IPL 2023: ಮೇ 3ರ ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಮರು ನಿಗದಿ: ಕಾರಣವೇನು?
ಸದ್ಯ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮಹತ್ವದ ಬೆಳವಣಿಗೆಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಾವಳಿಯ 46ನೇ ಪಂದ್ಯವನ್ನು ಮರು ನಿಗದಿಗೊಳಿಸಲಾಗಿದೆ.
ಉತ್ತರಪ್ರದೇಶ ರಾಜಧಾನಿ ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಅವಕಾಶ ಕಲ್ಪಿಸುವ ಸಲುವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವವನ್ನು ಮರುನಿಗದಿಗೊಳಿಸಲಾಗಿದೆ. ಮೇ 4ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ಅದೇ ದಿನ ಪಂದ್ಯವನ್ನು ಆಡಿಸಲಾಗಿತ್ತದೆ.

ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯನ್ನು ಸುಗಮವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗವು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಅಗತ್ಯತೆಯಿಂದಾಗಿ, ಐಪಿಎಲ್ ಮ್ಯಾನೇಜ್‌ಮೆಂಟ್ ಬುಧವಾರ, ಮೇ 3ರಂದು ಮಧ್ಯಾಹ್ನ ಸ್ಲಾಟ್‌ನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮುಂದೂಡಲು ನಿರ್ಧರಿಸಿದೆ. ಗಮನಾರ್ಹವಾಗಿ, ಈ ಪಂದ್ಯವನ್ನು ಮಧ್ಯಾಹ್ನ 3:30ರ ಸ್ಲಾಟ್‌ನಲ್ಲಿ ಆಡಬೇಕಿತ್ತು.
ಉತ್ತರಪ್ರದೇಶ ರಾಜಧಾನಿ ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯನ್ನು ಮೇ 4 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಅಲ್ಲಿ ಮತದಾರರು 17 ಮುನ್ಸಿಪಲ್ ಕಾರ್ಪೊರೇಷನ್‌ಗಳು, 199 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 439 ನಗರ ಪಂಚಾಯತ್‌ಗಳಿಗೆ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಇದರ ಫಲಿತಾಂಶ ಮೇ 13ರಂದು ಪ್ರಕಟವಾಗಲಿದೆ.
ಏಪ್ರಿಲ್ 19ರಂದು ಲಕ್ನೋ ಸೂಪರ್ ಜೈಂಟ್ಸ್ vs ರಾಜಸ್ಥಾನ ರಾಯಲ್ಸ್
2023ರ ಐಪಿಎಲ್ ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ತಮ್ಮ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಬುಧವಾರ, ಏಪ್ರಿಲ್ 19ರಂದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಜೈಪುರದಲ್ಲಿ ಎದುರಿಸಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧದ ಸೋಲಿನ ಹಿನ್ನಲೆಯಲ್ಲಿ ಬರುತ್ತಿದೆ. ಆ ಪಂದ್ಯದಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಫಾರ್ಮ್ ಬಂದರು. ಕೆಎಲ್ ರಾಹುಲ್ ಕೇವಲ 56 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ 1 ಸಿಕ್ಸರ್ ಒಳಗೊಂಡಂತೆ 74 ರನ್ ಬಾರಿಸಿದರು.
ಈವರೆಗೆ ಐದು ಪಂದ್ಯಗಳನ್ನು ಆಡಿರುವ ಲಕ್ನೋ ಸೂಪರ್ ಜೈಂಟ್ಸ್ 3 ಗೆಲುವು ಮತ್ತು 2 ಸೋಲಿನೊಂದಿಗೆ 6 ಅಂಕಗಳನ್ನು ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡ ಅಡಿದ ಐದು ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಒಂದು ಸೋಲಿನೊಂದಿಗೆ 8 ಅಂಕ ಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಆರ್‌ಸಿಬಿ ವಿರುದ್ಧ ಗೆದ್ದು ಬೀಗಿದ ಸಿಎಸ್‌ಕೆ
ಸೋಮವಾರ, ಏಪ್ರಿಲ್ 17ರಂದು ಬೆಂಗಳೂರಿನಲ್ಲಿ ನಡೆದ 2023ರ ಐಪಿಎಲ್‌ನ ಹೈ-ವೋಲ್ಟೇಜ್ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ರನ್‌ಗಳಿಂದ ಗೆಲುವು ಸಾಧಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 226 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಈ ರನ್ ಚೇಸ್ ಮಾಡಿದ್ದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 218 ರನ್ ಗಳಿಸಲಷ್ಟೇ ಶಕ್ತವಾಯಿತು.
ಆರ್‌ಸಿಬಿ ಆಡಿದ 5 ಪಂದ್ಯಗಳಲ್ಲಿ ಮೂರು ಸೋಲು ಮತ್ತು ಎರಡು ಗೆಲುವು ಸಾಧಿಸಿ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಸಿಎಸ್‌ಕೆ ಆಡಿದ 5 ಪಂದ್ಯಗಳಲ್ಲಿ ಮೂರು ಗೆಲುವು ಮತ್ತು ಎರಡು ಸೋಲಿನೊಂದಿಗೆ 6 ಅಂಕ ಗಳಿಸಿ 3ನೇ ಸ್ಥಾನಕ್ಕೆ ಏರಿದೆ.












Click it and Unblock the Notifications