IPL 2023, ಮುಂಬೈ ಇಂಡಿಯನ್ಸ್‌ಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ; ಪಿಚ್ ರಿಪೋರ್ಟ್

ಐಪಿಎಲ್ 16ನೇ ಆವೃತ್ತಿಯ ಪಂದ್ಯಗಳು ರೋಚಕವಾಗಿ ಸಾಗುತ್ತಿದ್ದಯ ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಯಾರಿಗೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಐದು ಬಾರಿಯ ಚಾಂಪಿಯನ್ ತಂಡವಾಗಿರುವ ಮುಂಬೈ ಇಂಡಿಯನ್ಸ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ತಿಣುಕಾಡುತ್ತಿದೆ. ತಂಡದಿಂದ ಸ್ಥಿರ ಪ್ರದರ್ಶನ ಬಾರದಿರುವುದು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಹೀಗಾಗಿ ಅಂಕಪಟ್ಟಿಯಲ್ಲಿಯೂ ಮುಂಬೈ ಇಂಡಿಯನ್ಸ್ ಹಿಂದುಳಿಯುವಂತಾಗಿದೆ. ಮುಂಬೈ ಇಂಡಿಯನ್ಸ್ 7 ಪಂದ್ಯಗಳನ್ನು ಆಡಿದ್ದು 3 ಗೆಲುವು ಸಾಧಿಸಿದ್ದರೆ 4 ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ 6 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ.

IPL 2023, Match 42, MI vs RR Preview, Predicted Playing 11, Pitch Report

IPL 2023: ಟೂರ್ನಿ ಮುಗಿದ ಬಳಿಕ ಈ 5 ಯುವ ಆಟಗಾರರು ಟೀಮ್ ಇಂಡಿಯಾ ಸೇರುವುದು ಪಕ್ಕಾ!

ಇತ್ತ ರಾಜಸ್ಥಾನ್ ರಾಯಲ್ಸ ತಂಡ ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಉತ್ತಮ ಪ್ರದರ್ಶನ ನೀಡುತ್ತಾ ಗೆಲುವು ಸಾಧಿಸುತ್ತಿದ್ದ ಆರ್‌ಆರ್ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡು ಹಿನ್ನಡೆ ಅನುಭವಿಸಿತ್ತು. ಬಳಿಕ ಸಿಎಸ್‌ಕೆ ವಿರುದ್ಧ ಅಮೋಘ ಗೆಲುವು ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧವೂ ಮೇಲುಗೈ ಸಾಧಿಸುವ ಆತ್ಮವಿಶ್ವಾಸದಲ್ಲಿದೆ ಆರ್‌ಆರ್ ತಂಡ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧದ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಪ್ರಿಲ್ 30 ಭಾನುವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಈ ಒಬ್ಬ ಆಟಗಾರನನ್ನು ಬಿಟ್ಟು LSG ತಂಡವನ್ನು ಯೋಚಿಸಲೂ ಸಾಧ್ಯವಿಲ್ಲ: ಆರ್‌ಪಿ ಸಿಂಗ್

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರಣ ಮತ್ತೊಂದು ಹೈಸ್ಕೋರಿಂಗ್ ಪಂದ್ಯವಾಗುವ ನಿರೀಕ್ಷೆಯಿದೆ. ಇಲ್ಲಿ ಚೆಂಡು ಸರಾಗವಾಗಿ ಬ್ಯಾಟ್‌ಗೆ ಬರುವ ಕಾರಣ ಬ್ಯಾಟರ್‌ಗಳಿಗೆ ರನ್‌ಗಳಿಸಲು ಸುಲಭವಾಗಿದ್ದ ಬೌಲರ್‌ಗಳಿಗೆ ಅಗ್ನಿಪರೀಕ್ಷೆಯುಂಟಾಗಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ಕೈಮೇಲಾಗುವ ಸಾಧ್ಯತೆಯಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ 170-190 ಆಗಿದೆ.
ಹವಾಮಾನ ವರದಿ: ಪಂದ್ಯದ ದಿನ ಮಳೆಯಾಗುವ ಸಾಧ್ಯತೆಯಿಲ್ಲ. ಇನ್ನು ಪಂದ್ಯದ ಸಂದರ್ಭದಲ್ಲಿ 28-33 ಡಿಗ್ರಿ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.

ಸಂಭಾವ್ಯ ಆಡವ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ರಿಲೆ ಮೆರೆಡಿತ್

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ಧ್ರುವ ಜುರೆಲ್, ರವಿ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+