IPL 2023: ಮಹಿಳಾ ತಂಡದ ಜೆರ್ಸಿ ಧರಿಸಿ ಆಡಲಿದೆ ಮುಂಬೈ ಇಂಡಿಯನ್ಸ್: ಕಾರಣ ತಿಳಿಯಿರಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 22ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೆಕೆಆರ್ ವಿರುದ್ಧ ಆಡಲಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದೆ. ಅಲ್ಲದೆ 19 ಸಾವಿರ ಮಕ್ಕಳಿಗೆ ಉಚಿತವಾಗಿ ಪಂದ್ಯವನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ವಾರ್ಷಿಕ ಶಿಕ್ಷಣ ಮತ್ತು ಎಲ್ಲರಿಗೂ ಕ್ರೀಡೆ (ECA) ಅಂಗವಾಗಿ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಚಾಂಪಿಯನ್ ಆದ ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿಯನ್ನು ಧರಿಸಿ ಆಡಲಿದೆ. ಈ ಮೂಲಕ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿದೆ. ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಮೈದಾನದಲ್ಲಿ ಹಾಜರಿರಲಿದ್ದಾರೆ.

ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ಟಾಸ್‌ನಲ್ಲಿ ಭಾಗವಹಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಜೆರ್ಸಿಯನ್ನು ತೊಟ್ಟು 19 ಸಾವಿರ ಮಕ್ಕಳು ತಂಡಕ್ಕೆ ಬೆಂಬಲ ನೀಡಲಿದ್ದಾರೆ. ಉಚಿತವಾಗಿ ಪ್ರವೇಶ ನೀಡಿದ್ದು, ಅವರಿಗೆ ಊಟದ ವ್ಯವಸ್ಥೆಯನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ನೋಡಿಕೊಳ್ಳಲಿದೆ.
𝐖𝐚𝐧𝐤𝐡𝐞𝐝𝐞 🏟️ will be buzzing as over 𝟏𝟗𝟎𝟎𝟎 girls shout with one voice: MUMBAIIIII, MUMBAIIII! 👏👏#OneFamily #MumbaiIndians #MumbaiMeriJaan #ESADay @ril_foundation pic.twitter.com/AH3ZTFMXFm
— Mumbai Indians (@mipaltan) April 15, 2023
ಮಕ್ಕಳಿಗೆ ಎಲ್ಲಾ ಸೌಲಭ್ಯ ನೀಡಲಿದೆ ರಿಲಯನ್ಸ್ ಫೌಂಡೇಶನ್
ಇಎಎಸ್ ಎಂದರೆ ಎಲ್ಲರಿಗೂ ಶಿಕ್ಷಣ ಮತ್ತು ಕ್ರೀಡೆ (Education and Sports for All) 2010ರಲ್ಲಿ ರಿಲಯನ್ಸ್ ಫೌಂಡೇಶನ್ ಈ ಕಾರ್ಯಕ್ರಮವನ್ನು ಶುರು ಮಾಡಿತು. ಅಂಬಾನಿ ಮಾರ್ಗದರ್ಶನದಲ್ಲಿ ಇದು ಕೆಲಸ ಮಾಡಲಿದೆ. ಈ ಕಾರ್ಯಕ್ರಮ ಈಗಾಗಲೇ 21.5 ಮಿಲಿಯನ್ ಮಕ್ಕಳನ್ನು ತಲುಪಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರೇತರ ಸಂಸ್ಥೆಗಳ ಶಿಕ್ಷಣ ಮತ್ತು ಕ್ರೀಡೆಗೆ ಹೆಚ್ಚಿನ ಬೆಂಬಲ ನೀಡುತ್ತಾ ಬಂದಿದೆ.
19000 ಮಕ್ಕಳ ಬಗ್ಗೆ ರಿಲಯನ್ಸ್ ಫೌಂಡೇಶನ್ ಹೆಚ್ಚಿನ ಕಾಳಜಿ ವಹಿಸಿಕೊಳ್ಳಲಿದೆ. 19,000 ಮಕ್ಕಳನ್ನು ಕ್ರೀಡಾಂಗಣಕ್ಕೆ ಸಾಗಿಸಲು 2000 ಸ್ವಯಂ ಸೇವಕರೊಂದಿಗೆ 500 ಅತ್ಯುತ್ತಮ ಖಾಸಗಿ ಬಸ್‌ಗಳನ್ನು ನಿಯೋಜಿಸಲಾಗಿದೆ. 100,000 ಆಹಾರ ಪೊಟ್ಟಣಗಳನ್ನು ಒದಗಿಸಲಾಗುವುದು. ಮಕ್ಕಳಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಎಲ್ಲಾ ಮಕ್ಕಳಿಗೆ ಉಚಿತವಾಗಿ ಇಎಸ್‌ಎ ಟೀ ಶರ್ಟ್‌ಗಳನ್ನು ಪಡೆದುಕೊಳ್ಳಲಿದ್ದಾರೆ. ವಾಂಖೆಡೆ ಕಾನ್ಕೋರ್ಸ್‌ನಲ್ಲಿ ಸಾಲಾಗಿ ನಿಂತಿರುವ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತಾರೆ.
ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಇದರ ಪಾಲುದಾರರಾಗಿದ್ದಾರೆ, ಪ್ರತಿ ಬಾರಿ ಐಪಿಎಲ್‌ನಲ್ಲಿ ಈ ರೀತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತದೆ. ಕ್ರೀಡೆಗೆ ಪ್ರೋತ್ಸಾಹ ನೀಡಲು ಅವರು ಮಕ್ಕಳನ್ನು ಕ್ರೀಡಾಂಗಣಕ್ಕೆ ಆಹ್ವಾನಿಸುತ್ತಾರೆ. ಮಕ್ಕಳು ಕ್ರೀಡಾಂಗಣದಲ್ಲಿ ಆಗಮಿಸಿ ನೆಚ್ಚಿನ ಕ್ರಿಕೆಟಿಗರನ್ನು ನೋಡಿ ಆನಂದಿಸುತ್ತಾರೆ.ಸಮಾಜದಲ್ಲಿ ಬದಲಾವಣೆ ತರಲು ಕ್ರೀಡೆಗಳನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವುದಕ್ಕೆ ಇದು ಅತ್ಯುತ್ತಮ ಉದಾಹರಣೆಯಾಗಿದೆ.

ತವರಿನಲ್ಲಿ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್
ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸುವ ಮೂಲಕ ಈ ಐಪಿಎಲ್‌ನ ಮೊದಲ ಗೆಲುವು ಸಾಧಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧದ ಸೋಲನುಭವಿಸಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಏರಲಿದೆ.












Click it and Unblock the Notifications