CSK vs KKR: ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2023: Kolkata Knight Riders vs Chennai Super Kings head to head record details

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ಮೇ 14ರ ಭಾನುವಾರ ಲೀಗ್ ಹಂತದ 60 ಹಾಗೂ 61 ನೇ ಪಂದ್ಯಗಳು ಜರುಗುತ್ತಿವೆ. ಸದ್ಯ ಆರಂಭವಾಗಿರುವ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿದ್ದರೆ, ಸಂಜೆ ಆರಂಭಗೊಳ್ಳಲಿರುವ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಈಗಾಗಲೇ ಪ್ಲೇಆಫ್ ಪ್ರವೇಶಿಸುವ ಅವಕಾಶವನ್ನು ಬಹುತೇಕ ಕಳೆದುಕೊಂಡಿದ್ದು, ಈ ಪಂದ್ಯ ಕೊಲ್ಕತ್ತಾ ನೈಟ್ ರೈಡರ್ಸ್‌ಗಿಂತ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಖ್ಯವಾಗಿದೆ.

ಹೌದು, ಈ ಪಂದ್ಯದಲ್ಲಿ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದು, ಪ್ಲೇಆಫ್ ಸುತ್ತಿಗೆ ಅಧಿಕೃತವಾಗಿ ಪ್ರವೇಶಿಸಲಿರುವ ಪ್ರಥಮ ತಂಡ ಎನಿಸಿಕೊಳ್ಳಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 7 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತಿದೆ, ಉಳಿದೊಂದು ಪಂದ್ಯ ಮಳೆಗಾಹುತಿಯಾದ ಕಾರಣ ಒಂದು ಅಂಕ ಪಡೆದುಕೊಂಡು ಒಟ್ಟು 15 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಇನ್ನು ಇತ್ತಂಡಗಳು ಮುಖಾಮುಖಿಯಾಗಲಿರುವ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯ ಇದಾಗಿದ್ದು, ಏಪ್ರಿಲ್ 23ರಂದು ನಡೆದಿದ್ದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 49 ರನ್‌ಗಳ ಅಂತರದ ಗೆಲುವನ್ನು ದಾಖಲಿಸಿತ್ತು.

ಇದು ಈ ಬಾರಿಯ ಟೂರ್ನಿಯ ಫಲಿತಾಂಶವಾದರೆ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಟ್ಟು 28 ಪಂದ್ಯಗಳು ನಡೆದಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೊಲ್ಕತ್ತಾ ನೈಟರ್ ರೈಡರ್ಸ್ 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಎರಡು ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.

ಕಳೆದ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡೂ ತಂಡಗಳು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ 6 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 3 ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಈ ಎಲ್ಲಾ ಪಂದ್ಯಗಳಲ್ಲಿಯೂ ಸಹ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಕಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+