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ ಅವರಂತಹ ಮಾರಕ ಬೌಲರ್‌ಗಳಿದ್ದಾರೆ. ಹೀಗಾಗಿ ಆರ್‌ಸಿಬಿ ತಂಡವು ತುಂಬಾ ಸ್ಥಿರವಾಗಿದೆ ಎಂಬ ಸೂಚನೆಯನ್ನು ನೀಡುತ್ತದೆ ಮತ್ತು ಎಲ್ಲ ವಿಭಾಗದಲ್ಲಿಯೂ ಅತ್ಯುತ್ತಮ ಆಟಗಾರರನ್ನು ಹೊಂದಿದೆ.
ಪ್ರಬಲ ಅಗ್ರ ಕ್ರಮಾಂಕ, ಅದ್ಭುತ ಫಿನಿಶರ್‌ಗಳು ಮತ್ತು ವಿಶ್ವ ದರ್ಜೆಯ ವೇಗದ ದಾಳಿ ಹೊಂದಿದ ತಂಡವಾಗಿದೆ. ಆರ್‌ಸಿಬಿ ತಂಡದ ಸಣ್ಣ ದೌರ್ಬಲ್ಯವೆಂದರೆ, ಅದು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಆಗಿದೆ. ಮಹಿಪಾಲ್ ಲೋಮ್ರೋರ್ ಅಥವಾ ಸುಯಶ್ ಪ್ರಭುದೇಸಾಯಿ ಉತ್ತಮ ರನ್ ಗಳಿಸಿದರೆ ಶೇ.100ರಷ್ಟು ಸಮಸ್ಯೆಗೆ ಪರಿಹಾರ ಸಿಕ್ಕಂತಾಗುತ್ತದೆ.
ಐಪಿಎಲ್ 2023: ಆರ್‌ಸಿಬಿ ತಂಡದ ಸಂಭಾವ್ಯ ಆಡುವ 11ರ ಬಳಗ
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.
IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ
ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮೈಕಲ್ ಬ್ರೇಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಜೋಶ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ.












Click it and Unblock the Notifications