IPL 2023, ಟಾಪ್-2 ಮೇಲೆ LSG ಕಣ್ಣು: ಪ್ಲೇಆಫ್ ಪ್ರವೇಶದ ಅದೃಷ್ಟ ಪರೀಕ್ಷೆಗಿಳಿಯಲಿದೆ KKR
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಕೊನೆಯ ಹಂತದ ಪಂದ್ಯಗಳು ನಡೆಯುತ್ತಿದೆ. ಶನಿವಾರ ನಡೆಯುವ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಎದುರಿಸಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್ ಪ್ರವೇಶದ ಸ್ಪರ್ಧೆಯಲ್ಲಿ ಇನ್ನು ಕೂಡ ಅಧಿಕೃತವಾಗಿ ಉಳಿದುಕೊಂಡಿದ್ದು ತನ್ನ ಕೊನೆಯ ಪ್ರಯತ್ನವನ್ನು ಅದು ಶನಿವಾರ ನಡೆಸಲಿದೆ. ಮತ್ತೊಂದೆಡೆ ಲಕ್ನೋ ಸೂಪೆರ್ ಜೈಂಟ್ಸ್ ತಂಡ ಪ್ಲೇಆಫ್ ಸ್ಥಾನ ಖಚಿತಪಡಿಸಿಕೊಳ್ಳುವುದರ ಜೊತೆಗೆ ಅಗ್ರ ಎರಡಲ್ಲಿ ಸ್ಥಾನ ಪಡೆಯುವತ್ತ ಚಿತ್ತ ನೆಟ್ಟಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂ ಡಆಡಿರುವ 13 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 12 ಅಂಕಗಳನ್ನು ಗಳಿಸಿಕೊಂಡಿದೆ. ಅಲ್ಲದೆ ನೆಟ್ ರನ್‌ರೇಟ್‌ನಲ್ಲಿಯೂ ಕೆಕೆಆರ್ ಭಾರೀ ಹಿಂದಿದೆ. ಹೀಗಾಗಿ ಪ್ಲೇಆಫ್‌ಗೇರುವ ಬಹುತೇಕ ಅವಕಾಶವನ್ನು ಕೆಕೆಆರ್ ಕಳೆದುಕೊಂಡಿದ್ದರೂ ಸಣ್ಣ ಅವಕಾಶವೊಂದು ತೆರೆದೇ ಇದೆ. ಹೀಗಾಗಿ ಈ ತನ್ನ ಅದೃಷ್ಟ ಪರೀಕ್ಷೆಯನ್ನು ಮಾಡಿಕೊಳ್ಳುವ ಜೊತೆಗೆ ಎಲ್‌ಎಸ್‌ಜಿ ತಂಡಕ್ಕೆ ಆಘಾತ ನೀಡಲು ಮುಂದಾಗಿದೆ ಕೆಕೆಆರ್.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಶನಿವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಅಂತರದಿಂದ ಗೆದ್ದರೆ ಪ್ಲೇಆಫ್‌ಗೆ ಅಧಿಕೃತವಾಗಿ ಪ್ರವೇಶ ಪಡೆಯುವುದರ ಜೊತೆಗೆ ಅಗ್ರ ಎರಡಲ್ಲಿ ಸ್ಥಾನ ಪಡೆಯುವ ಅವಕಾಶವೂ ಇದೆ. ಹೀಗಾಗಿ ಈ ನಿಟ್ಟಿನಲ್ಲಿ ತನ್ನ ಪ್ರಯತ್ನ ನಡೆಸಲಿದೆ.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧದ ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮೇ 20ರಂದು ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
IPL 2023: 6ನೇ ಐಪಿಎಲ್ ಶತಕ ಸಿಡಿಸಿದ ವಿರಾಟ್: ಕ್ರಿಸ್ ಗೇಲ್ ದಾಖಲೆ ಸರಿಗಟ್ಟಿದ ಆರ್‌ಸಿಬಿ ದಿಗ್ಗಜ
ಪಿಚ್ ರಿಪೋರ್ಟ್ ಹೀಗಿದೆ
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಸ್ವರ್ಗ ಎನಿಸಿಕೊಂಡಿದೆ. ಆರಂಭದಿಂದಲೇ ಇಲ್ಲಿ ಬ್ಯಾಟರ್‌ಗಳಿಗೆ ಅದ್ಭುತ ನೆರವು ದೊರೆಯಲಿದ್ದು ಬೌಲರ್‌ಗಳಿಗೆ ಇಲ್ಲಿ ಕಠಿಣ ಸವಾಲು ಎದುರಾಗಲಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಹಾಗೂ ಎಲ್‌ಎಸ್‌ಜಿ ಎರಡು ತಂಡಗಳು ಕೂಡ ಉತ್ತಮ ಸ್ಪಿನ್ನರ್‌ಗಳನ್ನು ಹೊಂದಿದ್ದು ಈ ಪಂದ್ಯ ಕುತೂಹಲ ಮೂಡಿಸಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಶ್ ಶರ್ಮಾ, ವರುಣ್ ಚಕ್ರವರ್ತಿ
ಲಕ್ನೋ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರೇರಕ್ ಮಂಕಡ್, ಕೃನಾಲ್ ಪಾಂಡ್ಯ (ನಾಯಕ), ಮಾರ್ಕಸ್ ಸ್ಟೋಯ್ನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ರವಿ ಬಿಷ್ಣೋಯ್, ಸ್ವಪ್ನಿಲ್ ಸಿಂಗ್, ಮೊಹ್ಸಿನ್ ಖಾನ್












Click it and Unblock the Notifications