KKR vs PBKS: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದ ತಂಡ ಯಾವುದು?

IPL 2023: Kolkata Knight Riders vs Punjab Kings head to head record details

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 53ನೇ ಪಂದ್ಯ ಇಂದು ( ಮೇ 8 ) ಜರುಗಲಿದ್ದು, ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

ಈ ಮೂಲಕ ಪಂಜಾಬ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಒಂದು ಪಂದ್ಯ ಹೆಚ್ಚು ಗೆದ್ದು ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನದಲ್ಲಿದೆ. ಈ ಎರಡೂ ತಂಡಗಳೂ ಸಹ ಪ್ಲೇಆಫ್ ರೇಸ್‌ನಲ್ಲಿದ್ದು, ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಗುರಿಯನ್ನು ಹೊಂದಿವೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪರಸ್ಪರ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಏಪ್ರಿಲ್ 1ರಂದು ನಡೆದಿದ್ದ ಟೂರ್ನಿಯ ಎರಡನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು.

ಈ ಪಂದ್ಯವೂ ಸೇರಿದಂತೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಎರಡೂ ತಂಡಗಳೂ ಸಹ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ 20 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ಉಳಿದ 11 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿ ಸೆಣಸಾಟದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಟೂರ್ನಿಯ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾಗ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಗೆದ್ದಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿ ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 192 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ 16 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಕಲೆಹಾಕಿತ್ತು. ಆದರೆ ಮಳೆ ಬಂದ ಕಾರಣ ಪಂದ್ಯ ಸ್ಥಗಿತಗೊಂಡಿತ್ತು. ಡೆಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಪಂಜಾಬ್ ಕಿಂಗ್ಸ್ 7 ರನ್‌ಗಳ ಗೆಲುವನ್ನು ಕಂಡಿತ್ತು.

ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡು ತಂಡಗಳು ಪರಸ್ಪರ ಒಂದು ಪಂದ್ಯದಲ್ಲಿ ಕಣಕ್ಕಿಳಿದಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ಕಿಂಗ್ಸ್ 18.2 ಓವರ್‌ಗಳಲ್ಲಿ 137 ರನ್‌ಗಳಿಗೆ ಆಲ್ ಔಟ್ ಆಗಿತ್ತು. ಈ ಗುರಿಯನ್ನು ಕೇವಲ 14.3 ಓವರ್‌ಗಳಲ್ಲಿ ಬೆನ್ನತ್ತಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ 4 ವಿಕೆಟ್ ನಷ್ಟಕ್ಕೆ 141 ರನ್ ಕಲೆಹಾಕಿತ್ತು. ಈ ಪಂದ್ಯದಲ್ಲಿ ಆಂಡ್ರೆ ರಸೆಲ್ 31 ಎಸೆತಗಳಿಗೆ 2 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 70 ರನ್ ಚಚ್ಚಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+