IPL 2023, MI vs PBKS: ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್: ಪ್ರಿವ್ಯೂ, ಸಂಭಾವ್ಯ XI, ಪಿಚ್ ರಿಪೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಶನಿವಾರ ಎರಡು ಪಂದ್ಯಗಳು ಆಯೋಜನೆಯಾಗಲಿದ್ದು ಎರಡನೇ ಮುಖಾಮುಖಿಯಲ್ಲಿ ಮುಂಬೈ ಇಮಡಿಯ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೆನೆಸಾಟವನ್ನು ನಡೆಸಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಈ ಪಂದ್ಯ ಕುತೂಹಲ ಮೂಡಿಸಿದೆ. ಈ ಆವೃತ್ತಿಯ 31ನೇ ಪಂದ್ಯ ಇದಾಗಿದೆ.
ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ ತಂಡ ಈ ಬಾರಿಯ ಆವೃತ್ತಿಯಲ್ಲಿ ಸತತ ಎರಡು ಸೋಲು ಅನುಭವಿಸುವ ಮೂಲಕ ಕಳಪೆ ಆರಂಭವನ್ನು ಪಡೆದುಕೊಂಡಿತ್ತು. ಆದರೆ ಅದಾದ ಬಳಿಕ ಸತತ ಮೂರು ಪಂದ್ಯಗಳಲ್ಲಿ ಮುಂಬೈ ಜಯಭೇರಿ ಬಾರಿಸಿದ್ದು ಆತ್ಮವಿಶ್ವಾಸದಲ್ಲಿದೆ. 6 ಅಂಕಗಳನ್ನು ಹೊಂದಿರುವ ಮುಂಬೈ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಉತ್ತಮ ಆರಂಭವನ್ನು ಪಡೆದುಕೊಂಡರೂ ಬಳಿಕ ಅಸ್ಥಿತ ಪ್ರದರ್ಶನ ನೀಡುತ್ತಿದೆ. ಆರು ಪಂದ್ಯಗಳನ್ನು ಆಡಿರುವ ಪಂಜಾಬ್ ಕಿಂಗ್ಸ್ 3 ಗೆಲುವು ಸಾಧಿಸಿದ್ದು 6 ಅಂಗಳನ್ನು ಪಡೆದುಕೊಂಡಿದೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧದ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಪ್ರಿಲ್ 22 ಶನಿವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾಸದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
PBKS vs RCB: 3ನೇ ಗೆಲುವು ಸಾಧಿಸಿದ ಆರ್‌ಸಿಬಿ; ಗೆದ್ದ ಬಳಿಕ 'ನಾಯಕ' ವಿರಾಟ್ ಕೊಹ್ಲಿ ಹೇಳಿದ್ದಿಷ್ಟು!
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಮುಂಬೈನ ವಾಂಕೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಅದ್ಭುತವಾಗಿ ನೆರವಾಗುವ ಗುಣ ಹೊಂದಿದೆ. ಇನ್ನಿಂಗ್ಸ್‌ನ ಆರಂಭದಿಂದಲೇ ಬ್ಯಾಟರ್‌ಗಳಿಗೆ ದೊಡ್ಡ ಹೊಡೆಗಳಿಗೆ ನೆರವಾಗುವಂತೆ ಪಿಚ್ ವರ್ತಿಸುವುದು ಇಲ್ಲಿ ಸಾಮಾನ್ಯವಾಗಿದೆ. ಬೌಂಡರಿ ಹತ್ತಿರದಲ್ಲಿರುವುದು ಹಾಗೂ ಎರಡೂ ತಂಡಗಳ ಬ್ಯಾಟರ್‌ಗಳಿಗೆ ನೆರವು ನೀಡುವ ಕಾರಣ ಇಲ್ಲಿ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ.
ಹವಾಮಾನ ವರದಿ: ಮುಂಬೈನಲ್ಲಿ ಪಂದ್ ನಡೆಯುತ್ತಿದ್ದು ಮಳೆಯಾಗುವ ಆತಂಕ ಇಲ್ಲ. ವಾತಾವರಣ ಉಷ್ಣಾಂಶ 27-32 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದ್ದು ದಿನವಿಡಿ ವಾತಾವರಣದಲ್ಲಿ ಆರ್ದ್ರತೆ ಇರಲಿದೆ.
Mohammed Siraj: ಆರ್‌ಸಿಬಿಗೆ ಆನೆಬಲ ತಂದುಕೊಟ್ಟ ಸಿರಾಜ್: ಯಶಸ್ಸಿಗೆ "ಆ ದಿನಗಳ" ಪರಿಶ್ರಮ ಕಾರಣ ಎಂದ ವೇಗಿ!
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
t












Click it and Unblock the Notifications