IPL 2023 Telecast Channel: ಭಾರತದಲ್ಲಿ ಐಪಿಎಲ್ ಪಂದ್ಯಗಳ ಟಿವಿ ವೀಕ್ಷಣೆ, ಲೈವ್ ಸ್ಟ್ರೀಮಿಂಗ್ ಮಾಹಿತಿ

2023ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನ 16ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ, ಮಾರ್ಚ್ 31ರಂದು ಅದ್ಧೂರಿ ಚಾಲನೆ ಸಿಗಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಬಲಿಷ್ಠ ಪಡೆಯನ್ನು ಹೊಂದಿದ್ದು, ಐದನೇ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯಲು ಎಲ್ಲ ತಯಾರಿ ನಡೆಸಿದೆ. ಕಳೆದ ಬಾರಿ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಅದೇ ರೀತಿ ಗುಜರಾತ್ ಟೈಟನ್ಸ್ ತಂಡ ಕಳೆದ ವರ್ಷದ ಪ್ರದರ್ಶನವನ್ನು ಮುಂದುವರಿಸಲು ತನ್ನ ಮೊದಲ ತವರಿನ ಪಂದ್ಯವನ್ನು ಗೆಲ್ಲಲು ಎದುರು ನೋಡುತ್ತಿದೆ.

IPL 2023 Live Streaming: IPL 2023 Matches In TV And Live Streaming Details

ಇದೇ ವೇಳೆ ಇಂಗ್ಲೆಂಡ್‌ನ ಆಲ್‌ರೌಂಡರ್‌ಗಳಾದ ಬೆನ್ ಸ್ಟೋಕ್ಸ್ ಮತ್ತು ಸ್ಯಾಮ್ ಕುರ್ರಾನ್ ತಮ್ಮ ಗಾಯದ ಕಾರಣಗಳಿಂದಾಗಿ ಕಳೆದ ವರ್ಷದ ಐಪಿಎಲ್ ಪಂದ್ಯಾವಳಿಯನ್ನು ತಪ್ಪಿಸಿಕೊಂಡಿದ್ದರು. ಈ ವರ್ಷ ಇವರಿಬ್ಬರನ್ನು ಖರೀದಿಸಲು ಐಪಿಎಲ್ ಫ್ರಾಂಚೈಸಿಗಳು ಆಸಕ್ತಿ ತೋರಿಸಿದ್ದವು. ಅಂತಿಮವಾಗಿ ಸ್ಯಾಮ್ ಕುರ್ರಾನ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರನಾದರು. ಪಂಜಾಬ್ ಕಿಂಗ್ಸ್ ತಂಡ 18.50 ಕೋಟಿ ರೂ.ಗೆ ಸ್ಯಾಮ್ ಕುರ್ರಾನ್ ಖರೀಸಿದರೆ, ಬೆನ್ ಸ್ಟೋಕ್ಸ್ ಅವರನ್ನು 16.25 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಾದರು.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೆಲವು ತಂಡಗಳು ಹೊಸ ನಾಯಕರನ್ನು ಅಯ್ಕೆ ಮಾಡಿವೆ. ಗಮನಾರ್ಹವಾಗಿ, ಸನ್‌ರೈಸರ್ಸ್ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಅವರನ್ನು ಬಿಡುಗಡೆ ಮಾಡಿ, ದಕ್ಷಿಣ ಆಫ್ರಿಕಾದ ಅಂತಾರಾಷ್ಟ್ರೀಯ SA20 ಲೀಗ್‌ನ ಉದ್ಘಾಟನಾ ಆವೃತ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾದ ಏಡೆನ್ ಮಾರ್ಕ್ರಾಮ್ ಅವರನ್ನು ತಮ್ಮ ತಂಡದ ನಾಯಕನನ್ನಾಗಿ ನೇಮಿಸಿದೆ.

IPL 2023 Live Streaming: IPL 2023 Matches In TV And Live Streaming Details

ಮತ್ತೊಂದೆಡೆ, ಗಾಯಗೊಂಡ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಹಂಗಾಮಿ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ರಿಷಭ್ ಪಂತ್ ಬದಲಾಗಿ ಡೇವಿಡ್ ವಾರ್ನರ್ ಅವರನ್ನು ನೂತನ ನಾಯಕನನ್ನಾಗಿ ಘೋಷಿಸಿದೆ. ರಿಷಭ್ ಪಂತ್ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದಾರೆ.

ಇದೇ ವೇಳೆ, ಐಪಿಎಲ್ ಹರಾಜಿಗೂ ಮುನ್ನ ಮಯಾಂಕ್ ಅಗರ್ವಾಲ್ ಅವರನ್ನು ಬಿಡುಗಡೆ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್‌ಗೆ ನಾಯಕತ್ವದ ಪಟ್ಟ ಕಟ್ಟಿದೆ. ಪಂಜಾಬ್ ಕಿಂಗ್ಸ್ ತಂಡ ಕಳೆದ ಎಂಟು ವರ್ಷಗಳಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ. ಹಾಗಾಗಿ ಈ ಬಾರಿ ಬಲಿಷ್ಠ ತಂಡವನ್ನು ಕಟ್ಟಿಕೊಂಡು ಉಳಿದ ತಂಡಗಳಿಗೆ ಕಠಿಣ ಸವಾಲು ನೀಡಲು ಸಜ್ಜಾಗಿದೆ.

IPL 2023 Live Streaming: IPL 2023 Matches In TV And Live Streaming Details

ಭಾರತದಲ್ಲಿ 2023ರ ಐಪಿಎಲ್ ಟಿವಿ ವೀಕ್ಷಣೆ ಎಲ್ಲಿ?
2023ರ ಐಪಿಎಲ್‌ನ ಎಲ್ಲಾ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 HD, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ 3 HD ಚಾನೆಲ್‌ಗಳಲ್ಲಿ ಹಿಂದಿ, ತಮಿಳು, ತೆಲುಗು, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ ಮತ್ತು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

2023ರ ಐಪಿಎಲ್ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
2023ರ ಐಪಿಎಲ್ ಪಂದ್ಯಾವಳಿಯನ್ನು ಈ ಬಾರಿ Jio Cinemaದಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು. ಇಂಗ್ಲೀಷ್, ಹಿಂದಿ, ಮರಾಠಿ, ಗುಜರಾತಿ, ಭೋಜ್‌ಪುರಿ, ಬೆಂಗಾಲಿ, ಒರಿಯಾ, ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+