KKR vs RCB: ಚಿನ್ನಸ್ವಾಮಿಯಲ್ಲಿ ಅಬ್ಬರಿಸಿದ ಕೆಕೆಆರ್; ಆರ್‌ಸಿಬಿಗೆ ಕಠಿಣ ರನ್‌ಗಳ ಗುರಿ

IPL 2023: Kolkata Knight Riders sets the huge target of 201 runs to Royal Challengers Bangalore

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 36ನೇ ಪಂದ್ಯ ಇಂದು ( ಏಪ್ರಿಲ್ 26 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದ್ದು, ಇತ್ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋಲನ್ನು ಕಂಡಿತ್ತು. ಆ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಿಕ್ಕಿರುವ ಅವಕಾಶ ಇದಾಗಿದ್ದು, ಆರ್‌ಸಿಬಿ ಗೆಲ್ಲುವತ್ತ ಚಿತ್ತ ನೆಟ್ಟು ಕಣಕ್ಕಿಳಿದಿದೆ.

ಇನ್ನು ಈ ಪಂದ್ಯದಲ್ಲಿಯೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ವಿರಾಟ್ ಕೊಹ್ಲಿಯೇ ನಾಯಕನಾಗಿ ಮುನ್ನಡೆಸುತ್ತಿದ್ದು, ಟಾಸ್ ಗೆದ್ದ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಕಲೆಹಾಕಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 201 ರನ್‌ಗಳ ಗುರಿಯನ್ನು ನೀಡಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕ ಆಟಗಾರರಾಗಿ ಜೇಸನ್ ರಾಯ್ ಹಾಗೂ ಎನ್ ಜಗದೀಶನ್ ಕಣಕ್ಕಿಳಿದರು. ಜೇಸನ್ ರಾಯ್ ಅಬ್ಬರಿಸಿದರೆ, ಜಗದೀಶನ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರು. ಜೇಸನ್ ರಾಯ್ 29 ಎಸೆತಗಳನ್ನು ಎದುರಿಸಿ 56 ರನ್ ಗಳಿಸಿದರೆ, ಜಗದೀಶನ್ 29 ಎಸೆತಗಳಲ್ಲಿ 27 ರನ್ ಗಳಿಸಿದರು. ಇನ್ನುಳಿದಂತೆ ವೆಂಕಟೇಶ್ ಅಯ್ಯರ್ 26 ಎಸೆತಗಳಲ್ಲಿ 31 ರನ್, ನಾಯಕ ನಿತೀಶ್ ರಾಣಾ 21 ಎಸೆತಗಳಲ್ಲಿ 48 ರನ್, ಆಂಡ್ರೆ ರಸೆಲ್ 1 ರನ್, ರಿಂಕು ಸಿಂಗ್ 10 ಎಸೆತಗಳಲ್ಲಿ ಅಜೇಯ 18 ರನ್ ಗಳಿಸಿದರೆ, ಡೇವಿಡ್ 3 ಎಸೆತಗಳಲ್ಲಿ 12 ರನ್ ಚಚ್ಚಿ ಅಜೇಯರಾಗಿ ಉಳಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿಜಯ್ ಕುಮಾರ್ ವೈಶಾಖ್ ಎರಡು ವಿಕೆಟ್, ವನಿಂದು ಹಸರಂಗ ಎರಡು ವಿಕೆಟ್ ಹಾಗೂ ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದರು.

ಆಡುವ ಬಳಗಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ(ನಾಯಕ), ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಡೇವಿಡ್ ವಿಲ್ಲಿ, ವಿಜಯ್‌ಕುಮಾರ್ ವೈಶಾಕ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ಇನ್ನುಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಎನ್ ಜಗದೀಸನ್(ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಡೇವಿಡ್ ವೈಸ್, ವೈಭವ್ ಅರೋರಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಮೊದಲ ಬಾರಿ ಇತ್ತಂಡಗಳು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾದಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿತ್ತು.

ಹೀಗಾಗಿ ಈ ಮುಖಾಮುಖಿ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇಡು ತೀರಿಸಿಕೊಳ್ಳಲು ಸಿಕ್ಕಿರುವ ವೇದಿಕೆಯಾಗಿದೆ. ಇನ್ನು ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವುದು ರಾಯಲ್ ಚಾಲೆಂಜರ್ಸ್‌ಗೆ ಪ್ಲಸ್ ಪಾಯಿಂಟ್ ಆಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+