IPL 2023: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್: ಸಂಭಾವ್ಯ ಆಡುವ ಬಳಗ, ಪಿಚ್ ರೀಪೊರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೆಣೆಸಾಡಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತವರು ಮೈದಾನ ಚೆಪಾಕ್‌ನಲ್ಲಿ ಈ ಪಂದ್ಯ ನಡೆಯಲಿದ್ದು ಮತ್ತೊಂದು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಆಘಾತ ನೀಡಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಆರಂಭಿಕ ಪಂದ್ಯಗಳಲ್ಲಿ ಸೋಲಿನ ಮೇಲೆ ಸೋಲು ಅನುಭವಿಸಿದ್ದು ಡೆಲ್ಲಿ ಅದ್ಭುತವಾಗಿ ತಿರುಗಿ ಬೀಳುವಲ್ಲಿ ಯಶಸ್ವಿಯಾಗಿದ್ದು ಬಲಿಷ್ಠ ತಂಡಗಳಿಗೆ ಆಘಾತ ನೀಡುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ 11 ಪಂದ್ಯಗಳನ್ನು ಆಡಿದ್ದು ಅದರಲ್ಲಿ 6 ಗೆಲುವು ಹಾಗೂ ನಾಲ್ಕು ಸೋಲು ಕಂಡಿದೆ. ಒಂದು ಪಂದ್ಯ ಮಳೆಗೆ ಆಹುತಿಯಾಗಿರುವ ಕಾರಣ ಸಿಎಸ್‌ಕೆ ಖಾತೆಯಲ್ಲಿ 13 ಅಂಕಗಳಿದ್ದು ಅಂಕಪಟ್ಟಿಯಲ್ಲಿ ಸದ್ಯ 2ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದು ಎರಡನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸುವ ಲೆಕ್ಕಾಚಾರದಲ್ಲಿದೆ ಸಿಎಸ್‌ಕೆ ತಂಡ.

ipl 2023

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಐದು ಪಂದ್ಯಗಳಲ್ಲಿ ಸತತ ಐದು ಸೋಲು ಅನುಭವಿಸಿದ ಬಳಿಕ ಅದ್ಭುತವಾಗಿ ತಿರುಗಿಬಿದ್ದಿದೆ. ಮೊದಲ ಐದು ಪಂದ್ಯಗಳಲ್ಲಿ ಸೋಲು ಕಂಡಿದ್ದರೆ ನಂತರದ ಐದು ಪಂದ್ಯಗಳಲ್ಲಿ ಡಿಸಿ ತಂಡ ನಾಲ್ಕು ಗೆಲುವು ಸಾಧಿಸಿದೆ. ಸದ್ಯ 8 ಅಂಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿಯೇ ಮುಂದುವರಿಸಿದ್ದರೂ ಪ್ಲೇಆಫ್‌ಗೇರುವ ತನ್ನ ಹೋರಾಟವನ್ನು ಡಿಸಿ ತಂಡ ಕೈಬಿಟ್ಟಿಲ್ಲ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಚೆನ್ನೈ ಸೂಪರ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧದ ಈ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೇ 10 ಬುಧವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

Asia Cup 2023: ಪಾಕಿಸ್ತಾನದ ಕೈತಪ್ಪಲಿದೆ ಏಷ್ಯಾ ಕಪ್ ಆತಿಥ್ಯ?: ಶ್ರೀಲಂಕಾ ಆತಿಥ್ಯ ಸಾಧ್ಯತೆ

ಪಿಚ್ ರಿಪೋರ್ಟ್ ಹೀಗಿದೆ

ಚೆನ್ನೈನ ಚೆಪಾಲ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ಪಿಚ್ ಆಗಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಮಾತ್ರವೇ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.

ಹವಾಮಾನ ವರದಿ: ಪಂದ್ಯದ ಶನಿವಾದ ಪಂದ್ಯದ ಅವಧಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. 27ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇರುವ ನಿರೀಕ್ಷೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಲ & ವಿಕೆಟ್ ಕೀಪರ್), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+