ಐಪಿಎಲ್ 2023: ನೂತನ ಜರ್ಸಿಯನ್ನು ಅನಾವರಣಗೊಳಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಮಾರ್ಚ್ 31ರಂದು ಆರಂಭವಾಗಲಿರುವ ಈ ಚುಟುಕು ಕ್ರಿಕೆಟ್‌ನ ಮಹಾಸಮರಕ್ಕೆ ತಂಡಗಳು ಅಂತಿಮ ಹಂತದ ಸಿದ್ಧತೆಯನ್ನು ನಡೆಸುತ್ತಿದೆ. ಇನ್ನು ಟೂರ್ನಿಯಲ್ಲಿ ಕಣಕ್ಕಿಳಿಯಲು ಫ್ರಾಂಚೈಸಿಗಳು ನೂತನ ಜರ್ಸಿಯನ್ನು ಬಿಡುಗಡೆಗೊಳಿಸುವುದು ಸಾಮಾನ್ಯ. ಇದೀಗ ಈ ಬಾರಿಯ ಐಪಿಎಲ್‌ನಲ್ಲಿ ನೂತನ ಜರ್ಸಿಯನ್ನು ಬಿಡುಗಡೆಗೊಳಿಸಿರುವ ತಂಡಗಳ ಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಸೇರಿಕೊಂಡಿದೆ.
ಹೌದು, ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 2023ನೇ ಆವೃತ್ತಿಯ ಐಪಿಎಲ್‌ನಲ್ಲಿ ಧರಿಸಲಿರುವ ಜರ್ಸಿಯನ್ನು ಅನಾವರಣಗೊಳಿಸಿದೆ. ಕೆಕೆಆರ್ ಫ್ರಾಂಚೈಸಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು ತಂಡದ ಕೆಲ ಸ್ಟಾರ್ ಆಟಗಾರರು ನೂತನ ಜರ್ಸಿಯೊಂದಿಗೆ ಫೋಸ್ ನೀಡಿದ್ದಾರೆ. ಆಂಡ್ರೆ ರಸೆಲ್, ರಿಂಕು ಸಿಂಗ್ ಸೇರಿದಂತೆ ಕೆಲ ಆಟಗಾರರು ಕೆಕೆಆರ್ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.
CCL 2023: ರೋಚಕ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ಸೋಲು: ಫೈನಲ್ ತಲುಪಿದ ತೆಲುಗು ವಾರಿಯರ್ಸ್
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟಕದ್ಕೇರಿದ್ದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಬಳಿಕ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿ ಎನಿಸಿಕೊಂಡಿದೆ. 2012 ಹಾಗೂ 2014ರಲ್ಲಿ ಕೆಕೆಆರ್ ತಂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಟ್ರೋಫಿ ಗೆದ್ದುಕೊಂಡಿತ್ತು. ಆದರೆ ಅದಾದ ಬಳಿಕ ಐಪಿಎಲ್‌ನಲ್ಲಿ ಹೇಳಿಕೊಳ್ಳುವಂತಾ ಯಶಸ್ಸು ಸಾಧ್ಯವಾಗಿರಲಿಲ್ಲ. ಆದರೆ 2021ರ ಆವೃತ್ತಿಯಲ್ಲಿ ಫೈನಲ್ ಹಂತಕ್ಕೇರಿದ್ದ ಕೆಕೆಆರ್ 2022ರ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸಿ 7ನೇ ಸ್ಥಾನವನ್ನು ಪಡೆದುಕೊಂಡಿತ್ತು.
ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆರಂಭದಲ್ಲಿಯೇ ದೊಡ್ಡ ಹಿನ್ನಡೆಯುಂಟಾಗಿದೆ. ತಂಡದ ನಾಯಕ ಶ್ರೇಯಸ್ ಐಯ್ಯರ್ ಗಾಯಗೊಂಡಿದ್ದು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸದಿರುವುದು ದೃಢಪಟ್ಟಿದೆ. ಹೀಗಾಗಿ ನೂತನ ನಾಯಕನ ಮುಂದಾಳತ್ವದಲ್ಲಿ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಣಕ್ಕಿಳಿಯಲಿದೆ.
ನಾಯಕನ ಬಗ್ಗೆ ಮುಂದುವರಿದ ಗೊಂದಲ: ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುನ್ನಡೆಸುವವರು ಯಾರು ಎಂಬುದು ಸದ್ಯಕ್ಕೆ ಕಾಡುತ್ತಿರುವ ಪ್ರಶ್ನೆಯಾಗಿದೆ. ಈ ವಿಚಾರವಾಗಿ ಫ್ರಾಂಚೈಸಿ ಕೂಡ ಈವರೆಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಸುನಿಲ್ ನರೈನ್‌ಗೆ ನಾಯಕತ್ವದ ಹೊಣೆಗಾರಿಕೆ ನೀಡಬಹುದು ಎಂಬ ಬಗ್ಗೆ ಮಾತುಗಳು ಕೇಳುಬರುತ್ತಿವೆ.
Afg Vs Pak T20: ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ
ಆದರೆ ಐಎಲ್‌ಟಿ20 ಲೀಗ್‌ನಲ್ಲಿ ಕೆಕೆಆರ್ ಮಾಲೀಕತ್ವದ ಅಬುದಾಬಿ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ಸುನಿಲ್ ನೆರೈನ್ ನಾಯಕನಾಗಿ ಭಾರೀ ವೈಫಲ್ಯ ಕಂಡಿದ್ದರು. ಈ ಬಾರಿಯ ಆವೃತ್ತಿಯಲ್ಲಿ ಆಡಿದ 10 ಪಂದ್ಯಗಳಲ್ಲಿ ನರೈನ್ ನಾಯಕತ್ವದ ತಂಡ ಕೇವಲ 2 ಗೆಲುವು ಸಾಧಿಸಿದ್ದು 8 ಪಂದ್ಯಗಳಲ್ಲಿ ಸೋಲು ಕಂಡಿತ್ತು. ಇಂತಾ ಹಿನ್ನಡೆಯಿದ್ದ ಹೊರತಾಗಿಯೂ ಸುನಿಲ್ ನರೈನ್‌ಗೆ ಕೆಕೆಆರ್ ಪ್ರಾಂಚೈಸಿ ನಾಯಕತ್ವ ನೀಡಲಿದೆಯಾ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.
ಕೆಕೆಆರ್ ಸಂಪೂರ್ಣ ಸ್ಕ್ವಾಡ್: ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಮನ್ದೀಪ್ ಸಿಂಗ್, ಶಕೀಬ್ ಅಲ್ ಹಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಎನ್ ಜಗದೀಸನ್, ವೈಭವ್ ಅರೋರಾ, ಸುಯಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಲಿಟ್ಟನ್ ದಾಸ್












Click it and Unblock the Notifications