LSG vs MI: ಎಲಿಮಿನೇಟರ್ ಪಂದ್ಯದಲ್ಲಿ ಆಟಗಾರರು ನಿರ್ಮಿಸಬಹುದಾದ ದಾಖಲೆಗಳ ಪಟ್ಟಿ

IPL 2023: MI vs LSG eliminator match players approaching milestones and records

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ನಿನ್ನೆ ( ಮೇ 23 ) ನಡೆದ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿ ಪಂದ್ಯ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶಿಸಿದ್ದರೆ, ಸೋತ ಗುಜರಾತ್ ಟೈಟನ್ಸ್ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಪ್ರವೇಶಿಸಿದೆ.

ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಗುಜರಾತ್ ಟೈಟನ್ಸ್ ಎರಡನೇ ಕ್ವಾಲಿಫಯರ್ ಆಡಲಿದ್ದು, ಇಂದು (ಮೇ 24 ) ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲಲಿರುವ ತಂಡವನ್ನು ಎದುರಿಸಲಿದೆ.

ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದರೆ, ಸೋಲಲಿರುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ಇದ್ದು, ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಹೆಚ್ಚಾಗಿದೆ.

ಒಂದೆಡೆ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಬಹುದು ಎಂದು ಎಂಬ ಚರ್ಚೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಈ ಹಣಾಹಣಿಯಲ್ಲಿ ವಿವಿಧ ಆಟಗಾರರು ವಿವಿಧ ದಾಖಲೆಗಳನ್ನು ನಿರ್ಮಿಸುವ ಹಾಗೂ ಮೈಲಿಗಲ್ಲುಗಳನ್ನು ಸೃಷ್ಟಿಸುವ ಸಾಧ್ಯತೆಗಳಿವೆ. ಅಂತಹ ಆಟಗಾರರು ಯಾರು ಹಾಗೂ ಆ ದಾಖಲೆಗಳು ಯಾವುವು ಎಂಬ ಮಾಹಿತಿ ಈ ಕೆಳಕಂಡಂತಿದೆ..

* 98 ಕ್ಯಾಚ್‌ಗಳನ್ನು ಪಡೆದುಕೊಂಡಿರುವ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಇನ್ನೆರಡು ಕ್ಯಾಚ್ ಹಿಡಿದರೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್ ಹಿಡಿದ ನಾಲ್ಕನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.
* ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 296 ವಿಕೆಟ್‌ಗಳನ್ನು ಪಡೆದಿರುವ ಪಿಯೂಷ್ ಚಾವ್ಲಾ ಈ ಪಂದ್ಯದಲ್ಲಿ 4 ವಿಕೆಟ್ ಪಡೆದರೆ 300 ವಿಕೆಟ್ ಪಡೆದ ದಾಖಲೆ ಬರೆಯಲಿದ್ದಾರೆ.
* 2991 ಟಿ ಟ್ವೆಂಟಿ ರನ್‌ಗಳನ್ನು ಬಾರಿಸಿರುವ ದೀಪಕ್ ಹೂಡಾ ಈ ಪಂದ್ಯದಲ್ಲಿ 9 ರನ್ ಬಾರಿಸಿದರೆ 3000 ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ 396 ಬೌಂಡರಿ ಬಾರಿಸಿರುವ ಮಾರ್ಕಸ್ ಸ್ಟಾಯಿನಿಸ್ ಈ ಪಂದ್ಯದಲ್ಲಿ 4 ಬೌಂಡರಿ ಬಾರಿಸಿದರೆ 400 ಬೌಂಡರಿ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಮುಂಬೈ ಇಂಡಿಯನ್ಸ್ ಪರ 90 ಸಿಕ್ಸರ್ ಬಾರಿಸಿರುವ ಇಶಾನ್ ಕಿಶನ್ 10 ಸಿಕ್ಸರ್ ಬಾರಿಸಿದರೆ 100 ಸಿಕ್ಸರ್ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* ಮುಂಬೈ ಇಂಡಿಯನ್ಸ್ ಪರ 1990 ರನ್ ಬಾರಿಸಿರುವ ಇಶಾನ್ ಕಿಶನ್ 10 ಬಾರಿಸಿದರೆ 2000 ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
* 6409 ಟಿ ಟ್ವೆಂಟಿ ರನ್ ಬಾರಿಸಿರುವ ಸೂರ್ಯಕುಮಾರ್ ಯಾದವ್ 91 ರನ್ ಬಾರಿಸಿದರೆ 6500 ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+