IPL 2023: ಗುಜರಾತ್ ಟೈಟನ್ಸ್ vs ಲಕ್ನೋ ಸೂಪರ್ ಜೈಂಟ್ಸ್: ಸೋದರರ ಸೆಣೆಸಾಟಕ್ಕೆ ವೇದಿಕೆ ಸಿದ್ಧ!
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾನುವಾರ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದ ಕಾರಣ ಈ ಪಂದ್ಯ ಈಗ ಸೋದರರ ಸೆಣೆಸಾಟವಾಗಿ ಮಾರ್ಪಟ್ಟಿದೆ. ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದರೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವ ಕೃನಾಲ್ ಪಾಂಡ್ಯ ಹೆಗಲೇರಿದೆ. ಹೀಗಾಗಿ ಭಾನುವಾರದ ಪಂದ್ಯ ವಿಶೇಷ ಕಾರಣಕ್ಕೆ ಕುತೂಹಲ ಮೂಡಿಸಿದೆ.
ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿಯೂ ಅಮೋಘ ಪ್ರದರ್ಶನ ನೀಡುತ್ತಿದ್ದು ಅಗ್ರಸ್ಥಾನದಲ್ಲಿ ಮುಂದುವರಿದಿದೆ. ಶುಕ್ರವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 9 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದು ಅಂಕಪಟ್ಟಿಯಲ್ಲಿ ಉಳಿದ ಎಲ್ಲಾ ತಂಡಗಳಿಗಿಂತಲೂ ಭಾರೀ ಮುನ್ನಡೆಯಲ್ಲಿದೆ. ಆಡಿರುವ 10 ಪಂದ್ಯಗಳಲ್ಲಿ 7 ಗೆಲುವು ಸಾಧಿಸಿರುವ ಜಿಟಿ 14 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ.

ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯ ಅಂತಿಮ ಘಟ್ಟಕ್ಕೆ ತಲುಪುತ್ತಿಂತೆಯೇ ಮಂಕಾದಂತೆ ಗೋಚರಿಸುತ್ತಿದೆ. ಕಳೆದ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಳೆಯಿಂದಾಗಿ ರದ್ದಾಗಿದ್ದರೆ ಅದಕ್ಕೂ ಹಿಂದಿನ ಮೂರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರವೇ ಕಂಡಿದೆ. ಒಟ್ಟಾರೆಯಾಗಿ ಆಡಿರುವ 10 ಪಂದ್ಯಗಳಲ್ಲಿ ಐದು ಗೆಲುವು ಸಾಧಿಸಿರುವ ಎಲ್‌ಎಸ್‌ಜಿ 11 ಅಂಕಗಳನ್ನು ಗಳಿಸಿದ್ದು ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
IPL 2023: LSG ತಂಡದಲ್ಲಿ ರಾಹುಲ್ ಬದಲಿಗೆ ಮತ್ತೋರ್ವ ಕನ್ನಡಿಗನಿಗೆ ಅವಕಾಶ: ಲಕ್ನೋ ತಂಡಕ್ಕೆ ಕರುಣ್ ಸೇರ್ಪಡೆ
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧದ ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ರೀಡಾಂಗಣದಲ್ಲಿ ಮೇ 7 ಭಾನುವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
GT vs LSG ಪಿಚ್ ರಿಪೋರ್ಟ್
ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಸಮತೋಲಿತವಾಗಿ ಬೆಂಬಲ ನೀಡಲಿದೆ. ಇಲ್ಲಿ ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳು ಪರಿಣಾಮಕಾರಿಯಾಗಲಿದ್ದು ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರವಹಿಸಲಿದ್ದಾರೆ. ಇನ್ನು ಬ್ಯಾಟರ್‌ಗಳು ಆರಂಭದಲ್ಲಿ ಎಚ್ಚರಿಕೆಯ ಪ್ರದರ್ಶನ ನೀಡಿದರೆ ನಂತರ ಉತ್ತಮವಾಗಿ ರನ್‌ಗಳಿಸುವ ಅವಕಾಶ ದೊರೆಯಲಿದೆ.
IPL 2023: ಗುಜರಾತ್ ಟೈಟನ್ಸ ವಿರುದ್ಧ ಸೋತ ರೀತಿಗೆ ಕಿಡಿಕಾರಿದ ರಾಜಸ್ಥಾನ್ ರಾಯಲ್ಸ್ ಕೋಚ್ ಸಂಗಕ್ಕರ
ಹವಾಮಾನ ವರದಿ: ಅಹ್ಮದಾಬಾದ್‌ನಲ್ಲಿ ಭಾನುವಾರ ಪಂದ್ಯಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಹಾಗಾಗಿ ಮಳೆಯ ಆತಂಕವಿಲ್ಲ. ಉಷ್ಣಾಂಶ 29-39 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ
ಲಕ್ನೋ ಸೂಪರ್ ಜೈಂಟ್ಸ್: ಮನನ್ ವೋಹ್ರಾ, ಕೇಲ್ ಮೇಯರ್ಸ್, ಆಯುಷ್ ಬದೋನಿ, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್












Click it and Unblock the Notifications