LSG vs MI: ಸ್ಟಾಯಿನಿಸ್ ಅಬ್ಬರದ ಆಟ; ಮುಂಬೈಗೆ ಪೈಪೋಟಿಯುತ ಗುರಿ ನೀಡಿದ ಲಕ್ನೋ

IPL 2023: Marcus Stoinis unbeaten 89 helps LSG to mount 177/3 against Mumbai Indians

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 63ನೇ ಪಂದ್ಯ ಇಂದು ( ಮೇ 16 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಮಾರ್ಕಸ್ ಸ್ಟಾಯಿನಿಸ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ದೀಪಕ್ ಹೂಡಾ ಹಾಗೂ ಕ್ವಿಂಟನ್ ಡಿ ಕಾಕ್ ಕಣಕ್ಕಿಳಿದಿದ್ದರು. ದೀಪಕ್ ಹೂಡಾ 5 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ 16 ರನ್ ಗಳಿಸಿದರು. ಇನ್ನುಳಿದಂತೆ ಪ್ರೇರಕ್ ಮಂಕಾಡ್ ಗೋಲ್ಡನ್ ಡಕ್ಔಟ್ ಆದರೆ, ನಾಯಕ ಕೃನಾಲ್ ಪಾಂಡ್ಯ 49 ರನ್, ನಿಕೋಲಸ್ ಪೂರನ್ ಅಜೇಯ 8 ರನ್ ಹಾಗೂ ಮಾರ್ಕಸ್ ಸ್ಟಾಯಿನಿಸ್ 47 ಎಸೆತಗಳಲ್ಲಿ 4 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 89 ರನ್ ಗಳಿಸಿದರು.

ಮುಂಬೈ ಇಂಡಿಯನ್ಸ್ ತಂಡದ ಪರ ಜೇಸನ್ ಬೆಹ್ರೆಂಡ್ರಾಫ್ 2 ವಿಕೆಟ್, ಪಿಯೂಷ್ ಚಾವ್ಲಾ 1 ವಿಕೆಟ್ ಪಡೆದರು.

ಆಡುವ ಬಳಗಗಳು:

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಲ್

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೃನಾಲ್ ಪಾಂಡ್ಯ (ನಾಯಕ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಸ್ವಪ್ನಿಲ್ ಸಿಂಗ್, ಮೊಹ್ಸಿನ್ ಖಾನ್

ಇನ್ನು ಈ ಎರಡೂ ತಂಡಗಳೂ ಸಹ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇಆಫ್ ಹಾದಿಯನ್ನು ಸುಲಭಪಡಿಸಿಕೊಳ್ಳಲಿದ್ದು, ಸೋಲುವ ತಂಡದ ಪ್ಲೇಆಫ್ ಪ್ರವೇಶದ ಹಾದಿ ಕಠಿಣಗೊಳ್ಳಲಿದೆ.

12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮುಂಬೈ ಇಂಡಿಯನ್ಸ್ ಗೆಲ್ಲಬೇಕಿದ್ದು, ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಬಹುತೇಕ ಖಚಿತವಾದಂತೆ.

ಅತ್ತ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇಆಫ್ ಪ್ರವೇಶ ಪಡೆದುಕೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+