IPL 2023: ಕೊಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ಪಂದ್ಯದ ಮಾಹಿತಿ, ಸಂಭಾವ್ಯ ಆಡುವ ಬಳಗ
ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯ 53ನೇ ಪಂದ್ಯ ಸೋಮವಾರ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಪಂದ್ಯದಲ್ಲಿ ಸೆಣೆಸಾಟ ನಡೆಸಲಿದೆ. ಈ ಟೂರ್ನಿಯಲ್ಲಿ ಪ್ಲೇ ಆಫ್ ಹಂತಕ್ಕೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಎರಡು ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿದ್ದು ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸಲಿದೆ.
ಪಂಜಾಬ್ ಕಿಂಗ್ಸ್ ತಮಡ ಈವರೆಗೆ ಆಡಿರುವ 10 ಪಂದ್ಯಗಳಲ್ಲಿ ತಲಾ 5 ಗೆಲುವು ಹಾಗೂ ಸೋಲು ಕಂಡಿದ್ದು 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ವಿರುದ್ಧ 6 ವಿಕೆಟ್‌ಗಳ ಅಂತರದ ಸೋಲು ಅನುಭವಿಸಿರುವುದು ತಂಡಕ್ಕೆ ಹಿನ್ನಡೆಯುಂಟು ಮಾಡಿದೆ. ತಂಡದ ಬ್ಯಾಟಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿದ್ದರೂ ಬೌಲಿಂಗ್ ವಿಭಾಗದಿಂದ ನಿರೀಕ್ಷಿತ ಪ್ರದರ್ಶನ ಬಾರದ ಕಾರಣ ಬೃಹತ್ ಮೊತ್ತ ಗಳಿಸಿದ ಹೊರತಾಗಿಯೂ ಸೋಲು ಕಾಣುವಂತಾಯಿತು.

ಮತ್ತೊಂದೆಡೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಈವರೆಗೆ 10 ಪಂದ್ಯಗಳನ್ನು ಆಡಿದ್ದು ಅದರಲ್ಲಿ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಆರು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಕೆಕೆಆರ್ 8ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಿನ ಅಂಚಿಗೆ ತಲುಪಿ ಗೆಲುವು ಸಾಧಿಸಿರುವುದು ತಂಡದ ಹುಮ್ಮಸ್ಸು ಹೆಚ್ಚಿಸಿದೆ. ಹೀಗಾಗಿ ಸೋಮವಾರದ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ಬದಲಿದೆ ಎಂಬುದು ಕುತೂಹಲ ಮೂಡಿಸಿದೆ.
IPL 2023: ಪ್ಲೇಆಫ್ ಹಾದಿ ಕಠಿಣಗೊಳಿಸಿದ RCB: ಕೊನೆಯ 4 ಪಂದ್ಯಗಳಲ್ಲಿ ಫಾಫ್ ಪಡೆಗೆ ಇರುವ ಸವಾಲು ಹೇಗಿದೆ?
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಕ್ರೀಡಾಂಗಣದಲ್ಲಿ ಮೇ 8 ಸೋಮವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
DC vs rcb: ಸೋತರೂ ಮಿಂಚಿದ ಮಹಿಪಾಲ್ ಲೋಮ್ರೋರ್: ವಿಶೇಷ ಪ್ರದರ್ಶನದ ಬಗ್ಗೆ ಹೇಳಿದ್ದಿಷ್ಟು!
GT vs LSG ಪಿಚ್ ರಿಪೋರ್ಟ್
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ಹೇಳಿ ಮಾಡಿಸಿದ ಪಿಚ್. ಸೋಮವಾರದ ಪಂದ್ಯದಲ್ಲಿಯೂ ಪಿಚ್ ಹೀಗೆಯೇ ವರ್ತಿಸುವ ಸಾಧ್ಯತೆಯಿದ್ದು ಬ್ಯಾಟರ್‌ಗಳಿಗ ಸರಾಗವಾಗಿ ರ್‌ಗಳಿಸುವ ಅವಕಾಶ ನೀಡಲಿದೆ. ಹೀಗಾಗಿ ದೊಡ್ಡ ಮೊತ್ತದ ಪ್ರದರ್ಶನ ಬರುವ ಸಾಧ್ಯತೆಯಿದೆ. ಇಲ್ಲಿ ನಡೆದ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕೊಲ್ಕತ್ತಾ ಮೊದಲಿಗೆ ಬ್ಯಾಟಿಂಗ್ ನಡೆಸಿ 179 ರನ್‌ಗಳನ್ನು ಕಲೆಹಾಕಿದ್ದರೂ ಜಿಟಿ ಆ ಮೊತ್ತವನ್ನು ಸರಾಗವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಗಿತ್ತು. ಇಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ.
ಹವಾಮಾನ ವರದಿ: ಕೊಲ್ಕತ್ತಾದಲ್ಲಿ ಸೋಮವಾರ ಪಂದ್ಯಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದ್ದು ಮಳೆಯ ಆತಂಕವಿಲ್ಲ. ಉಷ್ಣಾಂಶ 29-39 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.
ಇತ್ತಂಡಗಳ ಆಡುವ ಬಳಗ
ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್: ಅಥರ್ವ ಟೈಡೆ, ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರನ್, ರಾಹುಲ್ ಚಾಹರ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್












Click it and Unblock the Notifications