LSG vs SRH IPL 2023: ಲಕ್ನೋ vs ಹೈದರಾಬಾದ್ ಪಂದ್ಯದ ವಿವರ; ಸಂಭಾವ್ಯ ಆಡುವ 11ರ ಬಳಗ, ಪಿಚ್ ವರದಿ
ಶುಕ್ರವಾರ, ಏಪ್ರಿಲ್ 7ರಂದು ಲಕ್ನೋದಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ 10ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಏಡೆನ್ ಮಾರ್ಕ್ರಾಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಲಕ್ನೋ ಸೂಪರ್‌ಜೈಂಟ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ನಂತರ ಚೆನ್ನೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 12 ರನ್‌ಗಳ ಸೋಲು ಕಂಡಿತು. ಮತ್ತೊಂದೆಡೆ, ಸನ್‌ರೈಸರ್ಸ್ ಹೈದರಾಬಾದ್ ತಂಡವು ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಘಾತಕಾರಿಯಾಗಿ ಸೋತಿತ್ತು.

ರಾಜಸ್ಥಾನ ರಾಯಲ್ಸ್ ತಂಡ ನೀಡಿದ್ದ 203 ರನ್‌ಗಳ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗದೇ, ಸನ್‌ರೈಸರ್ಸ್ ಹೈದರಾಬಾದ್ ತಂಡ 72 ರನ್‌ಗಳ ದೊಡ್ಡ ಅಂತರದಿಂದ ಸೋಲೊಪ್ಪಿಕೊಂಡಿತು. ಇದೀಗ ಹೈದರಾಬಾದ್ ತಂಡಕ್ಕೆ ಹೊಸ ನಾಯಕ ಏಡೆನ್ ಮಾರ್ಕ್ರಾಮ್ ತಂಡವನ್ನು ಕೂಡಿಕೊಂಡಿದ್ದು, ತಮ್ಮ ತಂಡಕ್ಕೆ ಗೆಲುವಿನ ಖಾತೆ ತೆರೆಯಲು ಪ್ರಯತ್ನಿಸಲಿದ್ದಾರೆ.
ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಕಳೆದ ಎರಡು ಪಂದ್ಯಗಳಲ್ಲಿ ತಮ್ಮ ನೈಜ ಆಟ ಆಡಲು ವಿಫಲರಾಗಿದ್ದು, ಈ ಪಂದ್ಯದಲ್ಲಾದರೂ ತಮ್ಮ ಬ್ಯಾಟಿಂಗ್ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ. ಕೈಲ್ ಮೇಯರ್ಸ್ ಕಳೆದೆರಡು ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿ ಉತ್ತಮವಾಗಿ ಆಡುತ್ತಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯವು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಮತ್ತು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಲಕ್ನೋ ಪಿಚ್ ವರದಿ
ಲಕ್ನೋದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು, ಇಲ್ಲಿ ಒಟ್ಟು 9 ಐಪಿಎಲ್ ಪಂದ್ಯಗಳನ್ನು ಆಡಲಾಗಿದೆ. ಅದರಲ್ಲಿ 5 ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡವು ಗೆದ್ದಿದ್ದರೆ, 4 ಪಂದ್ಯಗಳನ್ನು ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಈ ಪಿಚ್‌ನಲ್ಲಿ ಸರಾಸರಿ 151 ರನ್ ಆಗಿದೆ. ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಲಕ್ನೋದ ಹವಾಮಾನ ವರದಿ
ಲಕ್ನೋದಲ್ಲಿ ಮೋಡ ಮುಸುಕಿದ ವಾತಾವರಣವಿರಲಿದೆ. ಪಂದ್ಯದ ದಿನದಂದು ತಾಪಮಾನವು ಶೇ.40ರಷ್ಟು ತೇವಾಂಶ ಮತ್ತು 0 ವೇಗದ ಗಾಳಿಯೊಂದಿಗೆ 31 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪಂದ್ಯ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ಶೇ.38ರಷ್ಟಿದೆ.
ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ 11ರ ಬಳಗ
ಲಕ್ನೋ ಸೂಪರ್ ಜೈಂಟ್ಸ್ ತಂಡ: ಕೆಎಲ್ ರಾಹುಲ್(ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ಮಾರ್ಕ್ ವುಡ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಅವೇಶ್ ಖಾನ್.
ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಫಜಲ್‌ಹಕ್ ಫಾರೂಕಿ.












Click it and Unblock the Notifications