CSK vs SRH Preview: ಚೆನ್ನೈ ಸೂಪರ್ ಕಿಂಗ್ಸ್ ಸವಾಲು ಗೆಲ್ಲುತ್ತಾ ಸನ್‌ರೈಸರ್ಸ್: ಪ್ರಿವ್ಯೂ, ಸಂಭಾವ್ಯ ಆಡುವ ಬಳಗ
ಐಪಿಎಲ್‌ನಲ್ಲಿ ಶುಕ್ರವಾರ 29ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು ಕದನ ಕುತೂಹಲ ಮೂಡಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಭಾರಿಯ ಐಪಿಎಲ್‌ನಲ್ಲಿ ಸಾಧಾರಣ ಆರಂಭವನ್ನು ಪಡೆದುಕೊಂಡ ಬಳಿಕ ಅದ್ಭುತವಾಗಿ ಆಡುತ್ತಿದ್ದು ಎದುರಾಳಿಗಳಿಗೆ ಸವಾಲೊಡ್ಡಿದೆ. ಆಡಿರುವ ಐದು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ಆತ್ಮವಿಶ್ವಾಸದಲ್ಲಿದೆ.
ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿದ್ದು ಮೂರು ಸೋಲು ಕಂಡಿದೆ. ಆದರೆ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲಿನೊಂದಿಗೆ ಸಿಎಸ್‌ಕೆ ವಿರುದ್ಧ ಕದನಕ್ಕೆ ಸಿದ್ಧವಾಗಿದೆ. ಅದರಲ್ಲೂ ಚೆನ್ನೈ ತವರಿನಲ್ಲಿ ಈ ಪಂದ್ಯ ನಡೆಯಲಿರುವ ಕಾರಣ ಎಸ್‌ಆರ್‌ಹೆಚ್ ತಂಡಕ್ಕೆ ಹೆಚ್ಚಿನ ಸವಾಲಿರುವುದು ಸುಳ್ಳಲ್ಲ.

ಪಂದ್ಯದ ಆರಂಭ ಹಾಗೂ ನೇರಪ್ರಸಾರದ ಮಾಹಿತಿ
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು ಜಿಯೋ ಸಿನಿಮಾದಲ್ಲಿ ಪಂದ್ಯದ ನೇರಪ್ರಸಾರವಿರಲಿದೆ. ಸ್ಟಾರ್ ಸ್ಪೋರ್ಸ್ಟ್ ವಾಹಿನಿಯಲ್ಲಿಯೂ ಪಂದ್ಯವನ್ನು ವೀಕ್ಷಿಸುವ ಅವಕಾಶ ಅಭಿಮಾನಿಗಳಿಗಿದೆ.
ಪಿಚ್ ರಿಪೋರ್ಟ್
ಚೆಪಾಕ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಉತ್ತಮ ನೆರವು ನೀಡುವಂತಾ ಪಿಚ್. ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುವ ಪಿಚ್ ಇದಾಗಿದ್ದರೂ ಈ ಬಾರಿಯ ಐಪಿಎಲ್‌ನಲ್ಲಿ ಇಲ್ಲಿ ಉತ್ತಮವಾಗಿ ರನ್ ಕೂಡ ಹರಿದು ಬಂದಿದೆ. 180ಕ್ಕಿಂತ ಹೆಚ್ಚಿನ ರನ್‌ಗಳಿಸಿದರೆ ಇಲ್ಲಿ ರಕ್ಷಣೆ ಮಾಡಿಕೊಳ್ಳುವ ಅವಕಾಶವಿದೆ.
ಸಂಭಾವ್ಯ ಆಡುವ ಬಳಗ
ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್/ಉಮ್ರಾನ್ ಮಲಿಕ್, ಮಯಾಂಕ್ ಮಾರ್ಕಾಂಡೆ, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್ ಮತ್ತು ಟಿ ನಟರಾಜನ್.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ&ವಿಕೆಟ್ ಕೀಪರ್), ಮಥೀಶ ಪತಿರಾನ, ಮಹೇಶ್ ತೀಕ್ಷಣ ಮತ್ತು ತುಷಾರ್ ದೇಶಪಾಂಡೆ.












Click it and Unblock the Notifications