KKR vs RR: ರನ್ ಗಳಿಸಲು ಪರದಾಡಿದ ಕೆಕೆಆರ್; ರಾಜಸ್ಥಾನ್‌ಗೆ ಸಾಧಾರಣ ಗುರಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 56 ನೇ ಪಂದ್ಯ ಇಂದು ( ಮೇ 11 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಫೀಲ್ಡಿಂಗ್ ಮಾಡುವ ಆಯ್ಕೆ ಮಾಡಿಕೊಂಡು ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿದ್ದು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 150 ರನ್‌ಗಳ ಗುರಿಯನ್ನು ನೀಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕ ಆಟಗಾರರಾಗಿ ಜೇಸನ್ ರಾಯ್ ಹಾಗೂ ರಹ್ಮನ್ನುಲ್ಲಾ ಗುರ್ಬಜ್ ಕಣಕ್ಕಿಳಿದರು. ಈ ಪೈಕಿ ಜೇಸನ್ ರಾಯ್ 8 ಎಸೆತಗಳಲ್ಲಿ 10 ರನ್, ರಹ್ಮನ್ನುಲ್ಲಾ ಗುರ್ಬಜ್ 12 ಎಸೆತಗಳಲ್ಲಿ 18 ರನ್ ಕಲೆಹಾಕಿದರು. ಇನ್ನುಳಿದಂತೆ ವೆಂಕಟೇಶ್ ಐಯ್ಯರ್ 42 ಎಸೆತಗಳಲ್ಲಿ 57 ರನ್, ನಿತಿಶ್ ರಾಣಾ 17 ಎಸೆತಗಳಲ್ಲಿ 22 ರನ್, ಆಂಡ್ರೆ ರಸೆಲ್ 10 ಎಸೆತಗಳಲ್ಲಿ 10 ರನ್, ರಿಂಕು ಸಿಂಗ್ 18 ಎಸೆತಗಳಲ್ಲಿ 16 ರನ್, ಶಾರ್ದೂಲ್ ಠಾಕೂರ್ 2 ಎಸೆತಗಳಲ್ಲಿ 1 ರನ್, ಸುನಿಲ್ ನರೇನ್ 5 ಎಸೆತಗಳಲ್ಲಿ 6 ರನ್, ಅನುಕುಲ್ ರಾಯ್ 6 ಎಸೆತಗಳಲ್ಲಿ ಅಜೇಯ 6 ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಯುಜ್ವೇಂದ್ರ ಚಹಲ್ 4 ವಿಕೆಟ್, ಟ್ರೆಂಟ್ ಬೌಲ್ಟ್ 2 ವಿಕೆಟ್, ಸಂದೀಪ್ ಶರ್ಮಾ ಹಾಗೂ ಕೆಎಂ ಆಸಿಫ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಗಳಗಳು:
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ ಹಾಗೂ ವಿಕೆಟ್ ಕೀಪರ್), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್(ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಅನುಕೂಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ












Click it and Unblock the Notifications